ಪೆಟ್ರೋಲ್‌-ಡಿಸೇಲ್‌ ದರ ಏರಿಕೆಗೆ ಆಕ್ರೋಶ


Team Udayavani, May 25, 2018, 3:32 PM IST

dvg-1.jpg

ದಾವಣಗೆರೆ: ಸಾರ್ವಕಾಲಿಕ ದಾಖಲೆ ಪ್ರಮಾಣದಲ್ಲಿ ಡೀಸೆಲ್‌, ಪೆಟ್ರೋಲ್‌ ಬೆಲೆ ಹೆಚ್ಚಳ ಆಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸೋಷಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ (ಕಮ್ಯೂನಿಸ್ಟ್‌) ಕಾರ್ಯಕರ್ತರು ಗುರುವಾರ ಮಹಾತ್ಮಗಾಂಧಿ ವೃತ್ತದಲ್ಲಿ ಪ್ರತಿಭಟಿಸಿದ್ದಾರೆ.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಪೆಟ್ರೋಲ್‌ ಹಾಗೂ ಡಿಸೇಲ್‌ ದರವನ್ನು ಕ್ರಮವಾಗಿ ಪ್ರತಿ ಲೀಟರ್‌ಗೆ 78.84 ರೂಪಾಯಿ, ಮತ್ತು 70.61 ರೂಪಾಯಿಯಷ್ಟು ಸಾರ್ವಕಾಲಿಕ ದಾಖಲೆ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಭಾರೀ ಹೊರೆ ಹೇರಿರುವುದು ಅತ್ಯಂತ ಖಂಡನೀಯ ಎಂದು ಪ್ರತಿಭಟನಾಕಾರರು ದೂರಿದರು.

ಕರ್ನಾಟಕದಲ್ಲಿ ಚುನಾವಣೆ ಮುಗಿಯುವವರೆಗೂ ತೈಲ ಬೆಲೆ ಏರಿಸದ ಕೇಂದ್ರ ಸರ್ಕಾರ ಚುನಾವಣೆ ಮುಗಿದ ತಕ್ಷಣಕ್ಕೆ ದರ ಏರಿಕೆ ಮಾಡಿರುವುದು ಜನರಿಗೆ ಬಗೆದ ದ್ರೋಹ. 70ರ ದಶಕದಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ದೇಶದ ಎಲ್ಲಾ ತೈಲ ಕಂಪನಿಗಳನ್ನು ರಾಷ್ಟ್ರೀಕೃತಗೊಳಿಸಿದ್ದರು. ಗ್ಯಾಟ್‌ ನೀತಿ ಬರುವ ಮುಂಚೆ ನಮ್ಮಲ್ಲಿ ಆಯಿಲ್‌ ಪೂಲ್‌ಅಕೌಂಟ್‌ ಇತ್ತು. 

ಗ್ಯಾಟ್‌ ನೀತಿಗಳ ಫಲವಾಗಿ ದಿನೇ ದಿನೇ ಆಯಿಲ್‌ ಪೂಲ್‌ ಅಕೌಂಟ್‌ ಸ್ಥಗಿತಗೊಳಿಸುತ್ತಿರುವ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳಕ್ಕೆ ನಾವು ಬೆಲೆ ತೆರಬೇಕಾಗಿದೆ. ಪ್ರಧಾನಿ ಮೋದಿ ಮೇಕ್‌ ಇನ್‌ ಇಂಡಿಯಾ ಒಂದು ಯಶಸ್ವಿ ಕಾರ್ಯಕ್ರಮ ಎಂದು ಹೇಳುತ್ತಾರೆ. ಆದರೆ, ತೈಲ ಕಂಪೆನಿಗಳನ್ನು ಏಕೆ ಮೇಕ್‌ ಇನ್‌ ಇಂಡಿಯಾ ಕಾರ್ಯಕ್ರಮದಡಿ ತರಲಿಲ್ಲ. ಜಿಎಸ್‌ಟಿಯಿಂದ ಪೆಟ್ರೋಲ್‌ ಮತ್ತು ಡೀಸೆಲ್‌ ದೂರವಿಟ್ಟಿದೆ ಎಂದು ದೂರಿದರು.

ಭಾರತದಿಂದ ನೇಪಾಳಕ್ಕೆ ರಫ್ತಾಗುವ ಪೆಟ್ರೋಲ್‌ದರ 65 ರೂಪಾಯಿಗಳಷ್ಟಿದೆ. ಪ್ರಪಂಚದ 4ನೇ ಅತಿ ದೊಡ್ಡ ತೈಲ ಗುಜರಾತ್‌ ಘಟಕವನ್ನು ಖಾಸಗಿ ಕಂಪೆನಿಗೆ ಸಬ್ಸಿಡಿ ಆಧಾರದಲ್ಲಿ ನಡೆಸಲು ಅನುಮತಿ ನೀಡಲಾಗಿದೆ. ಮೋದಿಯವರಿಗೆ ದೇಶ ಮತ್ತು ವಿದೇಶ ಬಂಡವಾಳಿಗರ ಸಂಸ್ಥೆಗಳ ಮೇಲೆ ಇರುವ ಅನುಕಂಪ ಜನತೆ ಮೇಲೆ ಇಲ್ಲ. ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡಿರುವ ಸರ್ಕಾರ ಕೂಡಲೇ ತೈಲ ಬೆಲೆ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾ ಸಂಚಾಲಕ ಮಂಜುನಾಥ್‌ ಕೈದಾಳೆ, ನಾಗಸ್ಮಿತಾ, ರೇಣುಕಾ ಪ್ರಸನ್ನ, ಸತೀಶ್‌. ಮಧು ತೊಗಲೇರಿ. ಶಶಿಕುಮಾರ್‌. ಗುರು. ಪ್ರವೀಣ್‌. ಮಂಜುನಾಥ್‌ರೆಡ್ಡಿ. ಭಾರತಿ. ಜ್ಯೋತಿ ಕುಕ್ಕವಾಡ ಬನಶ್ರೀ, ಸವಿತಾ. ಮಂಜುನಾಥ್‌ ಕುಕ್ಕವಾಡ, ಡಾ| ವಸುಧೇಂದ್ರ, ಯತೀಂದ್ರ, ರೈತ ಸಂಘಟನೆಯ ಬಲ್ಲೂರು ರವಿಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.