ಪರಿಸರಕ್ಕೆ ಹಾನಿ ಬೇಡ: ಎಚ್‌ಡಿಕೆ
Team Udayavani, May 21, 2018, 11:30 AM IST
ಬೆಂಗಳೂರು: ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ವೇಳೆ ಪಟಾಕಿಗಳನ್ನು ಸಿಡಿಸಿ, ಬ್ಯಾನರ್, ಬಂಟಿಂಗ್ಸ್‌ಗಳನ್ನು ಕಟ್ಟಿ ಪರಿಸರಕ್ಕೆ ಹಾನಿ ಮಾಡದಂತೆ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಮನವಿ ಮಾಡಿದ್ದಾರೆ.
ನಾನು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುತ್ತಿರುವುದು ಜನತೆ, ಕಾರ್ಯಕರ್ತರು, ಅಭಿಮಾನಿಗಳಿಗೆ ಹರ್ಷ ತಂದಿರಬಹುದು. ಈ ಸಂಭ್ರಮದಲ್ಲಿ ನಾನೂ ಕೂಡ ಭಾಗಿಯಾಗಿರುತ್ತೇನೆ. ಆದರೆ, ಈ ಸಂದರ್ಭದಲ್ಲಿ ಟಾಕಿಗಳನ್ನು ಸಿಡಿಸಿ, ಬ್ಯಾನರ್, ಬಂಟಿಂಗ್ಸ್‌ಗಳನ್ನು ಕಟ್ಟಿ ಪರಿಸರಕ್ಕೆ ಹಾನಿ ಮಾಡುವುದು ನನಗಿಷ್ಟವಿಲ್ಲ.
ನನ್ನ ಕಾರ್ಯಕರ್ತರೂ ಈ ರೀತಿ ಮಾಡಬಾರದು ಎಂಬುದು ನನ್ನ ಅನಿಸಿಕೆ. ನನ್ನ ಕಾರ್ಯಕರ್ತರು ಹೋರಾಟ, ಛಲಕ್ಕೆ ಎಷ್ಟು ಹೆಸರುವಾಸಿಯೋ ಹಾಗೆಯೇ ಪರಿಸರ ಪ್ರೇಮದಲ್ಲೂ ಮೇಲ್ಪಂಕ್ತಿ ಹಾಕಿಕೊಡಲಿದ್ದಾರೆ ಎಂದು ಭಾವಿಸಿಕೊಂಡಿದ್ದೇನೆ. ನಾವು ಪರಿಸರ ಸ್ನೇಹಿಗಳಾಗೋಣ. ಪರಿಸರ ಉಳಿಸೋಣ, ರಕ್ಷಿಸೋಣ ಎಂದು ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್; ಮಹಿಳೆಯರು ಸೇರಿ ಹಲವರ ಸಾವು
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.