91 ನಿಗಮ-ಮಂಡಳಿ ಅಧ್ಯಕ್ಷರಿಗೆ ಕೊಕ್
Team Udayavani, May 29, 2018, 7:00 AM IST
ಬೆಂಗಳೂರು: ಹಿಂದಿನ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಮಾಡಲಾಗಿದ್ದ ರಾಜ್ಯದ 91 ನಿಗಮ- ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರದ್ದುಗೊಳಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯವರ ಮೇ 26ರ ಟಿಪ್ಪಣಿಯನ್ನು ಉಲ್ಲೇಖೀಸಿ ಸಾರ್ವಜನಿಕ ಉದ್ದಿಮೆಗಳ ಇಲಾಖೆ ಆದೇಶ ಹೊರಡಿಸಿದೆ. ನಿಗಮ ಮಂಡಳಿಗಳ ಅಧ್ಯಕ್ಷರ ಅವಧಿ ಈ ಕೂಡಲೇ ಜಾರಿಗೆ ಬರುವಂತೆ ಕೊನೆಗೊಳ್ಳುತ್ತದೆ.
ಮುಂದಿನ ಆದೇಶದವರೆಗೆ ಈ ನಿಗಮ-ಮಂಡಳಿಗಳಿಗೆ ಸಂಬಂಧಪಟ್ಟ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ,
ಅಪರ ಮುಖ್ಯ ಕಾರ್ಯದರ್ಶಿಯವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಸೂಚಿಸಿರುತ್ತಾರೆಂದು ಆದೇಶದಲ್ಲಿ ಹೇಳಲಾಗಿದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 2016ರ ನವೆಂಬರ್‌ನಲ್ಲಿ ಎರಡನೇ ಅವಧಿಗೆ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿ ನಡೆದಿತ್ತು. 91 ನಿಗಮ ಮಂಡಳಿಗಳಿಗೆ 21 ಶಾಸಕರು ಹಾಗೂ 70 ಮಂದಿ ಕಾರ್ಯಕರ್ತರನ್ನು
ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಸರ್ಕಾರ ಅಸ್ತಿತ್ವದಲ್ಲಿ ಇರುವವರೆಗೆ ಅಧ್ಯಕ್ಷರ ಅಧಿಕಾರಾವಧಿ ಇತ್ತು. ಈಗ ಹೊಸದಾಗಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಹಿಂದಿನ ಸರ್ಕಾರದಲ್ಲಿ ನೇಮಕೊಂಡಿದ್ದ
ನಿಗಮ-ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿಯನ್ನು ಕೊನೆಗೊಳಿಸಿ ಆದೇಶ ಹೊರಡಿಸಲಾಗಿದೆ.
ಪ್ರಾಧಿಕಾರಗಳ ಅಧ್ಯಕ್ಷರಿಗೂ ಈ ಆದೇಶ ಅನ್ವಯವಾಗಲಿದೆ.
ಎರಡೂ ಪಕ್ಷಗಳ ಕಾರ್ಯಕರ್ತರಿಂದ ಒತ್ತಡ: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿರುವುದರಿಂದ ಇದೀಗ ಎರಡೂ ಪಕ್ಷಗಳ ಕಾರ್ಯಕರ್ತರು, ಮುಖಂಡರು ನಿಗಮ- ಮಂಡಳಿ
ಅಧ್ಯಕ್ಷಗಿರಿ ಮೇಲೆ ಕಣ್ಣಿಟ್ಟಿದ್ದಾರೆ. ಸಚಿವ ಸಂಪುಟ ವಿಸ್ತರಣೆ ನಂತರ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡವರನ್ನು ಸಮಾಧಾನ ಪಡಿಸಲು ಪ್ರಮುಖ ನಿಗಮ ಮಂಡಳಿ ಅಧ್ಯಕ್ಷಗಿರಿ ಹಾಗೂ ಸಂಪುಟ ದರ್ಜೆ ಸ್ಥಾನಮಾನ ನೀಡುವ ಬಗ್ಗೆ ಎರಡೂ ಪಕ್ಷಗಳಲ್ಲಿ ಚರ್ಚೆ ನಡೆದಿದೆ.
ಮೂಲಗಳ ಪ್ರಕಾರ, 5 ರಿಂದ 10 ನಿಗಮ ಮಂಡಳಿ ಹೊರತು ಪಡಿಸಿದರೆ ಉಳಿದವುಗಳಿಗೆ ಲೋಕಸಭೆ
ಚುನಾವಣೆ ಮುಗಿಯುವವರೆಗೂ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಅನುಮಾನ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.