ಮುಂಬಯಿ: ನಾಪತ್ತೆಯ ಮಂದಿ ಅರ್ಧಾಂಶ 16-25 ವಯೋಗುಂಪಿನವರು
Team Udayavani, May 22, 2018, 11:32 AM IST
ಮುಂಬಯಿ : ಮುಂಬಯಿ ಮಹಾನಗರಿಯಲ್ಲಿ ವರ್ಷಂಪ್ರತಿ ನಾಪತ್ತೆಯಾಗುವ ಜನರಲ್ಲಿ ಅರ್ಧಾಂಶ ಮಂದಿ 16ರಿಂದ 25ರ ವಯೋಮಾನದವರಾಗಿರುತ್ತಾರೆ ಎಂದು ಮುಂಬಯಿ ಪೊಲೀಸರು ಆರ್‌ಟಿಐ ಪ್ರಶ್ನೆಗೆ ಉತ್ತರಿಸಿದ್ದಾರೆ.
ವರ್ಷಂಪ್ರತಿ ಮುಂಬಯಿ ಮಹಾನಗರಿಯಲ್ಲಿ ನಾಪತ್ತೆಯಾಗುತ್ತಿರುವ ಜನರ ಸಂಖ್ಯೆ ಏರುತ್ತಿದೆ; 2014, 2015 ಮತ್ತು 2016ರಲ್ಲಿ ಒಟ್ಟು 32,598 ಜನರು ಈ ಮಹಾನಗರಿಯಲ್ಲಿ ನಾಪತ್ತೆಯಾಗಿದ್ದಾರೆ; ಈ ಪೈಕಿ 27,565 ಮಂದಿಯನ್ನು ಅನಂತರದಲ್ಲಿ ಪತ್ತೆ ಹಚ್ಚಲಾಗಿದೆ ಎಂದು ಮುಂಬಯಿ ಕ್ರೈಮ್ ಬ್ರಾಂಚ್ ಸಹಾಯಕ ಪೊಲೀಸ್ ಕಮಿಷನರ್ ಭರತ್ ಗಾಯಕ್‌ವಾಡ್ ಅವರು ಆರ್‌ಟಿಐ ಕಾರ್ಯಕರ್ತ ಚೇತನ್ ಕೊಠಾರಿ ಅವರಿಗೆ ನೀಡಿರುವ ಉತ್ತರದಲ್ಲಿ ತಿಳಿಸಿದ್ದಾರೆ.
2014ರಲ್ಲಿ 10,916, 2015ರಲ್ಲಿ 10,313 ಮತ್ತು 2016ರಲ್ಲಿ 11,369 ಮಂದಿ ನಾಪತ್ತೆಯಾಗಿರುವುದನ್ನು ಗಮನಿಸಿದರೆ ವರ್ಷಂಪ್ರತಿ ನಾಪತ್ತೆಯಾಗುತ್ತಿರುವ ಜನರ ಸಂಖ್ಯೆ ಹೆಚ್ಚುತ್ತಿರುವುದು ಸ್ಪಷ್ಟವಿದೆ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.