ನಗರದ ನೂರು ಕಡೆ ಸ್ಮಾರ್ಟ್‌ಬಿನ್
Team Udayavani, May 29, 2018, 2:31 PM IST
ಬೆಂಗಳೂರು: ನಗರದಲ್ಲಿ ಹಸಿ ಹಾಗೂ ಒಣ ತ್ಯಾಜ್ಯದ ಪ್ರತ್ಯೇಕ ಸಂಗ್ರಹಣೆಗೆ ಆಯ್ದ ಪ್ರದೇಶಗಳಲ್ಲಿ ಹೊಸದಾಗಿ 100 ಸ್ಮಾರ್ಟ್‌ಬಿನ್‌ಗಳನ್ನು ಅಳವಡಿಸಲಾಗುತ್ತದೆ ಎಂದು ಬಿಬಿಎಂಪಿ ಸೋಮವಾರ ಹೈಕೋರ್ಟ್‌ಗೆ ತಿಳಿಸಿದೆ.
ಘನತ್ಯಾಜ್ಯ ನಿರ್ವಹಣೆ, ವಾರ್ಡ್ ಕಮಿಟಿ ರಚನೆ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠಕ್ಕೆ ಪಾಲಿಕೆ ಈ ಮಾಹಿತಿ ನೀಡಿತು.
ವಿಚಾರಣೆ ವೇಳೆ ಹಾಜರಿದ್ದ ಘನತ್ಯಾಜ್ಯ ಸಂಸ್ಕರಣೆ ವಿಭಾಗದ ಜಂಟಿ ಆಯುಕ್ತ ಡಾ.ಸಫರಾಜ್ ಖಾನ್, ತ್ಯಾಜ್ಯ ಸಂಸ್ಕರಣೆಗೆ ಪಾಲಿಕೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಹೊಸದಾಗಿ 1500 ಟನ್ ತ್ಯಾಜ್ಯ ಸಂಗ್ರಹಣೆ ಸಾಮರ್ಥ್ಯದ 100 ಸ್ಮಾರ್ಟ್‌ಬಿನ್‌ಗಳನ್ನು ನಗರದ ಆಯ್ದ ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಒಣ ಹಾಗೂ ಹಸಿ ತ್ಯಾಜ್ಯ ಸಂಗ್ರಹಣೆಗೆ ಪ್ರತ್ಯೇಕ ಸ್ಮಾರ್ಟ್ ಬಿನ್‌ಗಳಲ್ಲಿ ಇಡಲಾಗುತ್ತದೆ ಎಂದು ತಿಳಿಸಿದರು.
ಈ ಹಿಂದೆ ವಾಣಿಜ್ಯ ಪ್ರದೇಶಗಳಲ್ಲಿ ಅಳವಡಿಸಿದ್ದ 2000 ಸ್ಮಾರ್ಟ್‌ಬಿನ್‌ಗಳ ಪೈಕಿ, 500 ಸ್ಮಾರ್ಟ್‌ಬಿನ್‌ಗಳನ್ನು ದುಷ್ಕರ್ಮಿಗಳು ಹಾಳುಗೆಡವಿದ್ದು, ಹಲವೆಡೆ ಕಳವು ಮಾಡಿದ್ದಾರೆ. ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದೇವೆ. ಇದೀಗ ಮತ್ತೆ ಸ್ಮಾರ್ಟ್‌ಬಿನ್‌ಗಳನ್ನು ಅಳವಡಿಸಲಾಗುತ್ತದೆ ಎಂದು ಪಾಲಿಕೆ ಹಮ್ಮಿಕೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡಿದರು.
ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ, ಹೊಸದಾಗಿ ಸ್ಮಾರ್ಟ್‌ಬಿನ್‌ಗಳನ್ನು ಯಾವ ರೀತಿ ಅಳವಡಿಸಲಾಗುತ್ತದೆ ಮತ್ತು ಕಸ ವಿಂಗಡಣೆಗೆ ವೈಜ್ಞಾನಿಕವಾಗಿ ಕೈಗೊಳ್ಳುವ ಕ್ರಮಗಳ ಬಗ್ಗೆ ಮುಂದಿನ ಎರಡು ವಾರದಲ್ಲಿ ಪ್ರಮಾಣಪತ್ರ ಸಲ್ಲಿಸುವಂತೆ ತಾಕೀತು ಮಾಡಿತು.
ತ್ಯಾಜ್ಯ ಸಂಸ್ಕರಣ ಘಟಗಳಲ್ಲಿ, ತ್ಯಾಜ್ಯ ವಿಲೇವಾರಿ, ತಾಂತ್ರಿಕ ಅಳವಡಿಕೆ ಸೇರಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಿದ್ದು ವರದಿ ನೀಡುವಂತೆ ಕರ್ನಾಟಕ ಸಾವಯವ ಗೊಬ್ಬರ ಅಭಿವೃದ್ಧಿ ನಿಗಮ (ಕೆಸಿಡಿಸಿ) ವ್ಯವಸ್ಥಾಪಕ ನಿರ್ದೇಶಕರಿಗೆ ನ್ಯಾಯಪೀಠ ನಿರ್ದೇಶಿಸಿ ಚಾರಣೆಯನ್ನು ಜೂನ್ 29ಕ್ಕೆ ಮುಂದೂಡಿತು.
ತಾಂತ್ರಿಕ ಸಲಹಾ ಸಮಿತಿ ರಚನೆ: ಪಾಲಿಕೆ ವ್ಯಾಪ್ತಿಯ ಏಳು ತ್ಯಾಜ್ಯ ಸಂಸ್ಕರಣಾ ಘಟಕಗಳ ಸಮರ್ಪಕ ಕಾರ್ಯನಿರ್ವಹಣೆಗೆ ಅನುಕೂಲವಾಗುವಂತೆ ಶಿಫಾರಸುಗಳನ್ನು ನೀಡುವ ಸಲುವಾಗಿ ತಜ್ಞರನ್ನೊಳಗೊಂಡ “ತಾಂತ್ರಿಕ ಸಲಹಾ ಸಮಿತಿ’ ರಚಿಸಲಾಗಿದೆ ಎಂದು ರಾಜ್ಯಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಹೈಕೋರ್ಟ್ ಸೂಚನೆ ಮೇರೆಗೆ ರಾಜ್ಯಸರ್ಕಾರ ಮೇ 16ರಂದು ತಾಂತ್ರಿಕ ಸಲಹಾ ಸಮಿತಿ ರಚಿಸಿದೆ ಎಂದು ಸರ್ಕಾರದ ಪರ ವಕೀಲರು ಮೆಮೊ ಸಲ್ಲಿಸಿದರು. ಸಾರ್ವಜನಿಕ ಹಿತ ಹಾಗೂ ಪರಿಸರ ಸಂರಕ್ಷಣೆ ದೃಷ್ಟಿಯಿಂದ ಕಸ ಸಂಸ್ಕರಣಾ ಘಟಕಗಳು ವೈಜಾನಿಕವಾಗಿ ಮತ್ತು ಯಾವುದೇ ಲೋಪವಿಲ್ಲದೆ ಕಾರ್ಯನಿರ್ವಹಿಸಬೇಕಿದೆ.
ಆದ್ದರಿಂದ ತ್ಯಾಜ್ಯ ಸಂಸ್ಕರಣೆ, ವಿಲೇವಾರಿ, ತಾಂತ್ರಿಕ ಅಳವಡಿಕೆ ಸೇರಿದಂತೆ ಇನ್ನಿತರೆ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ಅಗತ್ಯ ಶಿಫಾರಸುಗಳನ್ನು ನೀಡುವ ಸಲುವಾಗಿ ಐಐಎಸ್ಸಿ, ಪರಿಸರ ವಿಜ್ಞಾನಿಗಳು, ಕೃಷಿ ವಿ.ವಿ ತಜ್ಞರು, ಮಾಲಿನ್ಯ ನಿಯಂತ್ರಣ ಮಂಡಳಿ, ವಿವಿಧ ಕ್ಷೇತ್ರಗಳ ತಜ್ಞರನ್ನೊಳಗೊಂಡತೆ ಕನಿಷ್ಟ 8 ಸದಸ್ಯರ ಉನ್ನತ ಮಟ್ಟದ “ತಾಂತ್ರಿಕ ಸಲಹಾ ಸಮಿತಿಯನ್ನು’ ರಚಿಸುವಂತೆ ಹೈಕೋರ್ಟ್ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.