ಠುಸ್ಸಾದ ಕರ್ನಾಟಕ ನಿರೀಕ್ಷೆ : ಗಗನಕ್ಕೇರಿ ಕುಸಿದ ಮುಂಬಯಿ ಶೇರು
Team Udayavani, May 15, 2018, 4:44 PM IST
ಮುಂಬಯಿ : ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬರುವುದೆಂಬ ವಿಶ್ವಾಸದಲ್ಲಿ ಇಂದು ಮಂಗಳವಾರದ ಬೆಳಗ್ಗಿನ ವಹಿವಾಟಿನಲ್ಲಿ 436 ಅಂಕಗಳ ಭರ್ಜರಿ ಏರಿಕೆಯನ್ನು ದಾಖಲಿಸಿದ್ದ ಮುಂಬಯಿ ಶೇರು ಪೇಟೆ, ಮಧ್ಯಾಹ್ನದ ವೇಳೆಗೆ ತನ್ನ ನಂಬಿಕೆ ಠುಸ್ಸಾಗುತ್ತಿರುವುದನ್ನು ಕಾಣುತ್ತಲೇ ಕುಸಿದು ಬಿದ್ದು 13 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 35,543.94 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ಜಾಗತಿಕ ಮಾರುಕಟ್ಟೆಗಳಲ್ಲಿ ದುರ್ಬಲ ಪ್ರವೃತ್ತಿ ತೋರಿ ಬಂದಿರುವುದು, ಡಾಲರ್ ಎದುರು ರೂಪಾಯಿ 28 ಪೈಸೆಯಷ್ಟು ಕುಸಿದಿರುವುದು ಮುಂತಾದ ಕಾರಣಗಳಿಂದಾಗಿಯೂ ಇಂದಿನ ವಹಿವಾಟನ್ನು ಸೆನ್ಸೆಕ್ಸ್ ನಿರಾಶಾದಾಯಕವಾಗಿ ಕೊನೆಗೊಳಿಸಿತು. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ 310.44 ಅಂಕಗಳನ್ನು ಸಂಪಾದಿಸಿತ್ತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು 4.70 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,929.20 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,779 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,028 ಶೇರುಗಳು ಮುನ್ನಡೆಗೆ ಗುರಿಯಾದವು; 1,611 ಶೇರುಗಳು ಹಿನ್ನಡೆ ಕಂಡವು; 140 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.