ಅಕ್ಷರಸ್ಥರಿಂದಲೇ ಮತದಾನಕ್ಕೆ ನಿರುತ್ಸಾಹ!


Team Udayavani, May 15, 2018, 1:58 PM IST

m4-akhshara.jpg

ಮೈಸೂರು: ಪ್ರಜಾಪ್ರಭುತ್ವದ ಹಬ್ಬ ಎನಿಸಿರುವ ಚುನಾವಣೆಯಲ್ಲಿ ಮತದಾನ ಮಾಡಲು ನಗರ ಪ್ರದೇಶದ ಮತದಾರರು, ಅದರಲ್ಲೂ ಅಕ್ಷರಸ್ಥರು ಮತಗಟ್ಟೆಗೆ ಬರಲು ಹಿಂದೇಟು ಹಾಕಿರುವ ಬಗ್ಗೆ ಹಲವು ರೀತಿಯ ವಿಶ್ಲೇಷಣೆಗಳು ವಿಶ್ಲೇಷಣೆಗಳು ನಡೆಯುತ್ತಿವೆ. ಮತದಾರರು ಜಿಲ್ಲಾಡಳಿತವನ್ನು ದೂಷಿಸಿದರೆ, ಜಿಲ್ಲಾಡಳಿತ ಎಲ್ಲಾ ರೀತಿಯ ಪ್ರಯತ್ನವನ್ನೂ ಮಾಡಲಾಗಿದೆ. ಅದರ ಪರಿಣಾಮವೇ ಈ ಬಾರಿ ಶೇ.4 ಮತದಾನ ಹೆಚ್ಚಳವಾಗಿದೆ ಎನ್ನುತ್ತಿದೆ.

ನೈತಿಕ ಮತದಾನ ಜಾಗೃತಿ: ಮತದಾರರ ಪಟ್ಟಿಯಲ್ಲಿನ ಹತ್ತು ಹಲವು ಗೊಂದಲಗಳು ಮತದಾರರನ್ನು ಮತಟಗಟ್ಟೆಯಿಂದ ದೂರ ಉಳಿಯುವಂತೆ ಮಾಡುತ್ತಿದೆ. ಮತದಾರರನ್ನು ಮತಗಟ್ಟೆಗೆ ಕರೆತರುವ ಸಲುವಾಗಿಯೇ ಈ ಬಾರಿ ಮತದಾರರರಲ್ಲಿ ನೋಂದಣಿ ಮತ್ತು ನೈತಿಕ ಮತದಾನ ಕುರಿತು ಜಾಗೃತಿ ಮೂಡಿಸಲು ಸ್ವೀಪ್‌ ವತಿಯಿಂದ ವಿವಿಧ ರೀತಿಯ ಪ್ರಚಾರ ಕಾರ್ಯ ಕೈಗೊಂಡರೂ ಜಿಲ್ಲೆಯಲ್ಲಿ ಒಟ್ಟಾರೆ ಮತದಾನದ ಪ್ರಮಾಣ ಹೆಚ್ಚಳವಾಗಿದ್ದು, ಕೇವಲ ಶೇ.4 ಮಾತ್ರ!

ಗಿರಿಜನ ಹಾಡಿಗಳಲ್ಲಿ ಟಾಂಟಾಂ: ಮತದಾನದ ದಿನಾಂಕ ಹಾಗೂ ವೇಳೆಯನ್ನು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಹಾಗೂ ವಿಶೇಷವಾಗಿ ಹುಣಸೂರು, ಪಿರಿಯಾಪಟ್ಟಣ ಹಾಗೂ ಎಚ್‌.ಡಿ.ಕೋಟೆ ತಾಲೂಕಿನ ಗಿರಿಜನ ಹಾಡಿಗಳಲ್ಲಿ ಟಾಂಟಾಂ ಮೂಲಕ ಪ್ರಚಾರ ಮಾಡಲಾಗಿದೆ. ಹುಣಸೂರು, ಪಿರಿಯಾಪಟ್ಟಣ, ಕೆ.ಆರ್‌.ನಗರ ಹಾಗೂ ನಂಜನಗೂಡು ತಾಲೂಕು ಕೇಂದ್ರಗಳಲ್ಲಿ ಮತದಾರರ ಜಾಗೃತಿಗಾಗಿ ಬೈಕ್‌ ಜಾಥಾಗಳನ್ನು ನಡೆಸಲಾಗಿದೆ.

ಜಿಲ್ಲೆಯಲ್ಲಿ 6 ಲಕ್ಷಕ್ಕೂ ಹೆಚ್ಚು ಮತದಾನದ ಮಾರ್ಗದರ್ಶನ ಕುರಿತ ಕಿರು ಹೊತ್ತಿಗೆಗಳನ್ನು ಮತದಾರರ ಚೀಟಿ ಜೊತೆಗೆ ವಿತರಿಸಲಾಗಿತ್ತು.
ಮತಯಂತ್ರ, ವಿವಿ ಪ್ಯಾಟ್‌ಗಳನ್ನು ಬಳಸುವ ಬಗ್ಗೆ ಮೈಸೂರು ನಗರದ ಎಲ್ಲಾ ಮಾಲ್‌ಗ‌ಳಲ್ಲಿ, ಮೈಸೂರು ಅರಮನೆ, ಮೃಗಾಲಯ ಮತ್ತು ಸರ್ಕಾರಿ ಕಚೇರಿಗಳಲ್ಲಿ ಪ್ರಾತ್ಯಕ್ಷತೆ ನೀಡಲಾಗಿತ್ತು.

ವಿಶೇಷ ಕಾರ್ಯಕ್ರಮ: ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಕಡಿಮೆ ಮತದಾನ ಆಗಿರುವ ಶೇ.10 ಮತಗಟ್ಟೆಗಳನ್ನು ಗುರುತಿಸಿ, ಸ್ವೀಪ್‌ ಸಮಿತಿಯಿಂದ ಅಂತಹ ಮತಗಟ್ಟೆಗಳಿಗೆ ವಿಶೇಷ ಗಮನಹರಿಸಿ ಪ್ರತಿ ಮನೆಗೂ ಭೇಟಿ ನೀಡಿ ಮತದಾನ ಮಾಡಲು ಪ್ರೇರೇಪಿಸಲಾಗಿತ್ತು. ಅದರಲ್ಲೂ ವಿಶೇಷವಾಗಿ 2013ರ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ನಗರದ ಚಾಮರಾಜ(ಶೇ.55.11), ಕೃಷ್ಣರಾಜ(ಶೇ.58.49) ಮತ್ತು ನರಸಿಂಹರಾಜ ಕ್ಷೇತ್ರ(ಶೇ.54.44) ಮತದಾನವಾಗಿತ್ತು.

ಹೀಗಾಗಿ ಮತದಾನದ ಪ್ರಮಾಣವನ್ನು ಉತ್ತಮಪಡಿಸಲು ಆಯಾ ಪ್ರದೇಶದಲ್ಲಿ ಸ್ವೀಪ್‌ ಸಮಿತಿಯಿಂದ ಮನೆ ಮನೆಗೆ ಭೇಟಿ ನೀಡಿ ಕಡ್ಡಾಯ ಮತದಾನದ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಲ್ಲದೆ, ಮತದಾರರು ಕಡ್ಡಾಯವಾಗಿ ಮತಗಟ್ಟೆಗಳಿಗೆ ಬಂದು ಮತದಾನ ಮಾಡುವ ಬಗ್ಗೆ ಮಾನವ ಸರಪಳಿ, ಜಾಥಾ ಮೊದಲಾದ ಕಾರ್ಯಕ್ರಮಗಳ ಮೂಲಕ ತಿಳಿವಳಿಕೆ ಮೂಡಿಸಲಾಗಿತ್ತು.

ವಿಶೇಷ ಮತಗಟ್ಟೆ: ಮಹಿಳಾ ಮತದಾರರನ್ನು ಆಕರ್ಷಿಸಲು ಮಹಿಳಾ ಮತದಾರರು ಹೆಚ್ಚಿರುವ ಮತಗಟ್ಟೆಗಳಲ್ಲಿ ಕೆಲವನ್ನು ಆಯ್ಕೆ ಮಾಡಿಕೊಂಡು ಜಿಲ್ಲೆಯಲ್ಲಿ 24 ಮತಗಟ್ಟೆಗಳನ್ನು ಸಖೀ ಮತಗಟ್ಟೆಗಳೆಂದು ಹೆಸರಿಸಲಾಗಿತ್ತು.

ಗಿರಿಜನರನ್ನು ಮತಗಟ್ಟೆಗೆ ತರಲು ಎಚ್‌.ಡಿ.ಕೋಟೆ, ಹುಣಸೂರು, ಪಿರಿಯಾಪಟ್ಟಣಗಳಲ್ಲಿ ಆದಿವಾಸಿಗಳಿಗಾಗಿಯೇ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಇಷ್ಟೆಲ್ಲದರ ಮಧ್ಯೆಯೂ ನಗರ ಪ್ರದೇಶದ ಮತದಾರರು ಮತಗಟ್ಟೆಗೆ ಬರಲು ನಿರುತ್ಸಾಹ ತೋರಿದ್ದಾರೆ. ಇದರ ಪರಿಣಾಮ ಗ್ರಾಮೀಣ ಪ್ರದೇಶದಲ್ಲಿ ದಾಖಲೆಯ ಮತದಾನವಾಗಿದ್ದರೆ, ಮೈಸೂರು ನಗರದ ಕೃಷ್ಣರಾಜ-ಶೇ.58.86, ಚಾಮರಾಜ-ಶೇ.59.18 ಹಾಗೂ ನರಸಿಂಹರಾಜ ಕ್ಷೇತ್ರದಲ್ಲಿ ಶೇ.61.43 ಮತದಾನವಾಗಿದೆ.

ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿ ಪ್ರವೀಣ್‌ ಕುಮಾರ್‌ ಮನೆಗೆ ಚುನಾವಣಾ ಆಯೋಗದಿಂದ ನೀಡಲಾದ ಗುರುತಿನ ಚೀಟಿಯಲ್ಲಿ ಹೆಸರಿಸಲಾಗಿದ್ದ ಕನಕಗಿರಿ ಸರ್ಕಾರಿ ಶಾಲೆಯ ಮತಗಟ್ಟೆಗೆ ಮತದಾನ ಮಾಡಲು ಬೆಳಗ್ಗೆ 10ಗಂಟೆಗೆ ಉತ್ಸಾಹದಿಂದ ಹೋದರೆ, ಅಲ್ಲಿನ ಮತದಾರರ ಪಟ್ಟಿಯಲ್ಲಿ ಇವರ ಹೆಸರನ್ನೇ ತೆಗೆದುಹಾಕಲಾಗಿತ್ತು. ಮೂರ್‍ನಾಲ್ಕು ಮತಗಟ್ಟೆಗಳಲ್ಲಿ ವಿಚಾರಿಸಿದರೂ ಹೆಸರು ಪತ್ತೆಯಾಗಲಿಲ್ಲ.

ಹೀಗಾಗಿ ಸಹಾಯವಾಣಿ 1950ಗೆ ಕರೆ ಮಾಡಿದಾಗ ಮನೆಯಿಂದ 2 ಕಿಲೋ ಮೀಟರ್‌ ದೂರವಿರುವ ಗೌರಿಶಂಕರ ನಗರದ ಗೌರಿಶಂಕರ ಹೈಸ್ಕೂಲ್‌ ಮತಗಟ್ಟೆಗೆ ಹೋಗುವಂತೆ ತಿಳಿಸಲಾಯಿತು. ಈ ಹುಡುಕಾಟದ ಪರಿಣಾಮ ಮಧ್ಯಾಹ್ನ 3ಗಂಟೆ ವೇಳೆಗೆ ಮತದಾನ ಮಾಡಬೇಕಾಯಿತು. ಆದರೆ, ಮತಗಟ್ಟೆ ಬಗ್ಗೆ ಮಾಹಿತಿ ಇರುವ ಸಂದೇಶ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಭಾನುವಾರ ಮಧ್ಯಾಹ್ನ 3.20ಕ್ಕೆ ಮೊಬೈಲ್‌ಗೆ ಸಂದೇಶ ಬಂದಿದೆ. ಇಷ್ಟೆಲ್ಲಾ ಸುತ್ತಾಡಿಸಿದರೆ ಮತದಾರರು ಹೇಗೆ ಮತಗಟ್ಟೆಗೆ ಬರುತ್ತಾರೆ ಎಂದು ಪ್ರಶ್ನಿಸುತ್ತಾರೆ ಅವರು.

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.