ಹೆಚ್ಚಾಯ್ತು ತುಂಗಭದ್ರಾ ಒಳಹರಿವು

Team Udayavani, May 28, 2018, 4:36 PM IST

dvg-1.jpg

ಬಳ್ಳಾರಿ: ಅಂತಾರಾಜ್ಯ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಲ್ಲಿ ಒಳಹರಿವಿನ ಪ್ರಮಾಣ ದಿನೇದಿನೆ ಹೆಚ್ಚಾಗುತ್ತಿದ್ದು, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದು ಒಳಹರಿವು ಹೆಚ್ಚಳಕ್ಕೆ ಕಾರಣವಾಗಿದ್ದು, ಮೂರು ಜಿಲ್ಲೆಗಳ ಜನರನ್ನು ಕಾಡುತ್ತಿದ್ದ ಕುಡಿವ ನೀರಿನ ಸಮಸ್ಯೆಯನ್ನೂ ದೂರಮಾಡಿದೆ. 133 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯವುಳ್ಳ ತುಂಗಭದ್ರಾ ಜಲಾಶಯ ಕಳೆದ ಹಲವು ವರ್ಷಗಳಿಂದ ಸಮರ್ಪಕ ಮಳೆ ಕೊರತೆಯಿಂದಾಗಿ ಭರ್ತಿಯಾಗಿರಲಿಲ್ಲ. ಆದರೆ, ಪ್ರಸಕ್ತ ವರ್ಷ ಮೇ ತಿಂಗಳಲ್ಲೇ ಒಳಹರಿವು ಆರಂಭವಾಗಿದೆ. 

ಭಾನುವಾರ ಜಲಾಶಯದಲ್ಲಿ ಒಳಹರಿವಿನ ಪ್ರಮಾಣ 3083 ಕ್ಯೂಸೆಕ್‌ ದಾಖಲಾಗಿದೆ. ಇದರಿಂದ ಜಲಾಶಯದಲ್ಲಿ ಸಂಗ್ರಹವಿದ್ದ 2.417 ಟಿಎಂಸಿ ಅಡಿ ಡೆಡ್‌ಸ್ಟೋರೇಜ್‌ ನೀರಿನೊಂದಿಗೆ ಕಳೆದ ಮೂರು ದಿನಗಳಿಂದ ಜಲಾಶಯದಲ್ಲಿ 1.289 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಸದ್ಯ ಒಟ್ಟು 3706 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ನೀರಿನ ಮಟ್ಟ 1578.90 ಅಡಿಯಿದ್ದು, 1356 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯಲ್ಲಿ ಕೇವಲ 1.005 ಟಿಎಂಸಿ ನೀರಿನ ಸಂಗ್ರಹವಿದ್ದು, 510 ಕ್ಯೂಸೆಕ್‌ ಒಳಹರಿವಿತ್ತು. ಪರಿಣಾಮ ಕಳೆದ ವರ್ಷ ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ವಿವಿಧೆಡೆ ಕುಡಿವ ನೀರಿನ ಸಮಸ್ಯೆ ತಲೆದೋರಿತ್ತು.
 
ಈ ಬಾರಿ ಮುಂಗಾರು ಮಳೆ ಶೀಘ್ರವಾಗಿ ಆರಂಭಗೊಂಡಿದ್ದು, ಜಲಾನಯನ ಪ್ರದೇಶಗಳಾದ ಜಿಲ್ಲೆಯ ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ದಾವಣಗೆರೆ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ಪರಿಣಾಮ ಪ್ರತಿದಿನ ಸರಾಸರಿ 3 ಸಾವಿರ ಕ್ಯೂಸೆಕ್‌ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಇದು ಮೂರು ಜಿಲ್ಲೆಗಳ ರೈತರಲ್ಲಿ ಸಂತಸ ಮೂಡಿಸಿದೆ. ಇನ್ನೊಂದು ತಿಂಗಳು ಮೂರು ಜಿಲ್ಲೆಗಳಲ್ಲಿ ಕುಡಿವ ನೀರಿಗೆ ಯಾವುದೇ ಸಮಸ್ಯೆ ಆಗಲಾರದು ಎನ್ನುತ್ತವೆ ತುಂಗಭದ್ರಾ ಆಡಳಿತ ಮಂಡಳಿಯ ಅಧಿಕಾರಿಗಳು.

ಜಲಾಶಯದಲ್ಲಿ ಒಳಹರಿವಿನ ಪ್ರಮಾಣ ಇದೇ ರೀತಿ ಮುಂದುವರಿದಲ್ಲಿ ಪ್ರಸಕ್ತ ವರ್ಷ ಡೆಡ್‌ಸ್ಟೋರೇಜ್‌ ನೀರನ್ನು ಬಳಸುವ ಪ್ರಶ್ನೆಯೇ ಉದ್ಭವಿಸಲ್ಲ. ಕುಡಿವ ನೀರಿಗೂ ಜನರ ಪರದಾಟ ತಪ್ಪಲಿದೆ. ಆದರೆ, ಪ್ರಕೃತಿಯಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಕಳೆದ ನಾಲ್ಕು ವರ್ಷಗಳಿಗೆ ಹೋಲಿಸಿದರೆ, ಪ್ರಸಕ್ತ ವರ್ಷ ಮುಂಗಾರು ಮಳೆ ಒಳ್ಳೆಯ ಮುನ್ಸೂಚನೆ ನೀಡಿದ್ದು, ಕಳೆದ ನಾಲ್ಕು ವರ್ಷಗಳಿಂದ ಭರ್ತಿಯಾಗದ ತುಂಗಭದ್ರಾ ಜಲಾಶಯ ಈ ಬಾರಿಯಾದರೂ
ಭರ್ತಿಯಾಗಿ ಎರಡು ಬೆಳೆಗಳಿಗೆ ನೀರು ದೊರೆಯುವಂತಾಗಲಿ ಎಂಬುದು ಜಿಲ್ಲೆಯ ರೈತರ ಒತ್ತಾಸೆಯಾಗಿದೆ.

ಕುಡಿಯಲು ಎಲ್‌ಎಲ್‌ಸಿಗೆ ನೀರು: ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮಗಳು ಮತ್ತು ನೆರೆಯ ಆಂಧ್ರ ಪ್ರದೇಶದ ಕರ್ನೂಲ್‌
ಜಿಲ್ಲೆಯ ಎಮ್ಮಿಗನೂರು, ಇತರೆ ಗ್ರಾಮಗಳಿಗೆ ಕುಡಿವ ನೀರು ಪೂರೈಸುವಂತೆ ಆಗ್ರಹಿಸಿ, ತುಂಗಭದ್ರಾ ಜಲಾಶಯ ಆಡಳಿತ ಮಂಡಳಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಗಿತ್ತು. ಜಲಾಶಯದಲ್ಲಿ ಬಳಕೆ ಮಾಡಬಾರದಾಗಿದ್ದ ಡೆಡ್‌ಸ್ಟೋರೇಜ್‌ ನೀರನ್ನು ಬಳಸುವುದು ಅಧಿಕಾರಿಗಳಿಗೆ ಅನಿವಾರ್ಯವಾಗಿತ್ತು.

ಮೂರು ದಿನಗಳಿಂದ ಜಲಾಶಯಕ್ಕೆ ನೀರು ಹರಿದು ಬಂದಿರುವುದರಿಂದ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದು, ಕುಡಿಯುವ ಸಲುವಾಗಿ ಎಲ್‌ಎಲ್‌ಸಿ ಕಾಲುವೆಗೆ ಮೊದಲು 500 ಕ್ಯೂಸೆಕ್‌ ನೀರನ್ನು ಬಿಟ್ಟಿದ್ದ ಮಂಡಳಿಯ ಅಧಿಕಾರಿಗಳು ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ ಪುನಃ 700 ಕ್ಯೂಸೆಕ್‌ ಹೆಚ್ಚಿಸಿ, ಒಟ್ಟು 1200 ಕ್ಯೂಸೆಕ್‌ ನೀರನ್ನು ಹೊರಬಿಡಲಾಗಿದೆ ಎಂದು ಜಲಾಶಯದ ಮೂಲಗಳು ತಿಳಿಸಿವೆ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.