ಹಣ ಪಾಲು ವಿಚಾರಕ್ಕೆ ರೌಡಿಶೀಟರ್‌ ಕೊಲೆ


Team Udayavani, May 19, 2018, 11:49 AM IST

murder.jpg

ಬೆಂಗಳೂರು: ಕಳವು ಮಾಡಿದ ಹಣ ಹಂಚಿಕೊಳ್ಳುವ ವಿಚಾರದಲ್ಲಿ ಸ್ನೇಹಿತರ ನಡುವೆ ನಡೆದ ಜಗಳ ರೌಡಿಶೀಟರ್‌ ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಸರ್ಜಾಪುರ ಮುಖ್ಯರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಬಾಣಸವಾಡಿಯ ಜಾನಕಿರಾಮ್‌ ಲೇಔಟ್‌ ನಿವಾಸಿ, ಕೋಲಾರ ಮೂಲದ ಚೆಲ್ಲಕುಮಾರ್‌ (33) ಕೊಲೆಯಾದ ರೌಡಿಶೀಟರ್‌. ಈತನ ವಿರುದ್ಧ ನಗರದ ಹತ್ತಾರು ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆ ಸೇರಿದಂತೆ 45ಕ್ಕೂ ಹೆಚ್ಚು ವಿವಿಧ ಅಪರಾಧ ಪ್ರಕರಣಗಳಿದ್ದು, ಬಾಣಸವಾಡಿ ಠಾಣೆಯಲ್ಲಿ ರೌಡಿಪಟ್ಟಿ ತೆರೆಯಲಾಗಿದೆ.

ಇತ್ತೀಚೆಗೆ ಚೆಲ್ಲಕುಮಾರ್‌ ತನ್ನ ಸಹಚರರ ಜತೆ ಸೇರಿ ಮನೆಗಳ್ಳತನ ಮಾಡಿದ್ದ. ಬಂದ ಹಣವನ್ನು ಸ್ನೇಹಿತರೆಲ್ಲರಿಗೂ ಸರಿಸಮನಾಗಿ ಹಂಚಬೇಕಿತ್ತಾದರೂ ಚೆಲ್ಲಕುಮಾರ್‌ ಹೆಚ್ಚಿನ ಪಾಲು ತನ್ನ ಬಳಿ ಇಟ್ಟುಕೊಂಡು ಸಹಚರರಿಗೆ ಕಡಿಮೆ ಕೊಟ್ಟಿದ್ದ. ಇದನ್ನು ಪ್ರಶ್ನಿಸಿದ ತನ್ನ ಸಹಚರರ ಮೇಲೆ ಹಲ್ಲೆ ನಡೆಸಿದ್ದ. ಇದರಿಂದ ಆಕ್ರೋಶಗೊಂಡ ಸಹಚರ ನಾಗರಾಜ್‌ ಇತರರೊಂದಿಗೆ ಚರ್ಚಿಸಿ ಚೆಲ್ಲಕುಮಾರ್‌ನ ಕೊಲೆಗೆ ಸಂಚು ರೂಪಿಸಿದ್ದರು.

ಅದರಂತೆ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಚೆಲ್ಲಕುಮಾರ್‌ ತನ್ನ ಆಲ್ಟೋ ಕಾರಿನಲ್ಲಿ ಇಬ್ಬರು ಸ್ನೇಹಿತರ ಜತೆ ಕೋಲಾರಕ್ಕೆ ಹೋಗುತ್ತಿದ್ದ ಮಾಹಿತಿ ತಿಳಿದ  ಆರು ಮಂದಿ ಸ್ನೇಹಿತರು ವರ್ತೂರಿನ ಕೊಟ್ಟಿ ಗೇಟ್‌ ಬಳಿ ಕಾರು ಅಡ್ಡಗಟ್ಟಿದ್ದಾರೆ. ಬಳಿಕ ಚೆಲ್ಲಕುಮಾರ್‌ನನ್ನು ಕಾರಿನಿಂದ ಹೊರಗೆಳೆದು ಆತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದಾರೆ.

ಬಳಿಕ ಕಾರಿನಲ್ಲಿದ್ದ ಆತನ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಸುಳಿವು ಲಭ್ಯವಾಗಿದ್ದು, ಸದ್ಯದಲ್ಲೇ ಬಂಧಿಸಲಾಗುವುದು ಎಂದು ಹೇಳಿದ್ದಾರೆ.

ನೆರೆ ಜಿಲ್ಲೆಗಳಲ್ಲೂ ಪ್ರಕರಣ: ಚೆಲ್ಲಕುಮಾರ್‌ ವಿರುದ್ಧ ಬೆಂಗಳೂರು ಮಾತ್ರವಲ್ಲದೆ, ಮೈಸೂರಿನಲ್ಲೂ ಕಳ್ಳತನ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ವಾರೆಂಟ್‌ ಜಾರಿಯಾಗಿತ್ತು. ಆದರೂ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಪತ್ನಿಯರು: ಚೆಲ್ಲಕುಮಾರ್‌ಗೆ ಇಬ್ಬರು ಪತ್ನಿಯರಿದ್ದು, ಬಾಣಸವಾಡಿಯಲ್ಲಿ ಮೊದಲ ಪತ್ನಿಗೆ ಬಾಡಿಗೆ ಮನೆ ಮಾಡಿಕೊಟ್ಟಿದ್ದಾನೆ. ಎರಡನೇ ಪತ್ನಿಗೆ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಮನೆ ಮಾಡಿಕೊಟ್ಟಿದ್ದಾನೆ. ಇಬ್ಬರು ಪತ್ನಿಯರೂ ಮನೆ ಕೆಲಸಕ್ಕೆ ಹೋಗುತ್ತಿದ್ದಾರೆ. ಚೆಲ್ಲಕುಮಾರ್‌ ಕೋಲಾರದಲ್ಲಿ ರೂಂ ಮಾಡಿಕೊಂಡಿದ್ದು, ಆಗಾಗೆ ಹೋಗಿಬರುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

rahul-gandhi

Election;ವಿಶ್ವಾಸಾರ್ಹತೆಗೆ ಧಕ್ಕೆ: ಕಾಂಗ್ರೆಸ್‌ ಆಂದೋಲನ

1-eqwewqe

Adelaide Test: ಭಾರತಕ್ಕೆ ಹಗಲು-ರಾತ್ರಿ ಅಭ್ಯಾಸ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.