ಭಾರತೀಯ ಸಂಸ್ಕೃತಿ ಜಗತ್ತಿಗೆ ಮಾದರಿ: ಕುಸುಗಲ್‌

Team Udayavani, May 21, 2018, 5:36 PM IST

21-may-25.jpg

ಕುಳಗೇರಿ ಕ್ರಾಸ್‌: ಮಠಗಳು ಸಂಸ್ಕೃತಿಯ ಪ್ರತೀಕ. ಇಡೀ ಜಗತ್ತಿಗೆ ಭವ್ಯ ಸಂಸ್ಕೃತಿಯನ್ನು ಪಸರಿಸಿದ ವಿಶ್ವಗುರು ಭಾರತ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ನಾಡಿನ ಸಾಧು-ಸಂತರ ಪಾತ್ರ ಹಿರಿದಾದುದು ಎಂದು ಪ್ರೊ.ಎಂ.ಎಸ್‌. ಕುಸುಗಲ್‌ ಅಭಿಪ್ರಾಯಪಟ್ಟರು.

ಸುಕ್ಷೇತ್ರ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶ್ರೀಗುರು ಬ್ರಹ್ಮಾನಂದ ಶಿವಾನುಭವ ಧರ್ಮಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 279ನೇ ಮಾಸಿಕ ಶಿವಾನುಭವದಲ್ಲಿ ಮಾತನಾಡಿದ ಅವರು, ಜಗತ್ತಿಗೆ ಸಮಾನತೆಯ ತತ್ವ ಸಾರಿದ ಬುದ್ಧ, ಬಸವ, ಯೇಸು, ಪೈಗಂಬರ್‌, ಅಂಬೇಡ್ಕರಂತಹ ಮಹಾನ್‌ ವ್ಯಕ್ತಿಗಳು ನೀಡಿದ ಸಿದ್ಧಾಂತಗಳು ಇಂದಿಗೂ ಪ್ರಸ್ತುತ ಮತ್ತು ಸರ್ವಕಾಲಿಕ. ಒಬ್ಬ ವ್ಯಕ್ತಿ ಉನ್ನತ ಸ್ಥಾನಕ್ಕೇರಲು ಕೇವಲ ಐಶ್ವರ್ಯದಿಂದ ಸಾಧ್ಯವಿಲ್ಲ. ಬದಲಾಗಿ ಉತ್ತಮ ಆಚಾರ-ವಿಚಾರ ಸನ್ನಡತೆಯಿಂದ ಮಾತ್ರ ಉತ್ತಮ ಪ್ರಜೆಯಾಗಲು ಸಾಧ್ಯ. ಬೆಂಕಿ ಇಲ್ಲದೇ ಮೇಣದ ಬತ್ತಿ ಹೇಗೆ ಉರಿಯಲು ಸಾಧ್ಯವಿಲ್ಲವೋ ಹಾಗೆ ಆಧ್ಯಾತ್ಮಿಕ ಎಂಬ ಜ್ಯೋತಿ ಇಲ್ಲದೇ ಮನುಜನ ಬಾಳು ಬೆಳಗಲು ಸಾಧ್ಯವಿಲ್ಲ. ಹೀಗಾಗಿ ಪ್ರತಿಯೊಬ್ಬರು ಶಿವಾನುಭದಂತಹ ಆಧ್ಯಾತ್ಮಿಕ ಗೋಷ್ಠಿಗಳಲ್ಲಿ ಪಾಲ್ಗೊಂಡು ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು ಎಂದು ಕರೆಕೊಟ್ಟರು.

ಉಪನ್ಯಾಸಕ ಆರ್‌.ಎಚ್‌.ತಿಗಡಿ ಮಾತನಾಡಿ, 12ನೇ ಶತಮಾನದಲ್ಲಿಯೇ ಸಮಾನತೆ ಸಂದೇಶ ಸಾರಿ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬಂತೆ ಕಾಯಕ ದಾಸೋಹದ ಪರಿಕಲ್ಪನೆಯನ್ನು ಜಗತ್ತಿಗೆ ಜಾತ್ಯತೀತೆಯ ಬೀಜವನ್ನು ಬಿತ್ತಿದ ಬಸವಾದಿ ಶರಣರ ಆದರ್ಶ ನಮಗೆಲ್ಲ ಮಾದರಿ ಎಂದರು.

ಶ್ರೀಮಠದ ಶಾಂತಲಿಂಗ ಶ್ರೀಗಳು ತಮ್ಮ ಆಶೀರ್ವಚನದ ಮೂಲಕ ಆಸೆ ಎಂಬುದು ಭವದ ಬೀಜ ನಿರಾಸೆಯೆಂಬುದು ನಿತ್ಯ ಮುಕ್ತಿ ಎಂಬಂತೆ ಮನುಷ್ಯನಲ್ಲಿ ಆಸೆ ಇರಬೇಕು. ಆದರೆ ದುರಾಸೆ ಇರಬಾರದು. ದುರಾಸೆ ಉಳ್ಳವರು ಜೀವನದಲ್ಲಿ ಸಫಲತೆ ಕಾಣಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿಯ ವ್ಯಕ್ತಿತ್ವ ಹಾಗೂ ಬದುಕು ರೂಪುಗೊಳ್ಳುವುದು ಅವನ ಚಿಂತನೆಗಳಿಂದ ಹೊರತು ಅವನ ಹಣದಿಂದಲ್ಲ. ಮನುಷ್ಯರಾದವರು ಏನನ್ನು
ಯೋಚಿಸುತ್ತೇವೆಯೋ ಅದೆ ನಾವಾಗುತ್ತೇವೆ. ಹೀಗಾಗಿ ಉತ್ತಮ ಚಿಂತನೆಗಳನ್ನು ಅಳವಡಿಸಿಕೊಂಡಾಗ ಮಾತ್ರ ದೊಡ್ಡವನಾಗಲು ಸಾಧ್ಯ ಎಂದರು.

ಇದೇ ಸಂದರ್ಭದಲ್ಲಿ ಮಲೇಷಿಯಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ ಶಿಪ್‌ಗೆ ಆಯ್ಕೆಯಾದ ಕುಮಾರ ಚಂದ್ರಶೇಖರಗೌಡ ತಮ್ಮನಗೌಡ್ರ ಅವರನ್ನು ಶ್ರೀಮಠದಿಂದ ಅಭಿನಂದಿಸಿ ಸತ್ಕರಿಸಲಾಯಿತು. ಪ್ರೊ.ಪಿ.ಎಸ್‌.ಅಣ್ಣಿಗೇರಿ, ಎಸ್‌.ಐ. ಅಂಕಲಿ, ಬಿ.ವೈ. ಕಲ್ಲನಗೌಡ್ರ, ಸಂಗನಗೌಡ್ರ ತಮ್ಮನಗೌಡ್ರ, ಶಿಕ್ಷಕರಾದ ಕುಂದರಗಿ ಇದ್ದರು. ಮಹಾಂತೇಶ ಹಿರೇಮಠ ನಿರೂಪಿಸಿದರು, ಉಮೇಶ ಹಾದಿಮನಿ ಸ್ವಾಗತಿಸಿದರು. ಶಿವಮೂರ್ತಿ ವಂದಿಸಿದರು.

ಟಾಪ್ ನ್ಯೂಸ್

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Former South Africa’s No. 1 bowler jailed in fixing case

S.Africa: ಫಿಕ್ಸಿಂಗ್‌ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್‌ 1 ಬೌಲರ್‌

7-wedding

Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್‌ ಭಕ್ಷ್ಯಗಳಿವು…

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

8-cubbon-park-3

Bengaluru: ಕಬ್ಬನ್‌ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ

Former South Africa’s No. 1 bowler jailed in fixing case

S.Africa: ಫಿಕ್ಸಿಂಗ್‌ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್‌ 1 ಬೌಲರ್‌

7-wedding

Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್‌ ಭಕ್ಷ್ಯಗಳಿವು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.