ಕೋಟೇಶ್ವರ : ಕ್ಷುಲ್ಲಕ ಕಾರಣಕ್ಕೆ ಹಲ್ಲೆ
Team Udayavani, May 29, 2018, 9:40 AM IST
ಕುಂದಾಪುರ: ಕೋಟೇಶ್ವರ ಗ್ರಾಮದ ಬಾರೊಂದರ ಎದುರು ರವಿವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ ನಡೆದಿದೆ.
ಕೋಟೇಶ್ವರದ ಮಾರ್ಕೋಡಿನ ಬೆಟ್ಟಿನ ಮನೆ ನವೀನ್ ಗೊಲ್ಲ ಅವರು ಮೇ 27ರಂದು ರಾತ್ರಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಒಂದಕ್ಕೆ ಊಟ ಪಾರ್ಸೆಲ್ ತರಲು ಸ್ನೇಹಿತ ಪ್ರದೀಪ್ ಖಾರ್ವಿ ಜತೆ ತಮ್ಮ ಕಾರಿನಲ್ಲಿ ತೆರಳಿದ್ದರು.
ನವೀನ್ ಗೊಲ್ಲ ಅವರು ತಮ್ಮ ವಾಹನವನ್ನು ಪಾರ್ಕ್ ಮಾಡಿ ಪಾರ್ಸೆಲ್ ಪಡೆದು ವಾಪಸ್ ಬಂದಾಗ ಪಾರ್ಕ್ ಮಾಡಿದ ತಮ್ಮ ವಾಹನದ ಎದುರು ಕೋಟೇಶ್ವರದ ಅಂಕದಕಟ್ಟೆಯ ರಕ್ಷಿತ್ ಶೆಟ್ಟಿ ಮತ್ತು ಇತರರು ತಮ್ಮ ವೋಕ್ಸ್‌ವ್ಯಾಗನ್ ಕಾರನ್ನು ಅಡ್ಡ ಇಟ್ಟಿದ್ದರು. ಕಾರನ್ನು ತೆಗೆಯಿರಿ ಎಂದಾಗ ಅವರೆಲ್ಲ ಸೇರಿ ಅವಾಚ್ಯ ಶಬ್ದಗಳಿಂದ ಬೈದು ಸೋಡಾ ಬಾಟಲಿಯಿಂದ ಹಲ್ಲೆ ಮಾಡಿದ್ದು, ಅದನ್ನು ಪ್ರಶ್ನಿಸಿದ ಪ್ರದೀಪ್ ಖಾರ್ವಿಗೂ ಅವಾಚ್ಯವಾಗಿ ಬೈದು ಅದೇ ಬಾಟಲಿಯಿಂದ ಹಲ್ಲೆ ಮಾಡಿದ್ದಾರೆ. ನಮ್ಮ ವಿಷಯಕ್ಕೆ ಬಂದರೆ ನಿಮ್ಮನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.