ಆಂಗ್ಲೋ ಇಂಡಿಯನ್ ನಾಮಕರಣ: ಕಾಂಗ್ರೆಸ್-ಜೆಡಿಎಸ್ ಸುಪ್ರೀಂ ಕೋರ್ಟಿಗೆ
Team Udayavani, May 17, 2018, 4:46 PM IST
ಹೊಸದಿಲ್ಲಿ : ಕರ್ನಾಟಕ ವಿಧಾನಸಭೆಗೆ ಆಂಗ್ಲೋ ಇಂಡಿಯನ್ ಸದಸ್ಯರೋರ್ವರನ್ನು ನಾಮಕರಣ ಮಾಡುವ ರಾಜ್ಯಪಾಲರ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಲು ಹತ್ತಿರುವ ಕಾಂಗ್ರೆಸ್ – ಜೆಡಿಎಸ್ ಕೂಟ, ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ ತನಗಿರುವ ಬಹುಮತವನ್ನು ಸಾಬೀತುಪಡಿಸುವ ತನಕ ರಾಜ್ಯಪಾಲರು ನಾಮಕರಣ ಪ್ರಕ್ರಿಯೆ ನಡೆಸಕೂಡದು ಎಂದು ಹೇಳಿದೆ.
ಸುಪ್ರೀಂ ಕೋರ್ಟಿಗೆ ಇಂದು ಉಭಯ ಪಕ್ಷಗಳು ಈ ಬಗ್ಗೆ ಸಲ್ಲಿಸಿರುವ ಅರ್ಜಿಯು ನಾಳೆ ಶುಕ್ರವಾರ ಮುಖ್ಯ ಅರ್ಜಿಯೊಂದಿಗೆ ವಿಚಾರಣೆಗೆ ಬರಲಿದೆ. ನಿನ್ನೆ ರಾತ್ರಿ ಪೂರ್ತಿ ನಡೆದ ಹೈ ಡ್ರಾಮಾದಲ್ಲಿ ಸುಪ್ರೀಂ ಕೋರ್ಟ್, ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆ ನೀಡಲು ನಿರಾಕರಿಸಿತ್ತು.
ಇಂದು ಪ್ರಮಾಣ ವಚನ ಸ್ವೀಕರಿಸಿರುವ ಸಿಎಂ ಯಡಿಯೂರಪ್ಪ ಅವರು ಸದನದಲ್ಲಿ ತಮಗಿರುವ ಬಹುಮತವನ್ನು ಸಾಬೀತು ಪಡಿಸುವ ತನಕ ರಾಜ್ಯಪಾಲರು ಮಾಡಿರುವ ಆಂಗ್ಲೋ ಇಂಡಿಯನ್ ವಿನಿಶಾ ನೀರೋ ಅವರ ನಾಮಕರಣವನ್ನು ಅನೂರ್ಜಿತಗೊಳಿಸಬೇಕು ಎಂದು ಕಾಂಗ್ರೆಸ್-ಜೆಡಿಎಸ್ ಆಗ್ರಹಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
MUST WATCH
ಹೊಸ ಸೇರ್ಪಡೆ
ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.