13 ಸಾವಿನ ಬಳಿಕ ಸ್ಟರ್ಲೈಟ್‌ಗೆ ಬೀಗ
Team Udayavani, May 29, 2018, 6:00 AM IST
ಚೆನ್ನೈ: ಪೊಲೀಸರ ಗೋಲಿಬಾರ್‌ನಿಂದ ಹದಿಮೂರು ಮಂದಿ ಪ್ರತಿಭಟನಾಕಾರರು ಅಸುನೀಗಿದ ಬಳಿಕ ತಮಿಳು ನಾಡು ಸರಕಾರ ತೂತುಕುಡಿಯ ವೇದಾಂತ ಕಂಪನಿಯ ಸ್ಟರ್ಲೈಟ್ ತಾಮ್ರ ಉತ್ಪಾದನಾ ಘಟಕವನ್ನು ಶಾಶ್ವತವಾಗಿ ಮುಚ್ಚಲು ನಿರ್ಧರಿಸಿದೆ. ಈ ಬಗ್ಗೆ ತಮಿಳುನಾಡು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(ಟಿಎನ್‌ಪಿಸಿಬಿ)ಗೆ ಆದೇಶ ನೀಡಲಾಗಿದೆ. “ಘಟಕವನ್ನು ಶಾಶ್ವತವಾಗಿ ಮುಚ್ಚಿ ಬೀಗ ಮುದ್ರೆ ಹಾಕಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಜನರ ಆಕ್ರೋಶ, ಅಭಿಪ್ರಾಯಗಳಿಗೆ ಮನ್ನಣೆ ನೀಡಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸೋಮವಾರ ಬಿಡುಗಡೆ ಮಾಡಲಾಗಿರುವ ಸರ್ಕಾರಿ ಆದೇಶದಲ್ಲಿ ಉಲ್ಲೇಖೀಸಲಾಗಿದೆ. ಕಳೆದ ಕೆಲವು ದಿನಗಳಿಂದ ತಾಮ್ರ ಉತ್ಪಾದನಾ ಘಟಕದ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿರುವ ಸಿಎಂ ಕೆ.ಪಳನಿಸ್ವಾಮಿ, ಸ್ಥಾವರಕ್ಕೆ ನೀರು ಮತ್ತು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸುವ ಬಗ್ಗೆ ಈಗಾ ಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
99 ದಿನಗಳಿಂದ ತೂತುಕುಡಿಯ ನಿವಾಸಿಗಳು ಸ್ಥಳೀಯ ಜಲಮೂಲವನ್ನು ಮಲಿನ ಮಾಡುತ್ತಿರುವ ಸ್ಟಲೈìಟ್ ತಾಮ್ರ ಘಟಕ ಮುಚ್ಚಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದರು. 100ನೇ ದಿನವಾಗಿದ್ದ ಮೇ 22ರಂದು ಅದು ಹಿಂಸಾ ಸ್ವರೂಪ ಪಡೆದು, ಪೊಲೀಸರು ಗೋಲಿಬಾರ್ ನಡೆಸಿದ್ದರಿಂದ 13 ಮಂದಿ ಸಾವಿಗೀಡಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.