ಜಾನಪದದ ವೈಜ್ಞಾನಿಕ  ಅಧ್ಯಯನ ಅಗತ್ಯ: ಡಾ| ನಾಯಕ


Team Udayavani, May 24, 2018, 4:43 PM IST

24-may-17.jpg

ಧಾರವಾಡ: ಇಂದು ಜಾನಪದವನ್ನೂ ಆಧುನಿಕತೆಗೆ ಒಳಗೂಂಡು ವೈಜ್ಞಾನಿಕವಾಗಿ ಅಧ್ಯಯನ ಮಾಡಬೇಕಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ| ಡಿ.ಬಿ. ನಾಯಕ ಹೇಳಿದರು.

ನಗರದ ಕರ್ನಾಟಕ ಬಿಬಿಎ ಅಡಿಟೋರಿಯಂನಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಕನ್ನಡ ಅಧ್ಯಾಪಕರ ಪರಿಷತ್‌ ಮತ್ತು ಕರ್ನಾಟಕ ಕಲಾ ಮಹಾವಿದ್ಯಾಲಯದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾನಪದ ಮತ್ತು ಆಧುನಿಕತೆ ಎಂಬ ವಿಷಯ ಕುರಿತು ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಅಂದಿನ ಜನಪದದಲ್ಲಿ ಕುಟುಂಬ ವ್ಯವಸ್ಥೆ, ಸಾಮಾಜಿಕ ವ್ಯವಸ್ಥೆ ಮತ್ತು ಆರ್ಥಿಕ ವ್ಯವಸ್ಥೆಗಳನ್ನು ಶಿಸ್ತುಬದ್ಧ ರೀತಿಯಲ್ಲಿ ನೋಡಬಹುದಾಗಿದೆ. ಅದರಲ್ಲೂ ಪ್ರದೇಶದಿಂದ ಪ್ರದೇಶಕ್ಕೆ ನಮ್ಮ ಸಂಪ್ರದಾಯ ಪದ್ಧತಿಗಳು ಮತ್ತು ಮೌಲ್ಯಗಳಲ್ಲಿ ವಿವಿಧತೆಯನ್ನು ಕಾಣುತ್ತಿದ್ದೇವೆ. ಆದರೆ ಇಂದು ಆಧುನಿಕತೆಯ ಪ್ರಭಾವದಿಂದ ಮನುಷ್ಯನು ಎಲ್ಲವನ್ನು ವ್ಯವಹಾರಿಕ ದೃಷ್ಟಿಕೋನದಿಂದ ನೋಡುತ್ತಿದ್ದಾನೆ. ಇದು ಮುಂದೆ ಸಾಮಾಜಿಕವಾಗಿ ಪರಿಣಾಮ ಬೀರಬಹುದು ಎಂದರು.

ವಿಚಾರ ಸಂಕಿರಣ ಉದ್ಘಾಟಿಸಿದ ಕವಿವಿ ಕುಲಪತಿ ಪ್ರೊ | ಪ್ರಮೋದ ಗಾಯಿ ಮಾತನಾಡಿ, ಸಂಸ್ಕೃತಿ, ಸಂಪ್ರದಾಯಗಳು ಆಧುನಿಕತೆಯ ಮೂಲವಾಗಿವೆ. ಆಧುನಿಕತೆಯ ಹುಟ್ಟು ಜಾನಪದದಲ್ಲಿ ಇದೆ. ಜಾನಪದ ಮತ್ತು ಆಧುನಿಕತೆ ಒಂದಕ್ಕೊಂದು ತದ್ವಿರುದ್ಧವಾದರೂ ಆಧುನಿಕತೆಯು ಜನಪದದ ಹುಟ್ಟಿನಿಂದ ನಮ್ಮ ಸಂಸ್ಕೃತಿ, ಸಂಪ್ರದಾಯಗಳು ವಿವಿಧ ರೀತಿಯಲ್ಲಿ ಭಿನ್ನ ರೂಪಗಳನ್ನು ಪಡೆದುಕೊಂಡಿವೆ. ಇದನ್ನು ನಾವು ಆಧುನಿಕತೆ ಎಂದು ಕರೆಯುತ್ತವೆ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ| ರಾಜೇಶ್ವರಿ ಮಹೇಶ್ವರಯ್ಯ ಮಾತನಾಡಿ, ಇಂದಿನ ಶಿಕ್ಷಕರು ಜನಪದದ ಕುರಿತು ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಕನ್ನಡ ಅಧ್ಯಾಪಕರ ಪರಿಷತ್ತಿನಿಂದ ವಿಶೇಷ ವಲಯದಲ್ಲಿ ಸಾಧನೆ ಮಾಡಿದ ಕನ್ನಡ ಭಾಷಾ ಪ್ರಾಧ್ಯಾಪಕರನ್ನು ಸನ್ಮಾನಿಸಲಾಯಿತು.

ಗೊಟಗೋಡಿಯ ಜಾನಪದ ಕಲಾವಿದರು ಜಾನಪದ ಗೀತೆಗಳನ್ನು ಪ್ರಸ್ತುತ ಪಡಿಸಿದರು. ಡಾ| ಜೀನದತ್ತ ಹಡಗಲಿ ಮಾತನಾಡಿದರು. ಡಾ| ಬಿ.ಪಿ. ಮಠದ, ಪ್ರೊ | ಎಸ್‌.ಎಸ್‌. ಕಾಡಮ್ಮನವರ್‌, ಡಾ| ಬಿ.ಎಸ್‌.ಭಜಂತ್ರಿ, ಡಾ| ಶ್ರೀಶೈಲ್‌ ಹುದ್ದಾರ, ಕೋರಿಶೇಟ್ಟರ್‌ ಸೇರಿದಂತೆ ಹಲವರು ಇದ್ದರು. ಡಾ| ಆರ್‌.ಎಸ್‌. ದಾನರೆಡ್ಡಿ ನಿರೂಪಿಸಿದರು. ಡಾ| ವೈ.ಎಂ. ಭಜಂತ್ರಿ ವಂದಿಸಿದರು.

ಜಾನಪದದಂತಹ ವಿಷಯಗಳು ನಮ್ಮಿಂದ ದೂರವಾಗುತ್ತಿವೆ. ಜಾನಪದ ಶೈಲಿಯಲ್ಲಿ ತಲೆಗೆ ರುಮಾಲು ಕಟ್ಟಲು ಇಂದು ಯಾರಿಗೂ ಬರುತ್ತಿಲ್ಲ. ಇಂದು ರುಮಾಲು ಕಟ್ಟಲು ತರಬೇತಿ ಕೊಡುವ ಪರಿಸ್ಥಿತಿ ಬಂದಿದೆ. ಇದು ಜಾನಪದದ ಶಿಥಿಲತೆಗೆ ಹಿಡಿದ ಕನ್ನಡಿ.
ಡಾ| ಡಿ.ಬಿ. ನಾಯಕ,
ಕುಲಪತಿ, ಕಜಾವಿವಿ, ಹಾವೇರಿ

ಟಾಪ್ ನ್ಯೂಸ್

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.