ಉಳುಮೆಗೆ ನೇಗಿಲ ಯೋಗಿ ಸಿದ್ಧ


Team Udayavani, May 24, 2018, 5:57 PM IST

vij-1.jpg

ವಿಜಯಪುರ: ಸತತ ಬರಗಾಲವನ್ನೇ ಒಗ್ಗಿಸಿಕೊಂಡಿರುವ ವಿಜಯಪುರ ಜಿಲ್ಲೆಯ ನೇಗಿಲಯೋಗಿ ಮತ್ತೂಮ್ಮೆ ಪ್ರಕೃತಿಯೊಂದಿಗೆ ಸತ್ವ ಪರೀಕ್ಷೆಗೆ ಮುನ್ನುಡಿ ಬರೆಯುತ್ತಿದ್ದಾನೆ. ಮಳೆಯಾದರೂ ಸಮಸ್ಯೆ, ಬೆಳೆದರೂ ಸಮಸ್ಯೆ ಎಂಬ ದುಸ್ಥಿತಿಯಲ್ಲಿರುವ ಬಸವಭೂಮಿಯ ಅನ್ನದಾತ ಎದೆಸೆಟೆಸಿ ಎದ್ದು ನಿಂತಿದ್ದಾನೆ.

1.30 ಸಾವಿರ ನೀರಾವರಿ ಸೇರಿ 4.30 ಲಕ್ಷ ಹೆಕ್ಟೇರ್‌ ಪ್ರದೇಶ ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಬಿತ್ತನೆಗೆ ಸಿದ್ಧವಾಗುತ್ತಿದ್ದು, ಅಂದುಕೊಂಡಂತೆ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದರೆ ಜೂನ್‌ ಮೊದಲ ವಾರದಲ್ಲೇ ಹೆಸರು, ಉದ್ದು ಸುಮಾರು 30 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಗೆ ಸಿದ್ಧಗೊಳ್ಳುತ್ತಿದೆ. ಉಳಿದಂತೆ ಬೆಲೆ ಕುಸಿತದ
ಸಂಕಷ್ಟದ ಮಧ್ಯೆಯೂ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ತೊಗರಿ ಬೆಳೆ ಪ್ರದೇಶ ಈ ಬಾರಿಯೂ 3 ಲಕ್ಷ ಹೆಕ್ಟೇರ್‌ ಬಿತ್ತನೆಯ ಆಗುತ್ತದೆ ಎಂದು ಕೃಷಿ ಇಲಾಖೆ ನಿರೀಕ್ಷಿಸುತ್ತಿದೆ. 60 ಸಾವಿರ ಹೆಕ್ಟೇರ್‌ ಮೆಕ್ಕೆಜೋಳ, 40 ಸಾವಿರ ಹೆಕ್ಟೇರ್‌ ಸಜ್ಜೆ ಬಿತ್ತನೆಯ ನಿರೀಕ್ಷೆ ಇದೆ.

ವಿಜಯಪುರ ಜಿಲ್ಲೆಗೆ ಮುಂಗಾರು ಹಂಗಾಮಿನಲ್ಲಿ ಅಗತ್ಯ ಇರುವ 69 ಸಾವಿರ ಮೆಟ್ರಿಕ್‌ ಟನ್‌ ರಸಗೊಬ್ಬರ ಸಂಗ್ರಹ ಇದ್ದು, ಕರ್ನಾಟಕ ರಾಜ್ಯ ಮಾರಾಟ ಮಹಾ ಮಂಡಳಿಯಲ್ಲೂ ಸುಮಾರು 32 ಸಾವಿರ ಮೆಟ್ರಿಕ್‌ಟನ್‌ ರಸಗೊಬ್ಬರ ದಾಸ್ತಾನಿದೆ. ಬಿತ್ತನೆ ಬೀಜಕ್ಕಾಗಿ 21 ಸಾವಿರ ಕ್ವಿಂಟಲ್‌ ಬಿತ್ತನೆ ಬೀಜದ ಸಂಗ್ರಹದ ಅಗತ್ಯವಿದ್ದು, ಬರುವ ಶನಿವಾರ ಮೇ 26ರೊಳಗೆ ಬೀಜದ ಸಂಗ್ರಹವೂ ಬಹುತೇಕ ಆರಂಭಗೊಳ್ಳಲಿದೆ.

ರಾಷ್ಟ್ರೀಯ ಬೀಜ ನಿಗಮ ಹಾಗೂ ಕರ್ನಾಟಕ ರಾಜ್ಯ ಬೀಜ ನಿಗಮ ವಿಜಯಪುರ ಜಿಲ್ಲೆಗೆ ಬೀಜ ಅಗತ್ಯ ಇರುವ ಮುಂಗಾರು ಬಿತ್ತನೆ ಬೀಜ ಪೂರೈಕೆ ಹೊಣೆ ಹೊತ್ತಿದೆ.
 
ಇದಲ್ಲದೇ ಆರ್ಥಿಕ ಸಬಲೀಕರಣದೊಂದಿಗೆ ರಸಾಯನಿಕ-ವಿಷ ಮುಕ್ತ ಆಹಾರ ಉತ್ಪಾದನೆಗೆ ಆದ್ಯತೆ ನೀಡುವ ಉದ್ದೇಶದಿಂದ ರೈತರನ್ನು ಸಾವಯವದತ್ತ ಪ್ರಚೋದಿಸುವ ಕೆಲಸವೂ ಭರದಿಂದ ಸಾಗಿದೆ. ರೈತರು ಈಗಷ್ಟೇ ಇದಕ್ಕೆ ಒಗ್ಗಿಕೊಳ್ಳುತ್ತಿದ್ದರೂ ಜಿಲ್ಲೆಯಲ್ಲಿ ಸಾವಯವ ಕೃಷಿಕರ ಪ್ರಮಾಣ ಶೇ. 3ರಷ್ಟನ್ನು ಮೀರಿಲ್ಲ. ಹೀಗಾಗಿ ಈ ಪ್ರಮಾಣ ಹೆಚ್ಚಿಸಲು ಜಿಲ್ಲೆಯ 5 ತಾಲೂಕುಗಳಲ್ಲಿ ಪ್ರತಿ ತಾಲೂಕಿನ ತಲಾ 3 ಗ್ರಾಮಗಳಂತೆ 15 ಸಾವಯವ ಕೃಷಿಕರ ಕ್ಲಸ್ಟರ್‌ ಗುಂಪು ರಚಿಸಲಾಗಿದೆ. ಪ್ರತಿ ಕ್ಲಸ್ಟರ್‌ನಲ್ಲಿರುವ ರೈತರೆಲ್ಲ ತಲಾ ಕನಿಷ್ಠ 100 ಹೆಕ್ಟೇರ್‌ ಸಾವಯ ಕೃಷಿ ಉತ್ಪಾದನೆಗೆ ಮುಂದಾಗಿದ್ದಾರೆ.
 
ಸಾವಯವ ಹಾಗೂ ಪರಂಪರಾಗತ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ರೈತರಿಗೆ ಸಾವಯವ ಕೃಷಿಯತ್ತ ರೈತರನ್ನು ಹೆಚ್ಚಿನ ಪ್ರಮಾಣದಲ್ಲಿ ತೊಡಗುವಂತೆ ಮಾಡಲು ತರಬೇತಿ, ಭೂಮಿ ಆರೋಗ್ಯ ಸಂರಕ್ಷಣೆ, ಸತ್ವ ಹೆಚ್ಚಳಕ್ಕಾಗಿ ಮಣ್ಣು
ಪರೀಕ್ಷೆ, ಬೆಳೆ ಆಯ್ಕೆ, ಬೀಜೋಪಚಾರ, ಜೈವಿಕ ಪೀಡೆ ನಾಶಕ, ಕೀಟಗಳ ನೈಸರ್ಗಿಕ ನಿರ್ವಹಣೆ ಹೀಗೆ ಹಲವು ಬಗೆಯ ಮಾರ್ಗದರ್ಶನವೂ ಕೃಷಿ ಅಧಿಕಾರಿಗಳಿಂದ ನಡೆಯುತ್ತಿದೆ. 

„ಜಿ.ಎಸ್‌. ಕಮತರ

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.