ನಿರಂತರ ಕಾರ್ಯದೊತ್ತಡದಲ್ಲಿ ಸರ್ಕಾರಿ ಶಾಲಾ ಶಿಕ್ಷಕರು
Team Udayavani, May 27, 2018, 6:35 AM IST
ಬೆಂಗಳೂರು: ತಿಂಗಳಿಂದ ಚುನಾವಣಾ ಕಾರ್ಯದಲ್ಲಿ ಸಕ್ರಿಯರಾಗಿದ್ದ ಸರ್ಕಾರಿ ಶಾಲಾ ಶಿಕ್ಷಕರು ಮಾನಸಿಕ ಹಾಗೂ ದೈಹಿಕ ಒತ್ತಡದ ನಡುವೆಯೇ ಶೈಕ್ಷಣಿಕ ಕಾರ್ಯಕ್ಕೆ ಅಣಿಯಾಗುತ್ತಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಅಧಿಸೂಚನೆ ಹೊರಬಿದ್ದ ನಂತರ ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆಗಳನ್ನು ಪೂರೈಸಿ, ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕರು ನೇರವಾಗಿ ಚುನಾವಣಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಶೈಕ್ಷಣಿಕ ವರ್ಷದ ಕೊನೆಯಲ್ಲಿ ನಡೆದ ಪ್ರಮುಖ ಪರೀಕ್ಷೆಗಳು, 1ರಿಂದ 9ನೇ ತರಗತಿ ಮಕ್ಕಳ ಮೌಲ್ಯಾಂಕನ ಸಿದ್ಧಪಡಿಸುವುದು ಸೇರಿ ಶೈಕ್ಷಣಿಕ ಕಾರ್ಯದಲ್ಲಿ ತಲ್ಲೀನರಾಗಿದ್ದರು. ಈ ಮಧ್ಯೆ ಚುನಾವಣಾ ತರಬೇತಿ ಪಡೆದ ನಂತರ ಚುನಾವಣೆ ದಿನದಂದು ಮತಗಟ್ಟೆ ಅಧಿಕಾರಿಗಳಾಗಿ, ಮೇಲ್ವಿಚಾರಕರಾಗಿ ಸೇವೆ ಸಲ್ಲಿಸಿದ್ದರು. ನಿರಂತರ ಕಾರ್ಯ ನಿರ್ವಹಣೆಯಿಂದ ಶಿಕ್ಷಕರು ಬೇಸಿಗೆ ರಜೆಯನ್ನು ಕಳೆದುಕೊಳ್ಳುವುದರ ಜತೆಗೆ ಅಕ್ಷರಶಃ ಮಾನಸಿಕವಾಗಿ,
ದೈಹಿಕವಾಗಿ ಬಳಲಿದ್ದಾರೆ. ಚುನಾವಣೆ ಮುಗಿದು ತುಸು ವಿಶ್ರಾಂತಿ ಪಡೆದುಕೊಳ್ಳಬೇಕು ಎನ್ನುಷ್ಟರಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ.
ರಾಜ್ಯದಲ್ಲಿರುವ 44,615 ಸರ್ಕಾರಿ ಶಾಲೆ, 5,240 ಸರ್ಕಾರಿ ಪ್ರೌಢಶಾಲೆ ಹಾಗೂ 1,229ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ದೊಡ್ಡ ಮಟ್ಟದಲ್ಲಿ ಅಭಿಯಾನ ನಡೆಯುತ್ತಿದೆ. ಇದರ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರಿ, ಕಾಲೇಜಿನ ಪ್ರಾಂಶುಪಾಲರು, ಮುಖ್ಯಶಿಕ್ಷಕರು, ಉಪನ್ಯಾಸಕರು ಮತ್ತು
ಸಹ ಶಿಕ್ಷಕರ ಹೆಗಲಿಗೆ ವಹಿಸಲಾಗಿದೆ.
ಹೊಸ ದಾಖಲಾತಿ ಹೆಚ್ಚಿಸಲು ಮನೆ ಮನೆಗೆ ಭೇಟಿ ನೀಡಿಲು ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದಲೇ ಸೂಚಿಸಲಾಗಿದೆ.
ದಾಖಲಾತಿ ಒಂದೆಡೆಯಾದರೆ, ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿಯೂ ಶಿಕ್ಷಕರೇ ಶ್ರಮಿಸಬೇಕು. ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ವಿದ್ಯಾರ್ಥಿಗಳಿಗೆ ಸಮವಸOಉ, ಪಠ್ಯಪುಸ್ತಕ, ಶೂ, ಸಾಕ್ಸ್ ಜತೆಗೆ ಸೈಕಲ್ ವಿತರಿಸಬೇಕು. ಬಿಇಒ ಕಚೇರಿಗೆ ಹೋಗಿ ಸಮವಸOಉ ಸಹಿತವಾಗಿ ಎಲ್ಲ ವಸ್ತುಗಳನ್ನು ಶಾಲೆಗೆ ತೆಗೆದುಕೊಂಡು ಬಂದು ಮಕ್ಕಳಿಗೆ ಹಂಚಬೇಕು. ನಂತರ ಲೆಕ್ಕವನ್ನು ಇಲಾಖೆಯ ಮೇಲಧಿಕಾರಿಗಳಿಗೆ ಕಳುಹಿಸಲೇ ಬೇಕು.
ವಿದ್ಯಾರ್ಥಿಗಳ ಹಾಜರಾತಿಯನ್ನು ಆನ್‌ಲೈನ್ ಎಂಟ್ರಿಗೆ ಬೇಕಾದ ತಯಾರಿಯನ್ನು ಶಿಕ್ಷಕರೇ ಮಾಡಿಕೊಳ್ಳಬೇಕು. ಮಕ್ಕಳ ಟ್ರ್ಯಾಕ್ ರೆಕಾರ್ಡ್ ಅನ್ನು ಆನ್‌ಲೈನ್ ಮೂಲಕ ಸಿದಟಛಿಪಡಿಸುವುದು ಸೇರಿ ಹತ್ತಾರು ಕಾರ್ಯಗಳು ನಿತ್ಯವೂ ಮಾಡಬೇಕಾಗಿದೆ. ಇದೆಲ್ಲದರ ಜತೆಗೆ ಗುಣಮಟ್ಟದ ಶಿಕ್ಷಣಕ್ಕೂ ಆದ್ಯತೆ ನೀಡಬೇಕು. ಹೀಗಾಗಿ, ಶಿಕ್ಷಕರ ಮೇಲೆ ಹೆಚ್ಚು ಒತ್ತಡ ಬೀಳುತ್ತಿದೆ.
ವರ್ಗಾವಣೆ ಸದ್ಯಕ್ಕಿಲ್ಲ
2017-18ನೇ ಸಾಲಿನ ಶಿಕ್ಷಕರ ವರ್ಗಾವಣೆ ಅಧಿಸೂಚನೆ ಹೊರಡಿಸಿ, ವರ್ಗಾವಣೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಚುನಾವಣೆ ಎದುರಾಗಿದ್ದರಿಂದ ಎರಡೆರಡು ಬಾರಿ ವರ್ಗಾವಣೆ ಮುಂದೂಡಲಾಗಿದೆ. ಚುನಾವಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿದಿದೆ. ವಾರದೊಳಗೆ ಹೊಸ ಸರ್ಕಾರದ ರಚನೆಯೂ ಆಗಲಿದೆ.
ಆದರೆ, ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಯಾವ ಆದೇಶವೂ ಹೊರಬಂದಿಲ್ಲ. ಮೇ 28ರಂದು ಸರ್ಕಾರಿ ಪ್ರಾಥಮಿಕ,ಪ್ರೌಢಶಾಲೆಗಳು ಆರಂಭವಾಗಲಿದೆ. ಇದಕ್ಕೆ ಬೇಕಾದ ಎಲ್ಲ ಸಿದಟಛಿತೆಯನ್ನು ಆಯಾ ಶಾಲೆಗಳಲ್ಲಿ ಮುಖ್ಯಶಿಕ್ಷಕರು ಸಹಿತವಾಗಿ ಸಹ ಶಿಕ್ಷಕರು ಮಾಡಿಕೊಳ್ಳುತ್ತಿದ್ದಾರೆ.ದಾಖಲಾತಿ ಮತ್ತು ಶೈಕ್ಷಣಿಕ ಕಾರ್ಯಗಳನ್ನು ಶಿಕ್ಷಕರು ಮಾಡಲೇ ಬೇಕು.
– ಬಿ.ಕೆ.ಬಸವರಾಜ,
ನಿರ್ದೇಶಕ, ಪ್ರಾಥಮಿಕ ಶಿಕ್ಷಣ
– ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
MUST WATCH
ಹೊಸ ಸೇರ್ಪಡೆ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.