ಗುಲ್ಬರ್ಗ ವಿವಿ: ಮುಂದುವರಿದ ಅವಾಂತರ

Team Udayavani, May 24, 2018, 5:30 PM IST

tmk-1.jpg

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ವಿವಿಧ ಪದವಿಗಳ ಎರಡನೇ, ನಾಲ್ಕನೇ ಹಾಗೂ ಆರನೇ ಸೆಮಿಸ್ಟಾರ್‌ ಪರೀಕ್ಷೆ ಕಳೆದ ಮೇ 18ರಿಂದ ಆರಂಭವಾಗಿದ್ದು, ವಾರದೊಳಗೆ ಎರಡು ದಿನ ದಿಢೀರನೇ ಪರೀಕ್ಷೆ ಮುಂದೂಡುವ ಮುಖಾಂತರ
ಒಂದು ವರ್ಷವೂ ಸುಗಮವಾಗಿ ಪರೀಕ್ಷೆ ನಡೆಸಲಿಕ್ಕೆ ಬಾರದು ಎನ್ನುವುದನ್ನು ಮತ್ತೂಮ್ಮೆ ನಿರೂಪಿಸಿದೆ.

ಮೇ 21ರಂದು ನಡೆಯಬೇಕಿದ್ದ ಬಿಎಸ್ಸಿ ಎರಡನೇ ಸೆಮಿಸ್ಟಾರ್‌ ಪರೀಕ್ಷೆಯನ್ನು ರವಿವಾರ ಮಧ್ಯರಾತ್ರಿ ಮುಂದೂಡಲಾಗಿತ್ತು. ಮೇ 23ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದ ಸಂದರ್ಭದಲ್ಲಿ ಮುಂದೂಡುವ ನಿರ್ಧಾರ ಪ್ರಕಟಿಸಲಾಯಿತು. 

ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಧಿಡೀರ ಮುಂದೂಡಿಕೆ ನಿರ್ಧಾರ ಕೇಳಿ ಬೇಸರ ವ್ಯಕ್ತಪಡಿಸಿದರಲ್ಲದೇ ಗುಲ್ಬರ್ಗ ವಿವಿಗೆ ಪರೀಕ್ಷೆಯೊಂದನ್ನು ಸಹ ಸರಿಯಾಗಿ ನಡೆಸಲಿಕ್ಕೆ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಕಟಗೊಳ್ಳದ ಪ್ರಶ್ನೆ ಪತ್ರಿಕೆ: ಬುಧವಾರ ನಡೆಯಬೇಕಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಪ್ರಕಟಗೊಳ್ಳದ ಕಾರಣ ಪರೀಕ್ಷೆಯನ್ನು ದಿಢೀರನೇ ಮುಂದೂಡಲಾಗಿದೆ. ಸಕಾಲಕ್ಕೆ ಮುದ್ರಣಾಲಯದಿಂದ ಪ್ರಶ್ನೆ ಪತ್ರಿಕೆ ಮುದ್ರಣಗೊಂಡು ವಿವಿಗೆ ಬಾರದಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ. ಎಲ್ಲ ವಿಷಯಗಳ ಪರೀಕ್ಷೆ ಮುಗಿದ ನಂತರ ಕೊನೆಗೆ ಬುಧವಾರದ ಪರೀಕ್ಷೆ ತೆಗೆದುಕೊಳ್ಳಲಾಗುವುದು ಎಂದು ವಿವಿ ಪರೀಕ್ಷಾ ವಿಭಾಗದ ಕುಲಸಚಿವ ಡಾ| ಡಿ.ಎಂ. ಮದರಿ ಉದಯವಾಣಿಗೆ ತಿಳಿಸಿದ್ದಾರೆ.

ಸುಸೂತ್ರ ಪರೀಕ್ಷೆ ಮರೆತಿರುವ ವಿವಿ: ಕಳೆದ ದಶಕದ ಅವಧಿಯಿಂದಲೂ ಪರೀಕ್ಷೆ ಸಮಯದಲ್ಲಿ ನಡೆಯುತ್ತಿರುವ ಅವಾಂತರಗಳನ್ನು ನೋಡಿದರೆ ಗುಲ್ಬರ್ಗ ವಿವಿ ಸುಗಮ ಅಥವಾ ಸುಸೂತ್ರದ ಪರೀಕ್ಷೆಯನ್ನು ಮರೆತಿದೆ ಎಂಬುದನ್ನು ನಿರೂಪಿಸುತ್ತಿದೆ.

ಕಳೆದ ಐದಾರು ವರ್ಷಗಳಿಂದ ಪರೀಕ್ಷೆ ಸಮಯದಲ್ಲಿ ಒಂದಿಲ್ಲ ಒಂದು ವಿಷಯದ ಪ್ರಶ್ನೆ ಪತ್ರಿಕೆ ಬಹಿರಂಗಗೊಳ್ಳುತ್ತಲೇ ಬಂದಿದೆ. ಕಳೆದ ಹಾಗೂ ಅದರ ಹಿಂದಿನ ವರ್ಷವಂತೂ ದಿನಾಲು ಎನ್ನುವಂತೆ ಮೂರು ವಿಷಯಗಳ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡು ಇಡೀ ವಿವಿಗೆ ಕಪ್ಪು ಚುಕ್ಕೆಯಾಗಿರುವುದನ್ನು ಯಾರೂ ಮರೆಯುವಂತಿಲ್ಲ.

ಪ್ರಶ್ನೆ ಪತ್ರಿಕೆ ಬಹಿರಂಗ ತನಿಖೆಗೆ ಒಳಪಡಿಸಲಾಯಿತಲ್ಲದೇ ಪೊಲೀಸ್‌ ಠಾಣೆ ಮೆಟ್ಟಿಲೇರಿ ದೂರು ಸಹ ನೀಡಲಾಗಿತ್ತು. ಆದರೆ ಫಲಿತಾಂಶ ಮಾತ್ರ ಶೂನ್ಯ ಎನ್ನುವಂತಾಗಿದೆ. ಸಾಮೂಹಿಕ ನಕಲು ಎನ್ನುವುದು ಪರೀಕ್ಷೆಯಲ್ಲಿ ಬಿಡಿಸಲಾಗದ
ನಂಟು ಎನ್ನುವಂತೆ ಬೆನ್ನು ಹತ್ತಿದೆ. ಇದನ್ನು ತಪ್ಪಿಸಲು ಪ್ರಸಕ್ತವಾಗಿ ಕ್ಲಸ್ಟರ್‌ ಪದ್ಧತಿ ಜಾರಿಗೆ ತರಲಾಗಿದೆ.

ಆದರೆ ವಿವಿ ಚಾಪೆ ಕೆಳಗೆ ತೂರಿದರೆ ಖಾಸಗಿ ಕಾಲೇಜುಗಳು ಹಾಗೂ ವಿದ್ಯಾರ್ಥಿಗಳು ರಂಗೋಲಿ ಕೆಳಗೆ ತೂರಿದಂತೆ ಕ್ಲಸ್ಟರ್‌ ಪದ್ಧತಿ ಉಲ್ಲಂಘನೆ (ವೈಲೆನ್ಸ್‌ ) ನಿಯಮದಡಿ ಪ್ರತಿ ವಿದ್ಯಾರ್ಥಿಯಿಂದ 10 ಸಾವಿರ ರೂ. ದಂಡ ಕಟ್ಟಿಸಿ ಖಾಸಗಿ ಕಾಲೇಜಿನವರು ತಮ್ಮ ಕಾಲೇಜಿನಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಪಡೆಯುತ್ತಿರುವುದನ್ನು ನೋಡಿದರೆ ಪರೀಕ್ಷೆ
ವ್ಯವಸ್ಥೆಯನ್ನೇ ಅಣಕಿಸುವಂತಿದೆ. 

ಹಿಂದುಳಿದ ಈ ಭಾಗದಲ್ಲಿನ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಲಿ ಎನ್ನುವ ಆಶಯದೊಂದಿಗೆ ಮೂರು ದಶಕಗಳ ಹಿಂದೆ ಇಲ್ಲಿ ಪ್ರಾರಂಭವಾಗಿರುವ ಗುಲ್ಬರ್ಗ ವಿವಿ ಆರಂಭದಿಂದಲೂ ಒಂದಿಲ್ಲ ಒಂದು ವಿವಾದ ಹಗರಣ, ಕುಖ್ಯಾತಿ ಪಡೆಯುತ್ತಾ ಬಂದಿದೆ. ಅಲ್ಲದೇ ಈಗ ಸುಸೂತ್ರ ಪರೀಕ್ಷೆ ನಡೆಸಲಾರದ ಸಮಸ್ಯೆಯಿಂದ ಹೊರ ಬಾರದೇ ನರಳಾಡುತ್ತಿದೆ.

ವಿವಿಯಲ್ಲಿ ಬಹು ಮುಖ್ಯವಾಗಿ ಜಾತಿಯತೆ ತಾಂಡವಾಡುತ್ತಿದೆ. ಎಲ್ಲದಕ್ಕೂ ಜಾತಿಯನ್ನೇ ಮುಂದು ಮಾಡಲಾಗುತ್ತಿದೆ. ಅದರಲ್ಲೂ ಅಧ್ಯಯನ-ಅಧ್ಯಾಪನ ಮರೆತಿರುವ ಗುಲ್ಬರ್ಗ ವಿಶ್ವವಿದ್ಯಾಲಯ ಶೈಕ್ಷಣಿಕ ಚುಟವಟಿಕೆಗಳಲ್ಲಿ ಪ್ರಮುಖವಾಗಿರುವ ಪರೀಕ್ಷೆಯನ್ನೇ ಸರಿಯಾಗಿ ನಡೆಸಲಿಕ್ಕೆ ಬಾರದಂತಾಗಿರುವುದು ನಿಜಕ್ಕೂ ಆತ್ಮಾವಲೋಕನ ಮಾಡಿಕೊಂಡು ಅಮೂಲಾಗ್ರ ಸುಧಾರಣೆಯತ್ತ ಹೆಜ್ಜೆ ಇಡುವುದು ಅಗತ್ಯವಾಗಿದೆ 

ಬುಧವಾರ ನಡೆಯಬೇಕಿದ್ದ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸಕಾಲಕ್ಕೆ ಪ್ರಕಟಗೊಂಡು ವಿವಿಗೆ ಪೂರೈಕೆಯಾಗದ ಹಿನ್ನೆಲೆಯಲ್ಲಿ ದಿಢೀರನೇ ಪರೀಕ್ಷೆ ಮುಂದೂಡಲಾಗಿದೆ. ಎಲ್ಲ ವಿಷಯಗಳ ಪರೀಕ್ಷೆ ಮುಗಿದ ನಂತರ ಕೊನೆಗೆ ಬುಧವಾರದ ಪರೀಕ್ಷೆ ನಡೆಸಲಾಗುವುದು.
 ಡಾ| ಡಿ. ಎಂ. ಮದರಿ, ಕುಲಸಚಿವರು (ಮೌಲ್ಯಮಾಪನ), ಗುಲ್ಬರ್ಗ ವಿವಿ

ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.