ಎಚ್‌ಡಿಕೆ, ದೇವೇಗೌಡಜತೆ ಜಮೀರ್ ದೋಸ್ತಿ!
Team Udayavani, May 18, 2018, 2:55 PM IST
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತ ಹಾಕಿ ಜೆಡಿಎಸ್‌ನಿಂದ ಅಮಾನತುಗೊಂಡ ನಂತರ ಪರಸ್ಪರ ವಾಗ್ಧಾಳಿ ಮೂಲಕ ರಾಜಕೀಯವಾಗಿ ಸಮರ ಸಾರಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಜಮೀರ್ ಅಹಮದ್ ಇದೀಗ ಮತ್ತೆ ಒಂದಾಗಿದ್ದಾರೆ.
ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಂತರ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿರುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ಎಚ್.ಡಿ. ಕುಮಾರಸ್ವಾಮಿ, ಜಮೀರ್ ಅಹಮದ್ ನಡುವಿನ ದ್ವೇಷ
ಕಳೆದು ಮತ್ತೆ ಸ್ನೇಹ ಚಿಗುರಿದೆ. ಬುಧವಾರ ರಾತ್ರಿ ಈಗಲ್‌ಟನ್ ರೆಸಾರ್ಟ್‌ನಲ್ಲಿ ಎಂಟು ತಿಂಗಳ ನಂತರ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಎಚ್.ಡಿ. ಕುಮಾರಸ್ವಾಮಿ, ಜಮೀರ್ ಅಹಮದ್ ಉಭಯ ಕುಶಲೋಪರಿ ನಡೆಸಿದರು. ಇದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.
ಕಾಂಗ್ರೆಸ್ ಶಾಸಕರು ತಂಗಿದ್ದ ರೆಸಾರ್ಟ್‌ಗೆ ಕುಮಾರಸ್ವಾಮಿ ತೆರಳಿದ ವೇಳೆ ಕಾಂಗ್ರೆಸ್‌ನ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಜಮೀರ್ ಅಹಮದ್ ಅವರನ್ನು ಭೇಟಿಯಾದ ಕುಮಾರಸ್ವಾಮಿ ಸ್ವಲ್ಪ ಹೊತ್ತು ಮಾತುಕತೆ ನಡೆಸಿದರು.
ಸರ್ಕಾರ ರಚನೆಯ ಕಾರ್ಯತಂತ್ರಗಳ ಬಗ್ಗೆಯೂ ಚರ್ಚಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹಮದ್, ಕುಮಾರಸ್ವಾಮಿ ಅವರನ್ನು ಭೇಟಿಯಾಗದೆ ತಿಂಗಳುಗಳು ಆಗಿತ್ತು. ಸುದೀರ್ಘ ಅವಧಿಯ ನಂತರ ಇಬ್ಬರೂ ಮಾತುಕತೆ ನಡೆಸಿದ್ದೇವೆ ಎಂದರು.
ದೇವೇಗೌಡ, ಜಮೀರ್ ಮುಖಾಮುಖೀ: ಇದರ ಬೆನ್ನಲ್ಲೇ ಗುರುವಾರ ವಿಧಾನಸೌಧದ ಎದುರು ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕೂಡ ಅಲ್ಲಿ ಆಗಮಿಸಿದ್ದರು. ಕಾಂಗ್ರೆಸ್ ಶಾಸಕರು ಮತ್ತು ಮುಖಂಡರೊಂದಿಗೆ ದೇವೇಗೌಡರು ಚರ್ಚಿಸುತ್ತಿದ್ದ ವೇಳೆ ಜಮೀರ್ ಅಹಮದ್ ಪಕ್ಕದಲ್ಲೇ ನಿಂತಿದ್ದರು. ಜಮೀರ್ ಹೆಗಲ ಮೇಲೆ ಕೈ ಇಟ್ಟು ದೇವೇಗೌಡರು ಮಾತನಾಡುತ್ತಿದ್ದರು. ನಂತರ ಜಮೀರ್ ಭುಜ ತಟ್ಟಿದ ದೇವೇಗೌಡರು ಅಲ್ಲಿಂದ ಮುಂದೆ ಸಾಗಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.