ಮಂಗಳೂರು: ಮರ ಬಿದ್ದು  ವಾಹನಗಳು ಜಖಂ


Team Udayavani, May 19, 2018, 11:44 AM IST

mara.jpg

ಮಂಗಳೂರು: ಗುರುವಾರ ರಾತ್ರಿ ಸುರಿದ ಭಾರೀ ಮಳೆಗೆ ಬೃಹತ್‌ ಮಾವಿನ ಮರವೊಂದು ಉರುಳಿ ಬಿದ್ದ ಪರಿಣಾಮ ನಾಲ್ಕು ವಾಹನಗಳು, ಟ್ರಾನ್ಸ್‌ಫಾರ್ಮರ್‌ ಹಾಗೂ ವಿದ್ಯುತ್‌ ಕಂಬಗಳಿಗೆ ಹಾನಿಯಾದ ಘಟನೆ ನಗರದ ಬಾಬುಗುಡ್ಡೆ ಎಂಬಲ್ಲಿ ನಡೆದಿದೆ. 

ಗುರುವಾರ ರಾತ್ರಿ ಗುಡುಗು, ಮಿಂಚಿನೊಂದಿಗೆ ನಗರಾದ್ಯಂತ ಭಾರೀ ಮಳೆಯಾಗಿತ್ತು. ಪರಿಣಾಮವಾಗಿ ನಗರದ ಬಾಬುಗುಡ್ಡೆಯಲ್ಲಿ ಬೃಹತ್‌ ಮಾವಿನ ಮರ ಉರುಳಿ ಬಿದ್ದಿದೆ. ಮರದ ಕೆಳಗೆ ನಿಲ್ಲಿಸಿದ್ದ ನಾಲ್ಕು ಕಾರುಗಳು ಜಖಂಗೊಂಡಿವೆ. ಮರ ವಿದ್ಯುತ್‌ ತಂತಿಯ ಮೇಲೆ ಬಿದ್ದ ಪರಿಣಾಮ ಮೂರು ವಿದ್ಯುತ್‌ ಕಂಬಗಳು ಹಾಗೂ ಟ್ರಾನ್ಸ್‌ ಫಾರ್ಮರ್‌ಗೂ ಹಾನಿಯಾಗಿದೆ. ಘಟನೆ ನಡೆದಿರುವುದು ಗುರುವಾರ ತಡರಾತ್ರಿಯಾದ ಪರಿಣಾಮ ಜನಸಂಚಾರ ಇರಲಿಲ್ಲ. ಇದರಿಂದಾಗಿ ಸಾವು-ನೋವು ಉಂಟಾಗಿಲ್ಲ. ಘಟನೆಯ ಬಳಿಕ ಸುತ್ತುಮುತ್ತಲ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದ್ದು, ಮೆಸ್ಕಾಂ ಸಿಬಂದಿ ತುರ್ತು ದುರಸ್ತಿ ಕಾರ್ಯಗಳಲ್ಲಿ ತೊಡಗಿಕೊಂಡರು. ಶುಕ್ರವಾರ ಬೆಳಗ್ಗೆ ಸುಮಾರು 7.45ರ ವೇಳೆ ಅಗ್ನಿಶಾಮಕ ಸಿಬಂದಿ ಉರುಳಿದ ಮರವನ್ನು ತೆರವುಗೊಳಿಸಿದರು. ಪಾಂಡೇಶ್ವರ ಅಗ್ನಿ ಶಾಮಕ ಠಾಣೆಯ ಠಾಣಾಧಿಕಾರಿ ವಸಂತ ಗೌಡ, ಸಿಬಂದಿಗಳಾದ ಸುಧೀರ್‌, ದೀಪಕ್‌, ಸತೀಶ್‌, ಸುರೇಶ್‌ ಶೆಟ್ಟಿ, ಸುರೇಶ್‌ ಪಟಗಾರ ಹಾಗೂ ಸಂತೋಷ್‌ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು. 

ಮೇ 21: ಮಳೆ ಸಮಸ್ಯೆ ಎದುರಿಸಲು ಸಭೆ
ಮಳೆಗಾಲ ಸಮೀಪಿಸುತ್ತಿರುವುದರಿಂದ ಮಂಗಳೂರು ಮನಪಾ ಹಾಗೂ ಜಿಲ್ಲಾಡಳಿತ ಮಳೆ ಅವಾಂತರಗಳನ್ನು ತಡೆಯಲು ಸಾಕಷ್ಟು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ. ಅಪಾಯಕಾರಿ ಎಂದೆನಿಸುವ ಮರ ಗಳನ್ನು ಕಡಿಸುವ, ಇಲ್ಲವೇ ಕೊಂಬೆ ರೆಂಬೆಗಳನ್ನು ಕತ್ತರಿಸುವ ಕೆಲಸಗಳೂ ಆಗಬೇಕಾಗಿದೆ. ಈ ಬಗ್ಗೆ “ಉದಯವಾಣಿ’ಯೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌, ಕೆಲವೆಡೆ ಮಳೆ ಸಮಸ್ಯೆಗಳನ್ನು ಎದುರಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮೇ 21ಕ್ಕೆ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. 

ಟಾಪ್ ನ್ಯೂಸ್

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.