ಇಂದಿನಿಂದ ಸರ್ಕಾರಿ ಶಾಲೆ ಆರಂಭ
Team Udayavani, May 28, 2018, 7:00 AM IST
ಬೆಂಗಳೂರು: ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಸೋಮವಾರದಿಂದ (ಮೇ 28) ಅಧಿಕೃತವಾಗಿ ಆರಂಭವಾಗಲಿದೆ.
ದಿನಪೂರ್ತಿ ಶೈಕ್ಷಣಿಕ ಚಟುವಟಿಕೆಯ ಜತೆ ಜತೆಗೆ ಕ್ರೀಡೆ, ಚರ್ಚೆ, ರಸ ಪ್ರಶ್ನೆ, ಸಂವಾದ ಹೀಗೆ ವಿನೂನತ ಕಾರ್ಯಕ್ರಮಗಳು ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಮೊದಲ ದಿನ ನಡೆಯಲಿದೆ.
ಶಾಲಾ ಆರಂಭೋತ್ಸವದ ಹಿನ್ನೆಲೆಯಲ್ಲಿ ಬಹುತೇಕ ಕಡೆ ಶಾಲೆಗಳನ್ನು ತಳಿರು ತೋರಣಗಳಿಂದ ಶಾಲಾವರಣವನ್ನು ಶೃಂಗರಿಸಲಾಗಿದೆ. ಎಲ್ಲೆಡೆ ಸ್ವತ್ಛತೆ ಕಾರ್ಯವನ್ನು ಕೈಗೊಂಡಿದ್ದಾರೆ. ಶಾಲಾರಂಭೋತ್ಸವ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಜತೆಗೆ ಅವರ ಪಾಲಕ, ಪೋಷಕರು, ಎಸ್‌ಡಿಎಂಸಿ ಸದಸ್ಯರನ್ನು ಆಹ್ವಾನಿಸಲಾಗಿದೆ. ಮೊದಲ ದಿನ ಶಾಲೆಗೆ ಬರುವ ಮಕ್ಕಳಿಗೆ ಬಿಸಿಯೂಟದ ಜತೆಗೆ ಸಿಹಿ ವಿತರಿಸಲಾಗುತ್ತದೆ.
ದಾಖಲಾತಿ ಪ್ರಕ್ರಿಯೆ ಬಿರುಸು:
ಸರ್ಕಾರಿ ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಹತ್ತಾರು ಕಾರ್ಯಕ್ರಮಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಳ್ಳಲಾಗಿತ್ತು. ತಿಂಗಳುಪೂರ್ತಿ ದಾಖಲಾತಿ ಆಂದೋಲನ ನಡೆಸಿ, ತಮ್ಮ ಶಾಲಾ ವ್ಯಾಪ್ತಿಯ ಮಕ್ಕಳನ್ನು ಸರ್ಕಾರಿ ಶಾಲೆಗೆ ಕರೆತರುವ ನಿಟ್ಟಿನಲ್ಲಿ ಮುಖ್ಯಶಿಕ್ಷಕರು ಮತ್ತು ಸಹ ಶಿಕ್ಷಕರು ಅಗತ್ಯ ಕ್ರಮ ತೆಗೆದುಕೊಂಡಿದ್ದಾರೆ. ಶಾಲಾರಂಭದ ನಂತರವೂ ದಾಖಲಾತಿ ಪ್ರಕ್ರಿಯೆ ಮುಂದುವರಿಯುತ್ತದೆ.
ಶಾಲೆಗೆ ರಜೆ ಘೋಷಿಸಿಲ್ಲ
ರಾಜ್ಯ ಬಿಜೆಪಿ ಸೋಮವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ಆದರೆ, ಸರ್ಕಾರಿ ಶಾಲಾ ಕಾಲೇಜಿಗೆ ಯಾವುದೇ ರೀತಿಯ ರಜೆ ಘೋಷಣೆ ಮಾಡಿಲ್ಲ. ಆಯಾ ಜಿಲ್ಲಾಡಳಿತಕ್ಕೆ ಪರಿಸ್ಥಿತಿ ಆಧರಿಸಿ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಇರುವುದರಿಂದ ಶಾಲೆಗಳಿಗೆ ರಜೆ ನೀಡುವ ವಿಚಾರವನ್ನು ಜಿಲ್ಲಾಡಳಿತಕ್ಕೆ ಬಿಟ್ಟಿದ್ದೇವೆ. ಇಲಾಖೆಯ ಕೇಂದ್ರ ಕಚೇರಿಯಿಂದ ಈ ಸಂಬಂಧ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಉದಯವಾಣಿಗೆ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ರಾಜ್ಯಪಠ್ಯಕ್ರಮದ ಎಲ್ಲ ಶಾಲೆಗಳು ಆರಂಭವಾಗಲಿದೆ.
ಯಾವುದೇ ಮುನ್ನೆಚ್ಚರಿಕೆ ಕ್ರಮ ಇಲ್ಲದೆ ಬಂದ್‌ಗೆ ಕರೆ ನೀಡಲಾಗಿದೆ. ಶೈಕ್ಷಣಿಕ ತರಗತಿ ಆರಂಭವಾಗುವ ಮೊದಲ ದಿನವೇ ರಜಾ ಘೋಷಣೆ ಮಾಡುವುದು ಸರಿಯಲ್ಲ. ಹೀಗಾಗಿ ಖಾಸಗಿ ಶಾಲಾಡಳಿತ ಮಂಡಳಿ ಬಂದ್‌ಗೆ ಬೆಂಬಲ ನೀಡುವುದಿಲ್ಲ. ಶಾಲಾರಂಭದ ಪ್ರಕ್ರಿಯೆಯಲ್ಲಿ ಎರಡು ಭಾಗವಹಿಸಲಿದ್ದಾರೆ ಎಂದು ರಾಜ್ಯ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾಡಳಿತ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.