ಆರೋಗ್ಯ ವೃದ್ಧಿ ಕಾರ್ಯಕ್ರಮ ಅನಿವಾರ್ಯ: ಪ್ರೊ| ಗೋರ್ಡಾನ್‌


Team Udayavani, May 20, 2018, 8:51 AM IST

o-16.jpg

ಮಂಗಳೂರು: ದೇಶವೊಂದರ ಆರ್ಥಿಕ ಸ್ಥಿತಿಗತಿ ಆ ದೇಶದ ಜನರ ಆರೋಗ್ಯದ ಸ್ಥಿತಿಗತಿಯನ್ನು ಅವಲಂಬಿಸಿರುವ ಕಾರಣ ಪ್ರತಿಯೊಂದು ದೇಶವೂ ಜನರ ಆರೋಗ್ಯ ವೃದ್ಧಿಸುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಅನಿವಾರ್ಯತೆ ಇದೆ ಎಂದು ವರ್ಲ್ಡ್ ಫೆಡರೇಶನ್‌ ಅಫ್‌ ಮೆಡಿಕಲ್‌ ಎಜುಕೇಶನ್‌ ಅಧ್ಯಕ್ಷ ಪ್ರೊ| ಡೇವಿಡ್‌ ಗೋರ್ಡಾನ್‌ ಹೇಳಿದರು. 

ಅವರು ನಗರದ ಕೊಡಿಯಾಲಬೈಲಿನಲ್ಲಿರುವ ಟಿಎಂಎ ಪೈ ಸಭಾಂಗಣದಲ್ಲಿ ಶನಿವಾರ ನಡೆದ ಮಣಿಪಾಲ್‌ ಅಕಾಡಮಿ ಆಫ್‌ ಹೈಯರ್‌ ಎಜು ಕೇಶನ್‌ನ  25ನೇ ಪದವಿ ಪ್ರದಾನ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಿ ಮಾತನಾಡಿದರು. ಎರಡು ವರ್ಷಗಳ ಹಿಂದೆ ವಿಶ್ವ ಆರೋಗ್ಯ ಸಂಸ್ಥೆ
ಹಾಗೂ ಅಂತಾರಾಷ್ಟ್ರೀಯ ಕಾರ್ಮಿಕ ಸಂಘ ಜಂಟಿಯಾಗಿ ವರದಿ ನೀಡಿ, ಸರಕಾರಗಳು ಜನರ ಆರೋಗ್ಯಕ್ಕಾಗಿ ಹೆಚ್ಚು ಹಣ ಮೀಸಲು ಇಡಬೇಕೆಂದು ಹೇಳಿವೆಯಲ್ಲದೆ, ಇದು ಆಯಾ ದೇಶವನ್ನು ಆರ್ಥಿಕವಾಗಿ ಅಭಿವೃದ್ಧಿಗೊಳಿಸುತ್ತದೆ ಎಂದಿದೆ. ಆರ್ಥಿಕವಾಗಿ ಸಬಲರಾಗಿರುವ ದೇಶಗಳ ಅಭಿವೃದ್ಧಿಯ ಗುಟ್ಟು ಇದೇ ಆಗಿದ್ದು, ಅಮೆರಿಕ ಇದಕ್ಕೆ ಅತ್ಯುತ್ತಮ ಉದಾಹರಣೆ ಎಂದರು. 

ಪದವಿ ಪಡೆದ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಡೇವಿಡ್‌, ವೈದ್ಯಕೀಯ ಕ್ಷೇತ್ರ ಅತ್ಯುತ್ತಮ ಕ್ಷೇತ್ರಗಳಲ್ಲಿ ಒಂದಾಗಿದ್ದು, ಪದವಿ ಪಡೆದ ಬಳಿಕ ವೃತ್ತಿ ಧರ್ಮ ಮರೆಯಬಾರದು. ರೋಗಿಗಳ ಆರೈಕೆಯ ಸಂದರ್ಭ ಮಾನವೀಯತೆಯನ್ನು ಮೈಗೂಡಿಸಿಕೊಳ್ಳಬೇಕಲ್ಲದೆ ವೃತ್ತಿ ಧರ್ಮಕ್ಕೆ ಎಂದೂ ಅಪಚಾರ ಎಸಗುವ ಕೆಲಸ ಮಾಡಬಾರದು ಎಂದರು. ಈ ವೇಳೆ 610 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಕುಲಸಚಿವ ಡಾ| ನಾರಾಯಣ ಸಭಾಹಿತ್‌ ಪ್ರತಿಜ್ಞಾ ವಿಧಿ ಬೋಧಿಸಿದರು. ಕೆಎಂಸಿ, ಮಣಿಪಾಲದ ವಿದ್ಯಾರ್ಥಿನಿ ಡಾ| ಚಂದನಾ ಆಚಾರ್ಯ ಹಾಗೂ ಕೆಎಂಸಿ ಮಂಗಳೂರಿನ ವಿದ್ಯಾರ್ಥಿನಿ ಅಶ್ವಿ‌ನಿ ಎಂ.ಬಿ. ಇವರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. 

ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಸಹ ಕುಲಪತಿ ಡಾ| ವಿ. ಸುರೇಂದ್ರ ಶೆಟ್ಟಿ ಸ್ವಾಗತಿಸಿದರು. ಕುಲಪತಿ ಡಾ| ಎಚ್‌. ವಿನೋದ್‌ ಭಟ್‌ ಸಂಸ್ಥೆ ಬೆಳೆದು ಬಂದ ರೀತಿ ಹಾಗೂ ಸಾಧನೆಯ ಬಗ್ಗೆ ವಿವರಿಸಿದರು. ಡಾ| ಕಾರ್ತಿಕ್‌ ಶೆಟ್ಟಿ ಹಾಗೂ ಡಾ| ಅಶ್ವಿ‌ನ್‌ ಆರ್‌. ರೈ ಕಾರ್ಯಕ್ರಮ ನಿರೂಪಿಸಿದರು. ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಪರೀಕ್ಷಾಂಗ ಕುಲಸಚಿವ ಡಾ| ವಿನೋದ್‌ ವಿ. ಥೋಮಸ್‌, ಸಹ ಕುಲಪತಿ ಡಾ| ಪಿ.ಎಲ್‌.ಎನ್‌.ಜಿ. ರಾವ್‌, ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶಕಿ ಡಾ| ಗೀತಾ ಮಯ್ಯ, ಸಹ ಕುಲಸಚಿವ (ಶೈಕ್ಷಣಿಕ) ಡಾ| ಪ್ರೀತಮ್‌ ಕುಮಾರ್‌, ಸಹ ಕುಲಪತಿಗಳಾದ ಡಾ| ಪೂರ್ಣಿಮಾ ಬಾಳಿಗಾ, ಡಾ| ಸಿ.ಎಸ್‌. ತಮ್ಮಯ್ಯ, ಡೀನ್‌ ಡಾ| ದಿಲೀಪ್‌ ಜಿ. ನಾಯಕ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.