ಜಿಲ್ಲಾ ಕೇಂದ್ರಗಳಲ್ಲಿ ಬಂದ್‌ಗೆ ಬಿಜೆಪಿ ಸಿದ್ಧತೆ

Team Udayavani, May 28, 2018, 6:35 AM IST

bjpsymbol.jpg

ಬೆಂಗಳೂರು: ವಿವಿಧ ಸಂಘಟನೆಗಳು ಕರ್ನಾಟಕ ಬಂದ್‌ಗೆ ಬೆಂಬಲಿಸಲು ನಿರಾಕರಿಸಿರುವ ಹೊರತಾಗಿಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಸೂಚನೆಯಂತೆ ಪಕ್ಷದ ಎಲ್ಲಾ ಜಿಲ್ಲಾಧ್ಯಕ್ಷರು ಸೋಮವಾರ ಬಂದ್‌ಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌, ಅಧಿಕಾರಕ್ಕೆ ಬಂದ 24ಗಂಟೆಗಳಲ್ಲಿ ರೈತರ ಎಲ್ಲ ಸಾಲಮನ್ನಾ ಮಾಡುವುದಾಗಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದರು.ಅದರಂತೆ ರೈತರ ಸಾಲಮನ್ನಾ ಮಾಡಲೇ ಬೇಕು. ಇಲ್ಲವಾದರೆ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ತಿಳಿಸಿದರು.

ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದರಿಂದ ಜೆಡಿಎಸ್‌ ಪ್ರಣಾಳಿಕೆಯನ್ನು ಯಥಾವತ್ತಾಗಿ ಈಡೇರಿಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿಯವರು ಹೇಳುತ್ತಿರುವುದು ವಚನ ಭ್ರಷ್ಟತೆಗೆ ನಿದರ್ಶನವಾಗಿದೆ. ಮಿತ್ರಪಕ್ಷ ಕಾಂಗ್ರೆಸ್‌ನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಂಬಿಕೆಯೇ ಮುಖ್ಯಮಂತ್ರಿಗೆ ಇಲ್ಲ. ನಾಡಿನ ರೈತರು ಸಂಕಷ್ಟದಲ್ಲಿ ಇರುವುದು ಗೊತ್ತಿದ್ದರೂ, ಕೇವಲ 37 ಸ್ಥಾನಗಳನ್ನು ನೀಡಿದ್ದಾರೆ ಎನ್ನುವ ಕಾರಣಕ್ಕೆ ಮುಖ್ಯಮುಂತ್ರಿಯವರು ರೈತ
ಸಮುದಾಯದ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊರಟಿದ್ದಾರೆ. ಹೀಗಾಗಿ, ಸಾಲಮನ್ನಾ ವಿಚಾರದಲ್ಲಿ
ಮುಖ್ಯಮಂತ್ರಿಗಳ ವರ್ತನೆ ಖಂಡಿಸಿ ಸೋಮವಾರ ರಾಜ್ಯಾದ್ಯಂತ ಬಂದ್‌ ನಡೆಸಲಿದ್ದೇವೆ. ರೈತ ಸಮೂಹ
ಸ್ವಯಂ ಪ್ರೇರಿತವಾಗಿ ನಮ್ಮೊಂದಿಗೆ ಸೇರಿಕೊಳ್ಳಲಿದ್ದು, ಬಂದ್‌ಗೆ ಬೆಂಬಲ ನೀಡಲಿದ್ದಾರೆ ಎಂದರು.

ಸಂಘಟನೆಗಳ ಬೆಂಬಲ ಇಲ್ಲ: ರಾಜ್ಯ ಬಂದ್‌ ಆಚರಣೆಗೆ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು,
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಹೋಟೆಲ್‌ ಮಾಲೀಕರ ಸಂಘ, ಆಟೋ ಚಾಲಕರ ಸಂಘ, ಟ್ಯಾಕ್ಸಿ
ಚಾಲಕರ ಸಂಘಟನೆಗಳು, ಎಐಟಿಯುಸಿ ಬೆಂಬಲಿಸುತ್ತಿಲ್ಲ. ರೈತರ ಬೇಡಿಕೆಗಳಿಗೆ ಬೆಂಬಲವಿದೆ. ಆದರೆ,ಬಂದ್‌ ಕುರಿತು ಯಾರೂ ನಮ್ಮೊಂದಿಗೆ ಚರ್ಚಿಸಿಲ್ಲ.

ಹೀಗಾಗಿ ನಾವು ಬೆಂಬಲಿಸುತ್ತಿಲ್ಲ ಎಂದು ಸಂಘಟನೆಯ ಪ್ರಮುಖರು ಸ್ಪಷ್ಟೀಕರಣ ನೀಡಿದ್ದಾರೆ.ಹೀಗಾಗಿ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸೇವೆ ಎಂದಿನಂತೆ ಇರಲಿದ್ದು, ಬಂದ್‌ ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲು ನಿಗಮಗಳ ಅಧಿಕಾರಿಗಳು ನಿರ್ಧರಿಸಿದ್ದಾರೆ. ಓಲಾ, ಊಬರ್‌ ಸೇರಿದಂತೆ ಖಾಸಗಿ ಟ್ಯಾಕ್ಸಿಗಳು,ಖಾಸಗಿ ಬಸ್‌ ಸಂಚಾರ ಸೇವೆಯಲ್ಲೂ ಯಾವುದೇ ವ್ಯತ್ಯಯವಾಗುವ ಸಾಧ್ಯತೆ ಇಲ್ಲ. ಸರ್ಕಾರಿ ಶಾಲಾ ಕಾಲೇಜುಗಳು, ಮಾರುಕಟ್ಟೆ,ವ್ಯಾಪಾರ ವಹಿವಾಟುಗಳು ಎಂದಿನಂತೆ ನಡೆಯಲಿದ್ದು ಬಂದ್‌ಗೆ ಯಾವುದೇ ಬೆಂಬಲವಿಲ್ಲ ಎಂದು ಖಾಸಗಿ ಶಾಲೆಗಳ ಒಕ್ಕೂಟ ಸ್ಪಷ್ಟಪಡಿಸಿದೆ.

ಈ ಕುರಿತು “ಉದಯವಾಣಿ’ಯೊಂದಿಗೆ ಮಾತನಾಡಿದ ಕನ್ನಡ ಚಳವಳಿ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌, ರೈತರ ಸಾಲಮನ್ನಾ ಬೇಡಿಕೆಗೆ ನಮ್ಮ ಬೆಂಬಲ ಯಾವತ್ತೂ ಇದೆ. ರೈತರ ಹೋರಾಟಕ್ಕೂ ಬೆಂಬಲವಿದೆ. ಆದರೆ, ಸೋಮವಾರ ನಡೆಯಲಿರುವ ಬಂದ್‌ ಆಚರಣೆಯಲ್ಲಿ ಪಾಲ್ಗೊಳ್ಳುವಂತೆ ನಮಗೆ ಯಾರೂ ಹೇಳಿಲ್ಲ. ಹೀಗಾಗಿ ತಟಸ್ಥವಾಗಿರುತ್ತೇವೆ ಎಂದಿದ್ದಾರೆ.

ಸೂಕ್ತ ಬಂದೋಬಸ್ತ್ಗೆ ಆದೇಶ
ಬಂದ್‌ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ರಾಜು, ಆಯಾ ವಲಯದ ಉನ್ನತ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಯಾವುದೇ ಅಹಿಕತರ ಘಟನೆಗಳು ಜರುಗದಂತೆ ಕಟ್ಟುನಿಟ್ಟಿನ ಕಾನೂನು ಸುವ್ಯವಸ್ಥೆ ಪಾಲಿಸುವಂತೆ ರಾಜ್ಯದ ನಾಲ್ಕು ವಲಯಗಳ ಐಜಿಪಿ, ಪೊಲೀಸ್‌ ಆಯುಕ್ತರು, ಜಿಲ್ಲಾ ಎಸ್ಪಿಗಳಿಗೆ ತಾಕೀತು ಮಾಡಿದ್ದಾರೆ. ಈ ಮಧ್ಯೆ “ಬಂದ್‌’ ಆಚರಣೆ ಸಂವಿಧಾನಬಾಹಿರ ಎಂದು ಸುಪ್ರೀಂಕೋರ್ಟ್‌ ನೀಡಿರುವ ಆದೇಶವನ್ನು ಬಂದ್‌ ಆಚರಿಸಲು ಮುಂದಾಗುವವರಿಗೆ ಮನದಟ್ಟು ಮಾಡಿ. ಜತೆಗೆ, ಸೂಕ್ತ ಭದ್ರತೆ ಕೈಗೊಂಡು ಕಾನೂನು ಉಲ್ಲಂ ಸುವವರ ವಿರುದಟಛಿ ಕ್ರಮ ಕೈಗೊಳ್ಳಿ ಎಂದು ಡಿಸಿಪಿಗಳು ಸೇರಿದಂತೆ ಅಧೀನ ಅಧಿಕಾರಿಗಳಿಗೆ ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ ಆದೇಶಿಸಿದ್ದಾರೆ.

ರೈತರ ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಸಿಎಂ ಭೇಟಿ ಮಾಡಿ ಚರ್ಚಿಸಲಾಗುವುದು.ಬಳಿಕ, ಅವರ ನಿಲುವು ಖಚಿತಪಡಿಸಿಕೊಂಡು ಹೋರಾಟದ ಬಗ್ಗೆ ತೀರ್ಮಾನಿಸಲಾಗುವುದು.ಸೋಮವಾರ ನಡೆಸಲಿರುವ ಬಂದ್‌ ಬಗ್ಗೆ ನಮ್ಮ ಜತೆ ಯಾರೂ ಚರ್ಚಿಸಿಲ್ಲ.ಹೀಗಾಗಿ, ನಾವು ಪಾಲ್ಗೊಳ್ಳುವುದಿಲ್ಲ.
ಕುರುಬೂರು ಶಾಂತಕುಮಾರ್‌,
ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.