ರೆಡ್‌ಕ್ರಾಸ್ ಬಳ್ಳಾರಿ ಘಟಕಕ್ಕೆ ಪ್ರಶಸ್ತಿ ಗರಿ
Team Udayavani, May 26, 2018, 11:57 AM IST
ಬಳ್ಳಾರಿ: ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ಪ್ರಥಮ ಚಿಕಿತ್ಸೆ ತರಬೇತಿ ಸೇರಿದಂತೆ 27 ವಿಭಾಗಗಳಲ್ಲಿ ಬಳ್ಳಾರಿ ರೆಡ್‌ಕ್ರಾಸ್ ಸಂಸ್ಥೆ ಸಲ್ಲಿಸಿದ ಅಭೂತಪೂರ್ವ ಸೇವೆಗಳಿಗೆ ಉತ್ತಮ ಕಾರ್ಯನಿರ್ವಹಣೆ ಜಿಲ್ಲೆ ಪ್ರಶಸ್ತಿ ಲಭಿಸಿದ್ದು, ಎರಡು ದಿನಗಳ ಹಿಂದೆ ರಾಜಭವನದಲ್ಲಿ ರಾಜ್ಯಪಾಲರಿಂದ ಸ್ವೀಕರಿಸಲಾಯಿತು ಎಂದು ಜಿಲ್ಲಾಧಿಕಾರಿ ಡಾ| ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಚಿತ ಆರೋಗ್ಯ ತಪಾಸಣೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ಪ್ರಥಮ ಚಿಕಿತ್ಸೆ ತರಬೇತಿ, ಲೆಡ್ ಪೊಲ್ಯೂಶನ್ ಕಾರ್ಯಾಗಾರ, ಕಿವಿ ಪರೀಕ್ಷೆ ತಪಾಸಣೆ, ಕ್ವೀಜ್ ಕಾಂಪಿಟೇಶನ್, ವಿಶ್ವ ತಂಬಾಕು ದಿನಾಚರಣೆ, ಯೋಗ ದಿನಾಚರಣೆ, ಕ್ಯಾನ್ಸರ್ ಜಾಗೃತಿ, ರಕ್ತದಾನ, ಸ್ವತ್ಛ ಭಾರತ ಸೇರಿದಂತೆ 27 ವಿಭಾಗಗಳಲ್ಲಿ 185 ಕಾರ್ಯಕ್ರಮಗಳನ್ನು 2016-17ನೇ ಸಾಲಿನಲ್ಲಿ ಬಳ್ಳಾರಿ ರೆಡ್‌ಕ್ರಾಸ್ ಸಂಸ್ಥೆ ಕೈಗೊಂಡಿದ್ದು, ಇದರ ಸೇವಾ ಕಾರ್ಯನಿರ್ವಹಣೆ ಮೆಚ್ಚಿ ಉತ್ತಮ ಕಾರ್ಯನಿರ್ವಹಣೆ ಜಿಲ್ಲೆ ಪ್ರಶಸ್ತಿ ನೀಡಲಾಗಿದೆ. ಇದಕ್ಕೆ ಕಾರಣರಾದ ರೆಡ್‌ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದರು.
50 ಸಾವಿರ ನೋಂದಣಿ ಗುರಿ: ಸೇವಾ ಮನೋಭಾವವನ್ನು ಯುವಜನರಲ್ಲಿ ಬೆಳೆಸುವ ದೃಷ್ಟಿಯಿಂದ ಬಳ್ಳಾರಿ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯಕಾರಿ ಸಮಿತಿ ತೀರ್ಮಾನದ ಅನ್ವಯ ಜೂನಿಯರ್ ರೆಡ್‌ಕ್ರಾಸ್ ಮತ್ತು ಯುವರೆಡ್‌ಕ್ರಾಸ್‌ಗೆ 50 ಸಾವಿರ ಯುವ ಜನರನ್ನು ನೋಂದಣಿ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಯುವಜನರಿಗೆ ಪ್ರಥಮ ಚಿಕಿತ್ಸೆ, ವಿಪತ್ತು ನಿರ್ವಹಣಾ ತರಬೇತಿ ನೀಡಲಾಗುತ್ತದೆ ಮತ್ತು ಇದರಲ್ಲಿ ಪಾಲ್ಗೊಂಡರೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂಬ ಮನೋಭಾವ ಮೂಡುತ್ತದೆ. ಈ ಹಿನ್ನೆಲೆಯಲ್ಲಿ ನೋಂದಣಿ
ಮಾಡುವ ಉದ್ದೇಶ ಹೊಂದಲಾಗಿದೆ. ಈ ವರ್ಷ ಬಳ್ಳಾರಿ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಅವಶ್ಯವಿರುವ ಕಡೆ ರಕ್ತ ಸಂಗ್ರಹಣಾ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ರಕ್ತ ಸಂಗ್ರಹಣಾ ಕೇಂದ್ರಗಳಿರುವ ಕಡೆಗಳಲ್ಲಿ ಅವುಗಳನ್ನು ರಕ್ತ ಬ್ಯಾಂಕ್‌ಗಳನ್ನಾಗಿ ಪರಿವರ್ತಿಸಲಾಗುವುದು ಎಂದು ತಿಳಿಸಿದರು.
20237 ಮತದಾರರು: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾ ನೀತಿ ಸಂಹಿತೆ ಮೇ.15ರಿಂದ ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿದ್ದು, ಈ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 20237 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದಕ್ಕಾಗಿ 30 ಮತದಾನ ಕೇಂದ್ರಗಳನ್ನು ಆರಂಭಿಸಿದ್ದು, 80 ಜನ ಸಿಬ್ಬಂದಿ ನಿಯೋಜಿಸಲಾಗಿದೆ. 9 ಫ್ಲೆ$çಯಿಂಗ್ ಸ್ಕ್ವಾಡ್ ತಂಡಗಳನ್ನು ನೇಮಕ ಮಾಡಲಾಗಿದೆ. ಜೂ.8ರಂದು ಮತದಾನ ನಡೆಯಲಿದ್ದು, ಜೂ.12ರಂದು ಗುಲ್ಬರ್ಗ ವಿವಿಯಲ್ಲಿ ಮತ ಏಣಿಕೆ ನಡೆಯಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಷಕೀಬ್, ಮುಖಂಡರಾದ ಡಾ| ಮಹಿಪಾಲ್, ಕೆ.ಚಂದ್ರಶೇಖರ್, ಸಾಧನಾ ಹಿರೇಮಠ, ಎಸ್‌ಬಿಐ ದೇವಣ್ಣ ಸೇರಿದಂತೆ ಇನ್ನಿತರರಿದ್ದರು.
ಬೀಜ-ಗೊಬ್ಬರ ದಾಸ್ತಾನು ಜಿಲ್ಲೆಯಲ್ಲಿ ಈಗಾಗಲೇ ಉತ್ತಮ ಮಳೆಯಾಗಿದ್ದು, ಅವಶ್ಯಕವಿರುವ 15 ಸಾವಿರ ಟನ್ ಗೊಬ್ಬರ ಮತ್ತು 15 ಸಾವಿರ ಟನ್ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ಜೂನ್ ತಿಂಗಳಲ್ಲಿ 15 ಸಾವಿರ ಟನ್ ಗೊಬ್ಬರ, ಜುಲೈ ಮತ್ತು ಮುಂದಿನ ತಿಂಗಳಲ್ಲಿ ತಲಾ 40 ಸಾವಿರ ಟನ್ ಗೊಬ್ಬರ ಅವಶ್ಯಕವಿದ್ದು, ಅದನ್ನು ಸಮರ್ಪಕವಾಗಿ ಪೂರೈಸಲು ಸೂಚನೆ ನೀಡಲಾಗಿದೆ. ಈಗಾಗಲೇ ರಸಗೊಬ್ಬರ ಕಂಪನಿಗಳ ಡೀಲರ್‌ಗಳು, ರಸಗೊಬ್ಬರ ಸರಬರಾಜು ಗುತ್ತಿಗೆದಾರರು ಮತ್ತು ಲಾರಿ ಮಾಲೀಕರೊಂದಿಗೆ ಸಭೆ ನಡೆಸಲಾಗಿದೆ.
ರೈತರಿಗೆ ರಸಗೊಬ್ಬರ ಪೂರೈಕೆ ವಿಷಯದಲ್ಲಿ ಯಾವುದೇ ಸಮಸ್ಯೆಗಳು ಉಂಟಾದರೆ ಅವಶ್ಯಕ ವಸ್ತು ಕಾಯ್ದೆ ಅಡಿ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ರಾಮ್ ಪ್ರಸಾತ್ ಮನೋಹರ್ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.