ಬ್ಯಾಂಕ್ ವಹಿವಾಟಿನಲ್ಲಿ ಪಾಲ್ಗೊಳ್ಳಿ
Team Udayavani, May 18, 2018, 3:48 PM IST
ಚಳ್ಳಕೆರೆ: ರಾಷ್ಟ್ರದಲ್ಲಿರುವ ಪ್ರತಿಯೊಂದು ಕುಟುಂಬ ಬ್ಯಾಂಕ್‌ನೊಂದಿಗೆ ವ್ಯವಹಾರವನ್ನು ಹೊಂದಬೇಕು. ಬ್ಯಾಂಕ್‌ನಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಎಸ್‌ಬಿಎಂ ಹಿರಿಯ ವ್ಯವಸ್ಥಾಪಕ ಎಂ. ಪ್ರಕಾಶ್ ಹೇಳಿದರು.
ಗುರುವಾರ ಬ್ಯಾಂಕ್ ಆವರಣದಲ್ಲಿ ನಡೆದ “ಬ್ಯಾಂಕ್ ಮಿತ್ರ’ ಯೋಜನೆಯ ಸೇವಾ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕರು ಬ್ಯಾಂಕ್ ನಿಯಮಾನುಸಾರ ಸಾಲ ಪಡೆದು ಕುಟುಂಬದ ಆರ್ಥಿಕ ಶಕ್ತಿಯನ್ನು ವೃದ್ಧಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ “ಬ್ಯಾಂಕ್ ಮಿತ್ರ’ ಎಂಬ ಸೇವೆಯನ್ನು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ಪರಿಚಯಿಸಲಾಗಿದೆ ಎಂದರು.
ದೇಶದಲ್ಲಿ ಪ್ರಸ್ತುತ ಕೇವಲ ಶೇ. 55ರಷ್ಟು ಜನರು ಮಾತ್ರ ಬ್ಯಾಂಕ್ ವ್ಯವಹಾರವನ್ನು ಬಲ್ಲವರಾಗಿದ್ಧಾರೆ. ಇನ್ನುಳಿದ ಶೇ. 45ರಷ್ಟು ಜನರು ಬ್ಯಾಂಕ್ ವ್ಯವಹಾರದ ವ್ಯಾಪ್ತಿಗೆ ಸೇರಿಲ್ಲ. ಹಲವಾರು ಕಾರಣಗಳಿಂದಾಗಿ ಬ್ಯಾಂಕ್ ವ್ಯವಹಾರಗಳಿಂದ ದೂರ ಉಳಿದಿದ್ದಾರೆ.
ಇದು ನಮ್ಮ ಒಟ್ಟಾರೆ ಆರ್ಥಿಕ ವ್ಯವಸ್ಥೆಗೆ ಧಕ್ಕೆ ತರುವ ಸಂಭವವಿದೆ. ಆದ್ದರಿಂದ ಗ್ರಾಮಾಂತರ ಪ್ರದೇಶದ ಪ್ರತಿ ಮನೆಗೆ ಬ್ಯಾಂಕ್‌ನ ಸಿಬ್ಬಂದಿ ಭೇಟಿ ನೀಡಿ ಅವರಿಂದ ಮಾಹಿತಿ ಪಡೆದು ಬ್ಯಾಂಕ್ ಖಾತೆ ಪ್ರಾರಂಭಿಸುವಂತೆ ಮನವರಿಕೆ ಮಾಡಲಲಿದ್ದಾರೆ. ಅಲ್ಲದೆ ಬ್ಯಾಂಕ್‌ನಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.
ಪ್ರತಿಯೊಬ್ಬರಿಗೂ ಬ್ಯಾಂಕ್ ಸೇವೆ ದೊರೆಯುವಂತಾಗಲಿ ಇತ್ತೀಚಿನ ದಿನಗಳಲ್ಲಿ ಬ್ಯಾಂಕ್‌ನ ವಹಿವಾಟುಗಳಲ್ಲಿ ಗ್ರಾಮೀಣ ಜನರು ಹೆಚ್ಚು ಭಾಗವಹಿಸದೇ ಇರುವುದು ಕಂಡು ಬಂದಿದೆ. ಕೆಲವರು ಆರ್ಥಿಕವಾಗಿ ಸಬಲರಾಗಿದ್ದರೂ ಬ್ಯಾಂಕ್ ಸೇವೆಯನ್ನು ಬಯಸುವುದಿಲ್ಲ. ಆದರೆ ಬಡತನ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಬ್ಯಾಂಕ್‌ನ ನೆರವು ಅತ್ಯಗತ್ಯ. ಕೆಲವರು ಬ್ಯಾಂಕ್‌ಗೆ ಆಗಮಿಸಿ ತಮ್ಮ ವಿಚಾರಗಳನ್ನು ತಿಳಿಸಲು ಹಿಂದೇಟು ಹಾಕುತ್ತಾರೆ. ಈ ನಿಟ್ಟಿನಲ್ಲಿ “ಬ್ಯಾಂಕ್ ಮಿತ್ರ’ ಯೋಜನೆ ಮೂಲಕ ನಮ್ಮ ಸಿಬ್ಬಂದಿ ಪ್ರತಿಯೊಬ್ಬರ ಮನೆಗೂ ಭೇಟಿ ನೀಡಿ ಅವರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು “ಬ್ಯಾಂಕ್ ಮಿತ್ರ’ ಜಿಲ್ಲಾ ಕೋ ಆರ್ಡಿನೇಟರ್ ಕೆ. ಪ್ರಭುದೇವ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀಧರ ನಾಯಕ, ಸಿ.ಎಂ. ಪ್ರಕಾಶ್, ಭಾರತಿ, ಅನಿತಾ, ಮುರಳಿ, ಮಂಜುನಾಥ, ಫಾಲಾಕ್ಷ, “ಬ್ಯಾಂಕ್ ಮಿತ್ರ’ ತಾಲೂಕು ಕೋ ಆರ್ಡಿನೇಟರ್ ಮಹಲಿಂಗಪ್ಪ, ಅಶೋಕ್, ಜಯಣ್ಣ, ಹನುಮಂತಪ್ಪ, ವೆಂಕಟೇಶ್, ರೇಖಾ ಮೊದಲಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.