ಬಿರುಗಾಳಿ, ಮಳೆಗೆ ಧರೆಗುರುಳಿದ ವಿದ್ಯುತ್‌ ಕಂಬ: ಸುಳ್ಯ ಕತ್ತಲುಮಯ

Team Udayavani, May 21, 2018, 3:37 PM IST

21-may-18.jpg

ಸುಳ್ಯ : ಶನಿವಾರ ತಡರಾತ್ರಿ ಬೀಸಿದ ಗಾಳಿ ಮಳೆಯ ಅಬ್ಬರದ ಪರಿಣಾಮ ಸುಳ್ಯ 33 ಕೆವಿ ಸಬ್‌ ಸ್ಟೇಷನ್‌ ವ್ಯಾಪ್ತಿಯಿಂದ ಹೊರಡುವ ವಿದ್ಯುತ್‌ ಪೂರೈಕೆ ಮಾರ್ಗಗಳು ಪೂರ್ಣ ಪ್ರಮಾಣದಲ್ಲಿ ಸ್ಥಗಿತಗೊಂಡು ಹತ್ತಾರು ಗ್ರಾಮಗಳು ಕತ್ತಲಲ್ಲೆ ಕಾಲ ಕಳೆದವು. ಬರೋಬ್ಬರಿ 24 ತಾಸು ಮಿಕ್ಕಿ ವಿದ್ಯುತ್‌ ಇಲ್ಲದೆ, ದಿನವಿಡೀ ಪರದಾಡುವ ಪರಿಸ್ಥಿತಿ ಉಂಟಾಯಿತು.

ಸುಳ್ಯ ನಗರ, ಜಾಲ್ಸೂರು, ಕನಕಮಜಲು, ಮಂಡೆಕೋಲು, ಮಡಪ್ಪಾಡಿ, ಮರ್ಕಂಜ, ಗುತ್ತಿಗಾರು, ದುಗಲಡ್ಕ, ದೇವಚಳ್ಳ, ನೆಲ್ಲೂರು ಕೆಮ್ರಾಜೆ, ಅರಂತೋಡು ಮೊದಲಾದ ಗ್ರಾಮಗಳಲ್ಲಿ ಶನಿವಾರ ತಡರಾತ್ರಿಯಿಂದ ರವಿವಾರ ದಿನಪೂರ್ತಿ ವಿದ್ಯುತ್‌ ಇರಲಿಲ್ಲ. ಹಲವು ಭಾಗದಲ್ಲಿ ಗಾಳಿ ಮಳೆಯಿಂದ ಉಂಟಾದ ತೊಂದರೆಯಿಂದ ಯಾವುದೇ ಫೀಡರ್‌ಗಳು ಕಾರ್ಯ ನಿರ್ವಹಿಸಲಿಲ್ಲ.

ಸುಳ್ಯ 33 ಕೆವಿ ಸಬ್‌ಸ್ಟೇಷನ್‌ ವ್ಯಾಪ್ತಿಯಲ್ಲಿ ನೂರಾರು ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿ ಉಂಟಾಗಿರುವುದು ವಿದ್ಯುತ್‌ ವ್ಯತಯಕ್ಕೆ ಕಾರಣವಾಗಿದೆ. ಹಲವೆಡೆ ಮರಗಳ ವಿದ್ಯುತ್‌ ಕಂಬ ಹಾಗೂ ಲೈನ್‌ ಮೇಲೆ ಬಿದ್ದಿದ್ದು, ಅದರ ತೆರವು ಕಾರ್ಯ ಆದ ಬಳಿಕ, ಹೊಸ ಕಂಬ ಅಳವಡಿಸಿ, ತಂತಿ ಎಳೆದು ವಿದ್ಯುತ್‌ ಸಂಪರ್ಕ ಕಲ್ಪಿಸಬೇಕಿದೆ.

33 ಕೆವಿ ಸಬ್‌ಸ್ಟೇಷನ್‌ ಕಚೇರಿ ಬಳಿಯೇ ವಿದ್ಯುತ್‌ ಕಂಬ ಧರೆಗುರಳಿದೆ. ನಗರದ ನಾನಾ ಭಾಗಗಳಲ್ಲಿ ಸಾಲು-ಸಾಲು ಕಂಬಗಳು ಉರುಳಿವೆ. ಮೆಸ್ಕಾಂ ಸಿಬಂದಿ ಕಂಬ ಜೋಡಣೆ ಕಾರ್ಯದಲ್ಲಿ ನಿರತರಾಗಿದ್ದು, ಪೂರ್ಣ ಪ್ರಮಾಣದಲ್ಲಿ ಅಳವಡಿಕೆಗೆ ಸೋಮವಾರ ತನಕವು ಕಾಯಬೇಕಿದೆ. ಕಾಡು ಆವರಿತ ಪ್ರದೇಶಗಳಲ್ಲೂ ಕಂಬಗಳಿಗೆ ಹಾನಿ ಉಂಟಾಗಿರುವುದು ತತ್‌ಕ್ಷಣ ಜೋಡಣೆಗೆ ಸವಾಲೆನಿಸಿದೆ.

ರವಿವಾರ ಪೇಟೆಯಲ್ಲಿ ವ್ಯವಹಾರ ನೀರಸವಾಗಿತ್ತು. ವಿದ್ಯುತ್‌ ಇಲ್ಲದ ಪರಿಣಾಮ ಸಣ್ಣ ಪುಟ್ಟ ಉದ್ಯಮದಾರರು, ಹೋಟೆಲ್‌, ಬೇಕರಿ, ಜ್ಯೂಸ್‌ ಸೆಂಟರ್‌ ಮೊದಲಾದ ಅಂಗಡಿ ಮುಂಗಟ್ಟುಗಳಿಗೆ ತೊಂದರೆ ಉಂಟಾಯಿತು. ಗ್ರಾಮಾಂತರ ಪ್ರದೇಶದಲ್ಲಿಯೂ ರಾತ್ರಿ ವಿದ್ಯುತ್‌ ಇಲ್ಲದೆ ಜನರು ಪರದಾಡಿದರು. ಕೊಳವೆಬಾವಿ, ನಳ್ಳಿ ನೀರು ಆಶ್ರಯ ಹೊಂದಿರುವ ಮಂದಿಯೂ ವಿದ್ಯುತ್‌ ಅಭಾವದಿಂದ ಸಮಸ್ಯೆಗೊಳಗಾದರು.

ಟಾಪ್ ನ್ಯೂಸ್

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.