ಹೊನ್ನಾಳಿ: ಬಂದ್ ಭಾಗಶಃ ಯಶಸ್ವಿ
Team Udayavani, May 29, 2018, 11:55 AM IST
ಹೊನ್ನಾಳಿ: ಸಮ್ಮಿಶ್ರ ಸರ್ಕಾರ ರೈತರ ಸಾಲ ಮಾಡಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ಬಿಜೆಪಿ ರಾಜ್ಯಾದ್ಯಂತ ಕರೆ ನೀಡಿದ್ದ ಬಂದ್‌ಗೆ ತಾಲೂಕಿನಲ್ಲಿ ಭಾಗಶಃ ಯಶಸ್ವಿಯಾಗಿದೆ.
ಬಂದ್ ನೇತೃತ್ವವಹಿಸಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ಮಧ್ಯಹಾ 12ಕ್ಕೆ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಮಾಡುತ್ತಿರುವ ಸಂದರ್ಭದಲ್ಲಿ ಪೊಲೀಸರು ಬಂದ್ ಮಾಡುವಂತಿಲ್ಲ ಎನ್ನುವ ಕಾರಣ ನೀಡಿ ಶಾಸಕರು ಹಾಗೂ ಇತರ ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ಪಟ್ಟಣದ ಬಹುತೇಕ ಅಂಗಡಿ ಮುಂಗಟ್ಟುಗಳು ಬೆಳಗ್ಗೆಯಿಂದಲೇ ಮುಚ್ಚಲ್ಪಟ್ಟಿದ್ದವು. ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಹಾಗೂ ಇತರೆ ಅರೆ ಸರ್ಕಾರಿ ಕಚೇರಿಗಳು ಎಂದಿನತೆ ಕಾರ್ಯ ನಿರ್ವಹಿಸಿದವು. ಖಾಸಗಿ ಹಾಗೂ
ಕೆಎಸ್ಸಾರ್ಟಿಸಿ ಬಸ್‌ಗಳು ಎಂದಿನಂತೆ ಸಂಚಾರ ಮಾಡಿದವು.
ಈ ಸಂದರ್ಭದಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ
ತಾವು ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಹೇಳಿದ್ದರು. ಮಾತಿನಂತೆ ಅವರು ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿಗಳು ಅಧಿಕಾರ ದೊರೆತ ತಕ್ಷಣ ರೈತರ ಸಾಲದ ಬಗ್ಗೆ ಯು ಟರ್ನ್ ಹೊಡೆದಿದ್ದಾರೆ. ಅದು ಸಮ್ಮಿರ್ಶ
ಸಕಾರವಾಗಿರಲಿ ಅಥವಾ ಒಂದೇ ಪಕ್ಷದ ಆಡಳಿತವಿರಲಿ ಒಟ್ಟಿನಲ್ಲಿ ಎಚ್‌ಡಿಕೆ ಮುಖ್ಯಮಂತ್ರಿಯಾಗಿದ್ದಾರೆ. ಅವರು ಮಾತಿನಂತೆ ರೈತರ ಸಾಲ ಮನ್ನಾ ಮಾಡಲಿ ಎಂದರು. ತಹಶೀಲ್ದಾರ್ ತುಷಾರ್ ಬಿ. ಹೊಸೂರು ಅವರಿಗೆ ಮನವಿ
ಸಲ್ಲಿಸಿದ್ದರು.
ಬಿಜೆಪಿ ಕಾರ್ಯಕರ್ತರು ಬೈಕ್ ರ್ಯಾಲಿಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು. ಬಂದ್ ಹಿನ್ನಲೆಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ತಾಲೂಕು ಬಿಜೆಪಿ ಅಧ್ಯಕ್ಷ ಡಿ.ಜಿ. ರಾಜಪ್ಪ, ಜಿಪಂ ಸದಸ್ಯರಾದ ಎಂ.ಆರ್. ಮಹೇಶ್, ಉಮಾ ರಮೇಶ್, ದೀಪಾ ಜಗದೀಶ್, ವೀರಶೇಖರಪ್ಪ, ಸುರೇಂದ್ರನಾಯ್ಕ, ತಾಪಂ ಉಪಾಧ್ಯಕ್ಷ ಸಿ.ಆರ್. ಶಿವಾನಂದ್ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
MUST WATCH
ಹೊಸ ಸೇರ್ಪಡೆ
ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.