ಸಿಲಿಂಡರ್‌ ಸ್ಫೋಟ ಪ್ರಕರಣ: ಗಾಯಾಳು ಹೆಣ್ಣು ಮಗು ಸಾವು

Team Udayavani, May 22, 2018, 12:30 PM IST

bid-3.jpg

ಹುಮನಾಬಾದ: ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿ ಕಳೆದ ಶನಿವಾರ ಮಧ್ಯಾಹ್ನದ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್‌ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹೆಣ್ಣು ಮಗು ಮೃತಪಟ್ಟಿದೆ.

ಜೊಯಲ್‌ ಯೂನೂಸ್‌ ಪಠಾಣ್‌(5) ಎಂಬಾಕೆ ಮೃತಪಟ್ಟಿದ್ದಾಳೆ. ಮಹಾರಾಷ್ಟ್ರದ ಮಿರಜ್‌ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ಮಗು ಮೃತಪಟ್ಟಿದ್ದು, ಮಗುವಿನ ತಂದೆ ಸೇರಿದಂತೆ ಇನ್ನು ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರ್ಖಾನೆಯಲ್ಲಿ ವಸತಿ: ಕೈಗಾರಿಕಾ ಪ್ರದೇಶದಲ್ಲಿ ವಸತಿ ವ್ಯವಸ್ಥೆ ಮಾಡುವುದು ಕಾನೂನು ಬಾಹಿರ. ಅಲ್ಲದೇ ದೊಡ್ಡ ಮಟ್ಟದ ಕೈಗಾರಿಕಾ ಕಾರ್ಖಾನೆಗಳಲ್ಲಿಯೇ ಕಾರ್ಮಿಕರಿಗೆ ವಸತಿ ವ್ಯವಸ್ಥೆ ಕಲ್ಪಿಸುತ್ತಿದ್ದರು ಕೂಡ ಸಂಬಂಧಿಸಿದ ಅಧಿ ಕಾರಿಗಳು ಮಾತ್ರ ಮೌನಕ್ಕೆ ಶರಣಾಗಿದ್ದಾರೆ. ಕಾಲಕಾಲಕ್ಕೆ ಸಂಬಂಧಪಟ್ಟವರು ಕೈಗಾರಿಕಾಗಳ ಮೇಲೆ ಕಣ್ಣು ಹರಿಸಿದರೆ ಅವಘಡ ಸಂಭವಿಸುವಂತಹ ಘಟನೆಗಳು ನಡೆಯುತ್ತಿರಲಿಲ್ಲ. ಸಂಬಂಧಿಸಿದ ಅಧಿಕಾರಿಗಳು ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಮಿಕರ ವಸತಿ ಕುರಿತು ಪರಿಶೀಲಿಸುವುದು ಅಗತ್ಯವಾಗಿದೆ ಎಂಬ ಆಗ್ರಹ ಕೇಳಿ ಬಂದಿದೆ. 

ಈ ಹಿಂದೆ ಕೂಡ ಕೈಗಾರಿಕಾ ಪ್ರದೇಶದ ರಾಸಾಯನಿಕ ಘಟಕದಲ್ಲಿ ಬೆಂಕಿ ತಗುಲಿ ಮುಖ್ಯ ಇಂಜಿನಿಯರ್‌ ಸಜೀವ ದಹನವಾದ ನಂತರ ಕಾರ್ಮಿಕ ಇಲಾಖೆ ಅಧಿಕಾರಿಗಳು ಎಚ್ಚೆತುಕೊಳ್ಳುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ ಇಂದಿಗೂ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುವ ಬಡಪಾಯಿಗಳ ಜೀವಕ್ಕೆ ಬೆಲೆ ಇಲ್ಲ ಎಂಬಂತೆ ಸಂಬಂಧಿಸಿದವರು ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

ನಾಮ ಫಲಕ ಇಲ್ಲ: ಕೈಗಾರಿಕಾ ಪ್ರದೇಶದಲ್ಲಿನ ಬಹುತೇಕ ಕಾರ್ಖಾನೆಗಳಿಗೆ ನಾಮಫಲಕ ಇಲ್ಲ. ಅನಿಲ ನ್ಪೋಟಗೊಂಡ ಘಟನೆ ನಂತರ ಘಟನಾ ಸ್ಥಳಕ್ಕೆ ಪೊಲೀಸ್‌ ಅದಿಕಾರಿಗಳು ಭೇಟಿ ನೀಡುವ ಸಂದರ್ಭದಲ್ಲಿ ಯಾವ ಕಂಪನಿ ಎಂದು ಹುಡುಕುವ ಸ್ಥಿತಿ ಇತ್ತು. ಕಾರಣ ಅಲ್ಲಿನ ಕಾರ್ಖಾನೆಗಳಲ್ಲಿ ನಾಮಫಲಕಗಳು ಇಲ್ಲ. ಅಲ್ಲದೇ ಆ ಕಾರ್ಖಾನೆ ಅಥವಾ ಕಂಪನಿಗಳಲ್ಲಿ ಯಾವ ಪದಾರ್ಥ, ವಸ್ತು ತಯಾರಿಸಲಾಗುತ್ತಿದೆ ಎಂಬ ವಿವರಣೆ ಕೂಡ ಇಲ್ಲ. ಈ ಕುರಿತು ಅನೇಕ ಬಾರಿ ಬೆಳಕು ಚಲ್ಲಿದರು ಕೂಡ ಅಧಿಕಾರಿಗಳು ಮಾತ್ರ ಯಾವುದಕ್ಕೂ ತಲೆ ಕಡೆಸಿಕೊಂಡಿಲ್ಲ. ಇಂತಹ ದುರ್ಘ‌ಟನೆಗಳು ಸಂಭವಿಸಿದ ಸಂದರ್ಭದಲ್ಲಿ ಮೊದಲಿಗೆ ಕರ್ತವ್ಯ ಲೋಪ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು. ಜಿಲ್ಲಾಡಳಿತ ಕೂಡ ಇತ್ತ ಹೆಚ್ಚಿನ ಗಮನಹರಿಸಬೇಕಾದ ಅನಿವಾರ್ಯತೆ ಕೂಡ ಇದೆ ಎನ್ನುತ್ತಾರೆ ಕೈಗಾರಿಗೆ ಪ್ರದೇಶ ಸುತ್ತಲಿನ ಜನರು.

ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಕುರಿತು ಕಾರ್ಮಿಕ ಇಲಾಖೆ ಸಂಪೂರ್ಣ ಮಾಹಿತಿ ಸಂಗ್ರಹಿಸಬೇಕು. ಸೂಕ್ತ ಸಮಯಕ್ಕೆ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳು, ಸಂಬಳ ಸೇರಿದಂತೆ ಕಾರ್ಮಿಕರ ಕುಂದುಕೊರತೆ ಬಗ್ಗೆ ಗಮನಹರಿಸುವ ಕೆಲಸ ಮಾಡಬೇಕು. ಅಲ್ಲದೇ ವಿವಿಧ ಕಾರ್ಖಾನೆಗಳು ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ಅಧಿಕಾರಿಗಳು ಚಿತ್ತ ಹರಿಸಬೇಕು ಎಂದು ಆಗ್ರಹಿಸಲಾಗಿದೆ. 

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.