ಇಳಕಲ್ಲ ಶ್ರೀಗಳ ಅಂತ್ಯಕ್ರಿಯೆ ಇಂದು
Team Udayavani, May 21, 2018, 7:55 AM IST
ಬಾಗಲಕೋಟೆ: ಇಳಕಲ್ಲ ವಿಜಯ ಮಹಾಂತೇಶ್ವರ ಸಂಸ್ಥಾನಮಠದ ಡಾ| ಮಹಾಂತ ಶ್ರೀಗಳು ಕರ್ನಾಟಕದಾದ್ಯಂತ ಸಂಚರಿಸಿ ವ್ಯಸನಮುಕ್ತ ಸಮಾಜ ನಿರ್ಮಿಸುವಲ್ಲಿ ಹಾಗೂ 3ಲಕ್ಷ ಅಧಿಕ ವ್ಯಸನಿಗಳನ್ನು ವ್ಯಸನ ಮುಕ್ತರನ್ನಾಗಿಸಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಪ್ರಶಸ್ತಿ ಪುರಸ್ಕೃತರಾಗಿದ್ದರು. ಶ್ರೀಗಳಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಜಿ. ಶಾಂತಾರಾಂ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ವಂಶಿಕೃಷ್ಣ ಅವರೊಂದಿಗೆ ಇಳಕಲ್ಲಗೆ ತೆರಳಿ ಪೂಜ್ಯರಿಗೆ ಗೌರವ ಪುಷ್ಪ ಅರ್ಪಿಸಿದ ಜಿಲ್ಲಾಧಿಕಾರಿಗಳು, ಮೇ 21 ರಂದು ಮಧ್ಯಾಹ್ನ 1 ಗಂಟೆಗೆ ಇಳಕಲ್ಲ ನಗರದ ಹೊರವಲಯದಲ್ಲಿರುವ ವಿಜಯ ಮಹಾಂತೇಶ ಸಂಸ್ಥಾನಮಠದ ಗದ್ದುಗೆ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಹೇಳಿದರು.
ಅಂತ್ಯಸಂಸ್ಕಾರ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪರವಾಗಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆಗಮಿಸಿ ಗೌರವ
ಸಲ್ಲಿಸಲಿದ್ದಾರೆ.
ಬಾಗಲಕೋಟೆ ಜಿಲ್ಲಾ ಧಿಕಾರಿ ಕೆ.ಜಿ.ಶಾಂತಾರಾಂ ಮತ್ತು ಎಸ್‌ಪಿ ವಂಶಿಕೃಷ್ಣ ಶ್ರೀಗಳಿಗೆ ಪುಷ್ಪ ಅರ್ಪಿಸಿ ಅಂತಿಮ ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.