ಸಾಧನೆಗೆ ಬಡತನ ಅಡ್ಡಿಯಾಗದು: ರಾಮಚಂದ್ರ
Team Udayavani, May 17, 2018, 10:32 AM IST
ಆನೇಕಲ್: ಸಾಧನೆಗೆ ಬಡತನ ಅಡ್ಡಿಯಾಗದು ಎಂದು ಹೆಬ್ಬಗೋಡಿ ಸರ್ಕಾರಿ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ರಾಮಚಂದ್ರ ತಿಳಿಸಿದರು.
ಹೆಬ್ಬಗೋಡಿಯ ಓಣಮ್ಮ ದೇವಾಲಯದ ಆವರಣದಲ್ಲಿ ಮಲೇಶಿಯಾದಲ್ಲಿ ನಡೆದ ಇಂಟರ್ ನ್ಯಾಷನಲ್ ಕರಾಟೆ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು. ಹೆಬ್ಬಗೋಡಿಯ ಪವಿತ್ರ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ವಿದ್ಯಾರ್ಥಿಗಳು ಬಡತನದಲ್ಲಿದ್ದರೂ ಮಲೇಶಿಯಾದಲ್ಲಿ ನಡೆದ ಕರಾಟೆ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ತಾಲೂಕಿಗೆ ಕೀರ್ತಿ ತಂದು ಕೊಟ್ಟಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಸಾಧನೆಗೆ ಬೇಕಾದದ್ದು ಸತತ ಪರಿಶ್ರಮ ಮತ್ತು ಏಕಾಗ್ರತೆ ಬಹಳ ಮುಖ್ಯವಾಗಿದ್ದು ವಿದ್ಯಾರ್ಥಿಗಳು ಕಲಿಕೆ ಸಮಯದಲ್ಲಿ ಬೇರೆ ಕಡೆ ಆಕರ್ಷಣೆಗೆ ಒಳಗಾಗದೆ ಕಲಿಕೆಗೆ ಹೆಚ್ಚು ಒತ್ತು ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು. ಹೆಬ್ಬಗೋಡಿಯ ಪವಿತ್ರ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳಾದ ಸಂತೋಷ್, ಪ್ರೇಮ್, ಸಚಿತ್, ಅಶೋಕ್ ಕರಾಟೆಯಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳು.
ಹೆಬ್ಬಗೋಡಿ ನಗರಸಭೆ ಅಧ್ಯಕ್ಷೆ ಗಿರಿಜಾ ಮಂಜುನಾಥ್, ಮಾಜಿ ಉಪಾಧ್ಯಕ್ಷ ಶ್ರೀನಿವಾಸ್‌ರೆಡ್ಡಿ, ನಗರಸಭೆ ಸದಸ್ಯರಾದ ಪುಷ್ಪಾ ರಾಮಚಂದ್ರ, ಮುನಿಯಲ್ಲಪ್ಪ, ಎಂ.ಜಯರಾಂ, ಮುಖಂಡರಾದ ಮುರುಗೇಶ್, ಮಂಜುನಾಥ್, ಹರೀಶ್, ಶಾಂತಮಣಿ ಮತ್ತಿತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.