ಪ್ರಮಾಣ ವಚನ ತಡೆ ಅರ್ಜಿ ವಿಚಾರಣೆಗೆ ಸುಪ್ರಿಂ ಅಸ್ತು
Team Udayavani, May 17, 2018, 1:28 AM IST
ನವದೆಹಲಿ: ಇಂದು ಬೆಳಗ್ಗೆ (ಗುರುವಾರ) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿರುವ ಬಿ.ಜೆ.ಪಿ.ಯ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಪ್ರಮಾಣವಚನ ಸಮಾರಂಭಕ್ಕೆ ತಡೆ ನೀಡಬೇಕು ಎಂದು ಕೋರಿ ಜೆ.ಡಿ.ಎಸ್. ಮತ್ತು ಕಾಂಗ್ರೆಸ್ ಪ್ರತ್ಯೇಕವಾಗಿ ಸಲ್ಲಿಸಿರುವ ಎರಡು ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರಿಂ ಕೋರ್ಟ್ ಅಸ್ತು ಎಂದಿದೆ. ಜಸ್ಟೀಸ್ ಸಿಕ್ರಿ, ಜಸ್ಟೀಸ್ ಭೂಷಣ್, ಜಸ್ಟೀಸ್ ಬೋಬ್ದೆ ಇವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಲಿದೆ.
ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಅರ್ಜಿ ವಿಚಾರಣೆಗೆ ಸಮ್ಮತಿ ಸೂಚಿಸಿದ್ದು ಸುಪ್ರಿಂ ಕೋರ್ಟ್ ಕೊಠಡಿ ಸಂಖ್ಯೆ 2ರಲ್ಲಿ ಈ ಅರ್ಜಿಗಳ ವಿಚಾರಣೆ ನಡೆಯಲಿದ್ದು. ಬಿ.ಜೆ.ಪಿ. ಪರ ವಕೀಲ ತುಷಾರ್ ಮೆಹ್ತಾ ಮತ್ತು ಕಾಂಗ್ರೆಸ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಲಿದ್ದಾರೆ. 1.45ರ ಸುಮಾರಿಗೆ ವಾದ ಮಂಡನೆ ಪ್ರಾರಂಭವಾಗುವ ನಿರೀಕ್ಷೆಯಿದೆ.
1.45 AM: ಈ ನಡುವೆ ಸಂಸತ್ ಎದುರು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ಕರ್ನಾಟಕ ಸರಕಾರ ರಚನೆಯ ಹೈಡ್ರಾಮ ಬೆಂಗಳೂರಿನಿಂದ ದೇಶ ರಾಜಧಾನಿಗೆ ವರ್ಗವಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಮಸೀದಿಯೊಳಗೆ ಜೈ ಶ್ರೀರಾಮ್ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್ ಪ್ರಶ್ನೆ
GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ
One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?
Sulphur; ಹಿಂದೂ ಮಹಾಸಾಗರದಲ್ಲಿ ಗಂಧಕದ ಬೃಹತ್ ಬೆಟ್ಟ ಪತ್ತೆ!
Georgia: ಕಾರ್ಬನ್ ಮೊನಾಕ್ಸೈಡ್ ಸೋರಿಕೆ 12 ಭಾರತೀಯರ ಸಾ*ವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.