ಗೆಲುವು ಪ್ರಶಾಂತ್‌, ಶರತ್‌, ದೀಪಕ್‌ ಮಡಿಲಿಗೆ ಅರ್ಪಣೆ: ಸಂಸದ ನಳಿನ್‌


Team Udayavani, May 16, 2018, 7:00 AM IST

1505mlr27.jpg

ಮಂಗಳೂರು: ದ.ಕ.ಜಿಲ್ಲೆಯ ಜನತೆ ಬಿಜೆಪಿ ಪರ ಆಶೀರ್ವಾದ ಮಾಡಿದ್ದು, ಕರಾವಳಿಯು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೂಮ್ಮೆ ಸಾಬೀತಾಗಿದೆ. ಬಿಜೆಪಿಯ ಈ ಗೆಲುವನ್ನು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರಶಾಂತ್‌ ಪೂಜಾರಿ, ಶರತ್‌ ಮಡಿವಾಳ ಹಾಗೂ ದೀಪಕ್‌ ರಾವ್‌ಗೆ ಅರ್ಪಿಸುವುದಾಗಿ ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದರು. 

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳ ಮೋದಿ ಅವರ ಜನಪರ ಆಡಳಿತವನ್ನು ಮೆಚ್ಚಿ, ಸ್ಮಾರ್ಟ್‌ಸಿಟಿ, ಅಮೃತ್‌, ಸಾಗರ್‌ಮಾಲಾ, ಭಾರತ್‌ಮಾಲಾ ಮೊದಲಾದ ಹೊಸ ಹೊಸ ಯೋಜನೆಗಳಿಂದ ಪ್ರಭಾವಿತರಾಗಿ ಜನತೆ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ ಎಂದರು.

ಕಳೆದ 5 ವರ್ಷಗಳಲ್ಲಿ ರಾಜ್ಯ ಸರಕಾರದ ದುರಾಡಳಿತ, ಭ್ರಷ್ಟಾಚಾರ, ಕೋಮುಭಾವನೆ ಕೆರಳಿಸುವ ಹೇಳಿಕೆ
ಗಳು, ಗೂಂಡಾಗಿರಿಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಜನತೆ ಬಿಜೆಪಿಗೆ ಮತ ಹಾಕಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಗೆದ್ದಿರುವ ಬಿಜೆಪಿಯ ಏಳು ಮಂದಿ ಶಾಸಕರು ಜನರ ವಿಶ್ವಾಸ, ನಂಬಿಕೆಯ ಆಧಾರದಲ್ಲಿ ಕೆಲಸ ನಿರ್ವಹಿಸಲಿದ್ದಾರೆ.

ಬಿಜೆಪಿಯ ಗೆಲುವಿಗಾಗಿ ಪಕ್ಷದ ಕಾರ್ಯಕರ್ತರು ಕಳೆದ 2 ವರ್ಷ ಗಳಲ್ಲಿ ಹಗಲಿರುಳು ಶ್ರಮಿಸಿದ್ದಾರೆ. ಜತೆಗೆ ಬಿಜೆಪಿಯ ರಾಷ್ಟ್ರೀಯ ಮುಂದಾಳುಗಳಾದ ಓಂ ಪ್ರಕಾಶ್‌ ಮಾಥೂರ್‌, ಮಹೇಂದ್ರ ಸಿಂಗ್‌, ಕೇಂದ್ರ ಸಚಿವ ಧರ್ಮೆàಂದ್ರ ಪ್ರಧಾನ್‌, ಮುಂಬಯಿ ಸಂಸದ ಗೋಪಾಲ ಶೆಟ್ಟಿ ಅವರು ಜಿಲ್ಲೆಯಲ್ಲಿ ಬಿಜೆಪಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಚುನಾವಣಾ ತಂಡವೂ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದರು. 

ಜಿಲ್ಲೆಯಲ್ಲಿ 7 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ನಮಗಿತ್ತು. ಜತೆಗೆ ಮಂಗಳೂರು ಕ್ಷೇತ್ರದಲ್ಲಿಯೂ ಬಿಜೆಪಿ ಅಭ್ಯರ್ಥಿ ಉತ್ತಮ ಸ್ಪರ್ಧೆ ನೀಡಿದ್ದಾರೆ. ಮೋದಿ, ಅಮಿತ್‌ ಶಾ, ಯೋಗಿ ಆದಿತ್ಯನಾಥ್‌ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜನರು ಅಭೂತಪೂರ್ವ ಬೆಂಬಲ ನೀಡಿದ್ದರು. ಗುಜರಾತ್‌ ಮಾದರಿಯ ಪೇಜ್‌ ಪ್ರಮುಖ್‌ ಕಲ್ಪನೆ ಕೂಡ ಯಶಸ್ವಿಯಾಗಿದ್ದು, ಬೂತ್‌ ಮಟ್ಟದಲ್ಲಿ ನಾಯಕರನ್ನು ಬೆಳೆಸಿದೆ ಎಂದು ನಳಿನ್‌ ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್‌ ಸದಸ್ಯ ಕಾ| ಗಣೇಶ್‌ ಕಾರ್ಣಿಕ್‌, ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪ್ರಭಾಕರ ಬಂಗೇರ, ಪಕ್ಷದ ಪ್ರಮುಖರಾದ ಜೀತೇಂದ್ರ ಕೊಟ್ಟಾರಿ, ಕ್ಯಾ| ಬೃಜೇಶ್‌ ಚೌಟ, ರವಿಶಂಕರ್‌ ಮಿಜಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

18

Robbery Case: ಮೂಡುಬಿದಿರೆ ಅಳಿಯೂರು; ಹಾಡ ಹಗಲೇ ಚಿನ್ನಾಭರಣ ದರೋಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.