ಪರಿಷತ್‌ ಚುನಾವಣೆ: ಬಿಜೆಪಿ ಕಾಂಗ್ರೆಸ್‌ನಲ್ಲಿ ಪೈಪೋಟಿ


Team Udayavani, May 29, 2018, 6:35 AM IST

aadf.jpg

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಆಕಾಂಕ್ಷಿಗಳ ಪಟ್ಟಿ  ದಿನೇ ದಿನೇ ದೊಡ್ಡದಾಗುತ್ತಿದೆ.

ರಾಜ್ಯ ವಿಧಾನಸಭೆಯ ಸಂಖ್ಯಾಬಲದ ಮೇಲೆ ಬಿಜೆಪಿ ಐದು, ಕಾಂಗ್ರೆಸ್‌ ನಾಲ್ಕು ಗೆಲ್ಲುವ ಸಾಧ್ಯತೆಯಿದ್ದು, ಹಾಲಿ ನಿವೃತ್ತಿ ಹೊಂದುತ್ತಿರುವವರು ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ಕೈ ತಪ್ಪಿದವರು, ಪಕ್ಷ ಸಂಘಟನೆಯಲ್ಲಿ ತೊಡಗಿದ್ದವರು ಎರಡೂ ಪಕ್ಷಗಳಲ್ಲಿ ಲಾಬಿಯಲ್ಲಿ ತೊಡಗಿದ್ದಾರೆ.ಬಿಜೆಪಿಯಲ್ಲಿ ಡಿ.ಎಸ್‌.ವೀರಯ್ಯ, ಸೋಮಣ್ಣ ಬೇವಿನ ಮರದ, ಭಾನುಪ್ರಕಾಶ್‌, ಬಿ.ಜೆ.ಪುಟ್ಟಸ್ವಾಮಿ, ರಘುನಾಥ್‌ರಾವ್‌ ಮಲ್ಕಾಪುರೆ ನಿವೃತ್ತಿಯಾಗುತ್ತಿದ್ದು ಐವರೂ ಪುನರಾಯ್ಕೆ ಬಯಸಿದ್ದಾರೆ.

ಆದರೆ, ಇವರನ್ನು ಹೊರತುಪಡಿಸಿ  ಕೆ.ಪಿ.ನಂಜುಂಡಿ, ರುದ್ರೇಗೌಡ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌, ತೇಜಸ್ವಿನಿ ರಮೇಶ್‌, ಅಶ್ವಥ್‌ನಾರಾಯಣ ಸಹ ಆಕಾಂಕ್ಷಿಗಳಾಗಿದ್ದಾರೆ.

ಈಗಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ.ಸದಾನಂದಗೌಡ ಅವರು  ಈ ಬಗ್ಗೆ ಮಾತುಕತೆ ನಡೆಸಿ ಒಮ್ಮತದ ಪಟ್ಟಿ ಸಿದ್ಧಪಡಿಸಿ ಕೇಂದ್ರದ ನಾಯಕರಿಗೆ ಸಲ್ಲಿಸಿದ್ದಾರೆ. ಅಲ್ಲಿಂದ ಒಪ್ಪಿಗೆ ಸಿಗುವುದಷ್ಟೇ ಬಾಕಿ ಎಂದು ಹೇಳಲಾಗಿದೆ.

ಕಾಂಗ್ರೆಸ್‌ನಲ್ಲೂ ಡಿಮ್ಯಾಂಡ್‌
ಇನ್ನು ಕಾಂಗ್ರೆಸ್‌ನಲ್ಲಿ ನಾಲ್ಕು ಸ್ಥಾನ ಗೆಲ್ಲಬಹುದಾಗಿದ್ದು, ನಿವೃತ್ತಿಯಾಗಲಿರುವ ಕೆ.ಗೋವಿಂದರಾಜು, ಸಿ.ಎಂ.ಇಬ್ರಾಹಿಂ, ಮೋಟಮ್ಮ ಪುನರಾಯ್ಕೆ ಬಯಸಿದ್ದಾರೆ. ಇವರ ಜತೆಗೆ ಮಾಜಿ ಮೇಯರ್‌ ರಾಮಚಂದ್ರಪ್ಪ, ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌, ಮಾಜಿ ಸಚಿವೆ ರಾಣಿ ಸತೀಶ್‌, ಮಾಜಿ ಸಚಿವ ನಸೀರ್‌ ಅಹಮದ್‌ ಆಕಾಂಕ್ಷಿಗಳಾಗಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್‌ ಜತೆ ಚರ್ಚೆಗೆ ತೆರಳಿರುವ ರಾಜ್ಯ ಕಾಂಗ್ರೆಸ್‌ ನಾಯಕರು ವಿಧಾನಪರಿಷತ್‌ ಚುನಾವಣೆ ಬಗ್ಗೆಯೂ ಮಾತುಕತೆ ನಡೆಸಿ ಅಭ್ಯರ್ಥಿಗಳ ಪಟ್ಟಿಗೆ ಒಪ್ಪಿಗೆ ಪಡೆದು ಬರಲಿದ್ದಾರೆ ಎಂದು ಹೇಳಲಾಗಿದೆ.

ಸಿದ್ದರಾಮಯ್ಯ ಒಲವು
ಕಳೆದ ಹತ್ತು ವರ್ಷಗಳಿಂದ ಮಾಜಿ ಮೇಯರ್‌ ರಾಮಚಂದ್ರಪ್ಪ ಹೆಸರು ಪ್ರತಿ ಬಾರಿ ವಿಧಾನಪರಿಷತ್‌ ನಾಮಕರಣ ಸಂದರ್ಭದಲ್ಲಿ ಕೇಳಿ ಬರುತ್ತಿದೆಯಾದರೂ ಕೊನೇ ಕ್ಷಣದಲ್ಲಿ ಕೈ ತಪ್ಪುತ್ತಿದೆ. ಅವಕಾಶ ತಪ್ಪಿದಾಗ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ತೋರದೆ ತಮ್ಮಷ್ಟಕ್ಕೆ ತಾವು ಪಕ್ಷ ಸಂಘಟನೆಯಲ್ಲಿ ತೊಡಗುವ ರಾಮಚಂದ್ರಪ್ಪ ಅವರಿಗೆ  ಈ ಬಾರಿಯಾದರೂ ಅವಕಾಶ ಮಾಡಿಕೊಡಬೇಕು ಎಂದು ಪಕ್ಷದ ನಾಯಕರಲ್ಲೂ ಕೇಳಿಬರುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ರಾಮಚಂದ್ರಪ್ಪ ಪರ ಒಲವು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.