ಮಹದೇವಪ್ಪರನ್ನು ಮೇಲ್ಮನೆಗೆ ನೇಮಿಸಿ

Team Udayavani, May 25, 2018, 2:45 PM IST

m2-mahadevappa.jpg

ತಿ.ನರಸೀಪುರ: ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಹಿತದೃಷ್ಟಿಯಿಂದ ಹಿರಿಯ ದಲಿತ ನಾಯಕ ಹಾಗೂ ನಿರ್ಗಮಿತ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ನೇಮಕ ಮಾಡಿ ಕಾಂಗ್ರೆಸ್‌ – ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಮಲ್ಲೇಶ ಚುಂಚನಹಳ್ಳಿ ಕಾಂಗ್ರೆಸ್‌ ವರಿಷ್ಠರನ್ನು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆ ಹಿತದೃಷ್ಟಿಯಿಂದ ನೂತನ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರಿಂದ ತೆರವಾಗುವ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ಮತ್ತೋರ್ವ ದಲಿತ ನಾಯಕ ಡಾ.ಎಚ್‌.ಸಿ.ಮಹದೇವಪ್ಪ ಅವರನ್ನು ನಾಮ ನಿರ್ದೇಶನ ಮಾಡಬೇಕು. ಮೈಸೂರು ಜಿಲ್ಲೆಗೆ ಪ್ರಾಮುಖ್ಯತೆ ನೀಡಲು ಮಹದೇವಪ್ಪಗೆ ಮತ್ತೂಮ್ಮೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಇದೀಗ ರಾಜ್ಯ ರಾಜಕಾರಣ ಅನೇಕ ತಿರುವುಗಳನ್ನು ಪಡೆದುಕೊಂಡಿದ್ದು, ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ದಲಿತ ನಾಯಕರಾದ ಡಾ.ಎಚ್‌.ಸಿ.ಮಹದೇವಪ್ಪ ಸೋಲು ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ. ಹಿಂದಿನ ಕಾಂಗ್ರೆಸ್‌ ಸರ್ಕಾರ ಬಡವರು ಮತ್ತು ರೈತಪರ ಆಡಳಿತ ನೀಡಿದ್ದರೂ ಜನಮನ್ನಣೆ ನೀಡದಿರುವುದು ವಿಷಾದಕರ ಸಂಗತಿಯಾಗಿದೆ. ಮಹದೇವಪ್ಪ ಅವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡುವಂತೆ ವರಿಷ್ಠರು ಹಾಗೂ ನಾಯಕರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.

ತಾಲೂಕು ಸಂಚಾಲಕ ಯರಗನಹಳ್ಳಿ ಸುರೇಶ ಮಾತನಾಡಿ, ಲೋಕೋಪಯೋಗಿ ಸಚಿವರಾಗಿದ್ದ ಮಹದೇವಪ್ಪ ಶಾಶ್ವತ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರೂ ಸಾಮಾನ್ಯ ಜನರಿಗೆ ಸಿಗಲ್ಲವೆಂಬ ವಿಚಾರವನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಜನರನ್ನು ದಿಕ್ಕು ತಪ್ಪಿಸಿ ಸೋಲಿಸಲಾಗಿದೆ. ತಡವಾಗಿಯಾದರೂ ನಿರ್ಗಮಿತ ಸಚಿವರ ದೂರದೃಷ್ಟಿ ಕಾಳಜಿ ಹಾಗೂ ಅಭಿವೃದ್ಧಿ ಚಿಂತನೆಗಳು ಜನರಿಗೆ ಅರಿವಾಗಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಸಂಘಟನಾ ಸಂಚಾಲಕ ವಾಟಾಳ್‌ ನಾಗರಾಜು, ನಂಜನಗೂಡು ಸಂಚಾಲಕ ದೇವರಸನಹಳ್ಳಿ ಪುಟ್ಟಸ್ವಾಮಿ, ತೊಟ್ಟವಾಡಿ ರಾಚಪ್ಪ, ರವಿ, ಮಲ್ಲಯ್ಯ, ಮಾದೇಶ, ಚಿನ್ನಸ್ವಾಮಿ, ಮಾದಿಗಹಳ್ಳಿ ರಾಮು, ಮಹದೇವಸ್ವಾಮಿ, ಗಂಗಾಧರ, ಮಹದೇವಸ್ವಾಮಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.