ಮೇ 21ರಂದು ಕುಮಾರ ಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ
Team Udayavani, May 19, 2018, 7:59 PM IST
ಬೆಂಗಳೂರು: ಕರ್ನಾಟಕದಲ್ಲಿ ಇದೀಗ ಕುಮಾರ ಪರ್ವ ಆರಂಭವಾಗಿದೆ. ಮೇ 21ರ ಸೋಮವಾರ ಬೆಳಗ್ಗೆ ಎಚ್ ಡಿ ಕುಮಾರ ಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ಬೆಳಗ್ಗೆ ನಡೆಲಿದೆ.
ಜೆಡಿಎಸ್ ನಾಯಕರಾಗಿರುವ ಕುಮಾರ ಸ್ವಾಮಿ ಅವರು ಈ ವಿಷಯವನ್ನು ಇಂದಿಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಕಳೆದ ಮೇ 15ರಂದೇ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರಕಾರ ರಚಿಸುವ ಬಗ್ಗೆ ರಾಜ್ಯಪಾಲರನ್ನು ಕಂಡು ಮನವಿ ಸಲ್ಲಿಸಿತ್ತು. ಇಂದು ರಾಜ್ಯಪಾಲರು ತಮ್ಮ ಮೈತ್ರಿಕೂಟಕ್ಕೆ ಸರಕಾರ ರಚಿಸುವ ಆಹ್ವಾನ ನೀಡಿದ್ದು ಸದನದಲ್ಲಿ ಬಹುಮತ ಸಾಬೀತುಪಡಿಸಲು 15 ದಿನಗಳ ಕಾಲಾವಕಾಶ ನೀಡಿದ್ದಾರೆ ಎಂದು ಕುಮಾರ ಸ್ವಾಮಿ ಹೇಳಿದರು.
ತಮ್ಮ ಭಾವೀ ಸಂಪುಟದಲ್ಲಿ ಯಾವ ಪಕ್ಷದ ಯಾರೆಲ್ಲ ಯಾವ್ಯಾವ ಸಚಿವ ಪದ ಹೊಂದಲಿದ್ದಾರೆ ಎಂಬುದನ್ನು ಇಂದು ರಾತ್ರಿ ನಡೆಸಲು ಉದ್ದೇಶಿಸಲಾಗಿರುವ ಉಭಯ ಪಕ್ಷಗಳ ಹಿರಿಯ ನಾಯಕರ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಕುಮಾರ ಸ್ವಾಮಿ ಹೇಳಿದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ, ಮಾಯಾವತಿ, ಚಂದ್ರಶೇಖರ ರಾವ್, ಚಂದ್ರಬಾಬು ನಾಯ್ಡು, ಕಾಂಗ್ರೆಸ್ ನಾಯಕರಾದ ರಾಹುಲ್, ಸೋನಿಯಾ ಗಾಂಧಿ ಮೊದಲಾದವರನ್ನು ಆಹ್ವಾನಿಸಲಾಗುವುದು. ಸದನದಲ್ಲಿ ಬಹುಮತ ಸಾಬೀತು ಪಡಿಸುವ ದಿನಾಂಕವನ್ನು ಆದಷ್ಟು ಬೇಗನೆ ನಿರ್ಧರಿಸಲಾಗುವುದು ಎಂದು ಕುಮಾರ ಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.