ರೈತರಿಂದಲೇ ನೇರ ಮಾರಾಟ ವ್ಯವಸ್ಥೆ: ಕನಗವಲ್ಲಿ


Team Udayavani, May 19, 2018, 12:59 PM IST

ray-1.jpg

ಕೊಪ್ಪಳ: ತೋಟಗಾರಿಕೆ ಇಲಾಖೆಯು ಆಯೋಜನೆ ಮಾಡಿರುವ ಮಾವು ಮೇಳವು ರೈತರು ಹಾಗೂ ಗ್ರಾಹಕರಿಗೆ ತುಂಬ ಅನುಕೂಲವಾಗಲಿದೆ ಎಂದು ಜಿಲ್ಲಾಧಿಧಿಕಾರಿ ಎಂ. ಕನಗವಲ್ಲಿ ಹೇಳಿದರು.

ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮ, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಶುಕ್ರವಾರ ಆಯೋಜಿಸಲಾಗಿದ್ದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ಮಾತನಾಡಿದರು.

ಮಾವು ಮೇಳದಿಂದ ರೈತರು ತಾವು ಬೆಳೆದಿರುವ ಹಣ್ಣುಗಳನ್ನು ಯಾವುದೇ ಮಧ್ಯವರ್ತಿಗಳ ಸಹಾಯ ಇಲ್ಲದೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಸಹಕಾರಿಯಾಗಲಿದೆ. ಹಣ್ಣುಗಳನ್ನು ನೈಸರ್ಗಿಕವಾಗಿ ಮಾಗಿಸಿ ಮಾರಾಟ ಮಾಡಲಾಗುತ್ತಿರುವುದರಿಂದ ಆರೋಗ್ಯದ ದೃಷ್ಠಿಯಿಂದ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ. ಜಿಲ್ಲೆಯ ರೈತರು ಬೆಳೆದಿರುವ ಹಣ್ಣುಗಳು ಮೇಳದಲ್ಲಿ ಲಭ್ಯವಿದ್ದು ಸಂತೋಷದ ವಿಷಯವಾಗಿದೆ. ಕಳೆದ ವರ್ಷ
ಮಾವು ಮೇಳವನ್ನು ಜಿಲ್ಲೆಯಲ್ಲಿ ಮೊದಲನೇ ಬಾರಿಗೆ ಏರ್ಪಡಿಸಲಾಗಿತ್ತು. ಈ ಮೇಳವು ತುಂಬಾ ಯಶಸ್ವಿಯಾಗಿದ್ದು, ಈ ವರ್ಷವೂ ರೈತರಿಗೆ ಹಾಗೂ ಜಿಲ್ಲೆಯ ಸಾರ್ವಜನಿಕರಿಗೆ ಮಾವು ಮೇಳವು ಪ್ರಯೋಜನಕಾರಿಯಾಗಲಿದೆ. ತೋಟಗಾರಿಕೆ ಇಲಾಖೆ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ ಎಂದರು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣಾ ಉಕ್ಕುಂದ ಅವರು ಮಾತನಾಡಿ, ಮಾವು ಮೇಳವನ್ನು ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ಸಹಯೋಗದೊಂದಿಗೆ ಆಯೋಜಿಸಲಾಗಿದೆ. 

ಮೇಳದಲ್ಲಿ ಕೊಪ್ಪಳ ಜಿಲ್ಲೆಯ ಹಾಗೂ ಸುತ್ತ ಮುತ್ತ ಸೇರಿ ಸುಮಾರು 50ಕ್ಕೂ ಹೆಚ್ಚಿನ ರೈತರು ತಮ್ಮ ಹೆಸರನ್ನು ನೋಂದಾಯಿಸಿ ಬೇನೆಷಾನ್‌, ಕೇಸರ್‌, ದಶಹರಿ, ಆಪೂಸ್‌, ಮಲ್ಲಿಕಾ, ರಸಪುರಿ, ಸುವರ್ಣರೇಖ, ಇಮಾಮ್‌ ಪಸಂದ್‌ ಮುಂತಾದ ತಳಿಗಳನ್ನು ತಂದಿದ್ದಾರೆ. ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳು ಸವಿಯಲು ಜಿಲ್ಲೆಯ ಸಾರ್ವಜನಿಕರಿಗೆ ಲಭ್ಯವಾಗಿವೆ. ರೈತರೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವುದರಿಂದ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಹಲವು ತಳಿಯ ಮಾವು ಹಣ್ಣುಗಳ ಲಭ್ಯವಾಗಲಿದ್ದು, ರೈತರಿಗೆ ಯಾವುದೇ ನಷ್ಟ ಇಲ್ಲದೇ ನೇರ ಲಾಭ ದೊರೆಯಲಿದೆ. ಹಾಗೂ ಮಾವಿನ ಹಣ್ಣನ್ನು ಸೇವಿಸುವುದರಿಂದಾಗುವ ಪ್ರಯೋಜನಗಳ ಬಗ್ಗೆ ಸಾರ್ವಜನಿಕರಲ್ಲಿ ಮಾಹಿತಿ ನೀಡಲಾಗುತ್ತಿದೆ. ಮಾವಿನ ಹಣ್ಣಿನಿಂದ ಸಂಸ್ಕರಿಸಿದ ಉತ್ಪನ್ನಗಳಾದ ಚಟ್ನಿ, ಉಪ್ಪಿನಕಾಯಿ, ಮಾವಿನ ರಸ ಹಾಗೂ ಇತರೆ ಉತ್ಪನ್ನಗಳ ಬಗ್ಗೆ ರೈತರಿಗೂ ಹಾಗೂ ಸಾರ್ವಜನಿಕರಿಗೂ ಮಾಹಿತಿಯನ್ನು ನೀಡಲಾಗುವುದು. ಕೊಪ್ಪಳ ಜಿಲ್ಲೆಯ ಗ್ರಾಹಕರು ಮೇಳದಲ್ಲಿ ಭಾಗವಹಿಸಿ ರೈತರಿಂದ ನೇರವಾಗಿ ಖರೀದಿಸಿ ಜಿಲ್ಲೆಯ ಮಾವು ಬೆಳೆಗಾರರಿಗೆ ಪ್ರೋತ್ಸಾಹ ನೀಡಿ, ಹಾಗೂ ಮಾವು ಮೇಳವನ್ನು ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.