ಉಣಕಲ್ಲ ರಾಜಕಾಲುವೆ ಒತ್ತುವರಿ ತೆರವಿಗೆ ಕ್ರಮ: ಶೆಟ್ಟರ

Team Udayavani, May 28, 2018, 5:05 PM IST

28-may-19.jpg

ಹುಬ್ಬಳ್ಳಿ: ಮಳೆ ನೀರು ಸರಾಗವಾಗಿ ಹರಿಯುವ ನಿಟ್ಟಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚಾರಣೆ ಆರಂಭಿಸಲಾಗುವುದು ಎಂದು ಶಾಸಕ ಜಗದೀಶ ಶೆಟ್ಟರ ಹೇಳಿದರು.ರವಿವಾರ ಇಲ್ಲಿನ ವಿನಾಯಕ ನಗರದಲ್ಲಿ ಸನ್ಮಾನ ಸ್ವೀಕರಿಸಿ, ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಉಣಕಲ್ಲನಿಂದ ಹರಿಯುವ ರಾಜಕಾಲುವೆ ಒತ್ತುವರಿಯಾಗಿದೆ. ಇದರಿಂದ ಮಳೆ ನೀರು ಸರಾಗವಾಗಿ ಹರಿಯುತ್ತಿಲ್ಲ. ಶೀಘ್ರದಲ್ಲಿ ಕಾಲುವೆ ಒತ್ತುವರಿ ತೆರವುಗೊಳಿಸುವ ಮೂಲಕ ದುರಸ್ತಿ ಕಾರ್ಯ ಆರಂಭಿಸಲಾಗುವುದು. ಇದರಿಂದ ವಿನಾಯಕ ನಗರ ಸೇರಿದಂತೆ ಇತರೆ ಪ್ರದೇಶಗಳಲ್ಲಿ ತಲೆದೋರುವ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದರು.

ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ರಸ್ತೆ ಡಾಂಬರೀಕರಣ ಟೆಂಡರ್‌ ಪ್ರಕ್ರಿಯೆ ಮುಂದುವರಿದಿರಲಿಲ್ಲ. ಹೀಗಾಗಿ ಚುನಾವಣೆ ಪೂರ್ವದಲ್ಲಿ ಈ ಭಾಗದ ಜನರಿಗೆ ನೀಡಿದ ಭರವಸೆಯಂತೆ 24 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ ಆರಂಭಿಸಲಾಗಿದೆ. ಉಳಿದಂತೆ ಚರಂಡಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು. ಎಲ್ಲಾ ಕಾಲೊನಿಗೆ ಭೇಟಿ: ಕ್ಷೇತ್ರದಲ್ಲಿ ಸಿಆರ್‌ ಎಫ್ ನಿಧಿ ಸೇರಿದಂತೆ ವಿವಿಧ ಅನುದಾನದಲ್ಲಿ ಕಾಮಗಾರಿಗಳು ನಡೆಯುತ್ತಿದ್ದು, ಎರಡು ದಿನಗಳ ನಂತರ ಎಲ್ಲಾ ಕಾಲೊನಿಗಳಿಗೆ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಹಾಗೂ ಸಮಸ್ಯೆಗಳನ್ನು ಪಟ್ಟಿ ಅವುಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಹೇಳಿದರು.

ಶ್ರೀ ವಿನಾಯಕ ದೇವಸ್ಥಾನದ ಸಂಘದ ಅಧ್ಯಕ್ಷ ಪಿ.ವೈ. ನಾಯಕ ಮಾತನಾಡಿ, ನಾಲ್ಕು ದಶಕಗಳನ್ನು ಕಂಡಿರುವ ಈ ಬಡಾವಣೆ ಮೂಲಸೌಲಭ್ಯದಿಂದ ವಂಚಿತವಾಗಿದೆ. ಮಳೆಗಾದಲ್ಲಿ ಓಡಾಡಲು ದೊಡ್ಡ ಸಮಸ್ಯೆಯಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಬೇಕು. ಬಡಾವಣೆಯ ಜನ ದೇವಸ್ಥಾನ ನಿರ್ಮಿಸಿದ್ದು ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೂ ಮೊದಲು ಸ್ಥಳೀಯರು ಜಗದೀಶ ಶೆಟ್ಟರ ಅವರಿಗೆ ಕಾಲೋನಿಯ ಸಮಸ್ಯೆಗಳ ದರ್ಶನ ಮಾಡಿಸಿದರು. ರಸ್ತೆ, ಚರಂಡಿ ನೀರು ಹರಿಯುತ್ತಿರುವುದು ಸೇರಿದಂತೆ ಹಲವು ತೊಂದರೆಗಳನ್ನು ತೋರಿಸಿ ಶೀಘ್ರದಲ್ಲಿ ಅವುಗಳಿಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿದರು. ಪಾಲಿಕೆ ಸದಸ್ಯ ಮಹೇಶ ಬುರ್ಲಿ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಸಾವಕಾರ, ಸ್ಥಳೀಯರಾದ ಐ.ಎಸ್‌. ಹಂದಿಗೋಳ, ತನುಜಾ ಪಾಟೀಲ, ಅಶೋಕ ಕುನ್ನೂರ ಇನ್ನಿತರರಿದ್ದರು.

ಟಾಪ್ ನ್ಯೂಸ್

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.