ಗಾಳಿ-ಬೆಳಕಿನಷ್ಟೇ ಯೋಗವೂ ಅನಿವಾರ್ಯ
Team Udayavani, May 22, 2018, 4:40 PM IST
ಚಿತ್ರದುರ್ಗ: ಮನುಷ್ಯನಿಗೆ ಗಾಳಿ, ಬೆಳಕು, ನೀರು ಎಷ್ಟು ಮುಖ್ಯವೋ ಯೋಗವೂ ಅಷ್ಟೇ ಅನಿವಾರ್ಯ. ಇದು ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ನಗರದ ಈಶ್ವರೀಯ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಚಿತ ಯೋಗ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯೋಗದ ಬಗ್ಗೆ ಯುವಕರಲ್ಲಿ ಅರಿವು ಮೂಡಿಸುವ ದೃಷ್ಟಿಯಿಂದ ವಿಶ್ವ ಯೋಗ ದಿನ ಘೋಷಿಸಿದರು. ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಯೋಗಕ್ಕೆ ವಿಶೇಷ ಸ್ಥಾನ ನೀಡಿ ಗೌರವಿಸಲಾಗಿದೆ. ಆಧುನಿಕ ವೈದ್ಯಕೀಯ ಚಿಕಿತ್ಸೆಯಿಂದ ಗುಣವಾಗದ ಕಾಯಿಲೆಗಳನ್ನು ಯೋಗ ಗುಣಪಡಿಸಿದೆ ಎಂದು ತಿಳಿಸಿದರು.
ಪ್ರತಿಯೊಬ್ಬರೂ ಯೋಗ ಮಾಡುವುದರಿಂದ ಏಕಾಗ್ರತೆ ಸಾಧಿಸಬಹುದು. ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಯೋಗ ಸಾಧನೆಯ ಅವಶ್ಯಕತೆ ಹೆಚ್ಚಿದೆ. ನಾವು ಉಪಯೋಗಿಸುವ ಆಹಾರ, ನೀರು, ಉಸಿರಾಡುವ ಗಾಳಿ ಎಲ್ಲವೂ ಮಲಿನಗೊಂಡಿದೆ. ಇದರಿಂದ ರೋಗ ರುಜಿನಗಳಿಂದ ಬಳಲುವಂತಾಗಿದೆ.
ಇವುಗಳಿಂದ ಸಾಧ್ಯವಿರುವಷ್ಟು ವಿಮುಕ್ತರಾಗಿ ಆರೋಗ್ಯವಂತರಾಗಿ, ದೀರ್ಘಾಯುಗಳಾಗಿ ಬದುಕಿ ಬಾಳಲು ಯೋಗಾಭ್ಯಾಸ, ಪ್ರಕೃತಿ ಚಿಕಿತ್ಸೆ ಅಗತ್ಯ. ಯೋಗಾಸನ ಮನುಷ್ಯನ ಶರೀರದ ರಚನಾ ಶಾಸ್ತ್ರದ ಆಧಾರದ ಮೇಲೆ ನಿಂತಿದೆ.
ಯೋಗಾಸನವೆಂಬುದು ಜಗತ್ತಿಗೆ ಭಾರತದ ದೊಡ್ಡ ಕೊಡುಗೆ. ಯೋಗಾಭ್ಯಾಸದಿಂದ ಜೀರ್ಣಾಂಗಗಳ ಶಕ್ತಿ ವೃದ್ಧಿಗೊಳ್ಳುತ್ತದೆ. ಇದರಿಂದ ಹಲವಾರು ರೋಗಗಳನ್ನು ತಡೆಗಟ್ಟಬಹುದು. ಶರೀರ ಸ್ವಾಸ್ಥ್ಯಕ್ಕಾಗಿ ಕೆಲವು ಯೋಗಾಸನಗಳನ್ನಾದರೂ ನಮ್ಮ ನಿತ್ಯ ಜೀವನದಲ್ಲಿ ಆಚರಣೆಯಲ್ಲಿಟ್ಟುಕೊಳ್ಳುವುದು ಉತ್ತಮ ಎಂದು ಹೇಳಿದರು.
ಮುಖ್ಯ ಆಯುಷ್ ಅಧಿಕಾರಿ ಸಿದ್ಧೇಶ್ವರ, ಯೋಗ ಗುರುಗಳಾದ ರಾಘವೇಂದ್ರ, ಸೋಮಣ್ಣ, ಹೇಮಾವತಿ, ಈಶ್ವರೀಯ ವಿಶ್ವವಿದ್ಯಾಲಯದ ಶಿವರಶ್ಮಿ ಅಕ್ಕ ಇದ್ದರು.
ಬದಲಾಗುತ್ತಿರುವ ಆಧುನಿಕ ಆಹಾರ ಪದ್ಧತಿಯಿಂದಾಗಿ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಉಂಟಾಗುತ್ತಿದೆ.
ಯೋಗ ಮಾಡುವುದರಿಂದ ಕಾಯಿಲೆಯಿಂದ ದೂರ ಇರಬಹುದು. ಆರೋಗ್ಯದ ದೃಷ್ಟಿಯಿಂದ ಪ್ರತಿಯೊಬ್ಬರೂ ಪ್ರತಿ ದಿನ ಯೋಗ ಮಾಡುವುದನ್ನು ಕಲಿಯಬೇಕು.
ಜಿ.ಎಚ್. ತಿಪ್ಪಾರೆಡ್ಡಿ, ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.