ಆರ್. ಆರ್. ನಗರದಲ್ಲೂ ಅಲ್ಪ ಮತದಾನ


Team Udayavani, May 29, 2018, 2:32 PM IST

rr-nagar.jpg

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮತದಾನ ಪೊಲೀಸರ ಕಟ್ಟೆಚ್ಚರದ ನಡುವೆ ಸೋಮವಾರ ಶಾಂತಿಯುತವಾಗಿ ನಡೆದಿದ್ದು, ಕ್ಷೇತ್ರದಾದ್ಯಂತ ಶೇ.55ರಷ್ಟು ಮತದಾನ ದಾಖಲಾಗಿದೆ.

ಸೋಮವಾರ ಬೆಳಗ್ಗೆ 7 ಗಂಟೆಯಿಂದಲೇ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರೊಂದಿಗೆ ಸೆಲೆಬ್ರೆಟಿಗಳೂ ಹಕ್ಕು ಚಲಾಯಿಸಿದರು. ಆದರೆ, ಸಹಜವಾಗಿ ಚುನಾವಣೆಗಳ ವೇಳೆ ಕಂಡುಬರುವ ಉತ್ಸಾಹ ಕ್ಷೇತ್ರದ ಮತದಾರರಲ್ಲಿ ಕಾಣಲಿಲ್ಲ.

ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದ್ದರೂ ಬಹುತೇಕರು ಮನೆಯಿಂದ ಹೊರಗೆ ಬಂದು ಹಕ್ಕು ಚಲಾಯಿಸಲೇ ಇಲ್ಲ. ಕೊಳೆಗೇರಿಗಳು ಹಾಗೂ ಬಡಾವಣೆಗಳಲ್ಲಿ ಬೆಳಗ್ಗೆ ಬಿರುಸಿನ ಮತದಾನ ಕಂಡು ಬಂದಿತಾದರೂ ಮಧ್ಯಾಹ್ನದ ನಂತರ ಮತಗಟ್ಟೆಗಳು ಬಣಗುಡುತ್ತಿದ್ದವು.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ರಚನೆಯ ಬಳಿಕ ನಡೆಯುತ್ತಿರುವ ಮೊದಲ ಉಪಚುನಾವಣೆ ಇದಾಗಿದ್ದು, ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಈಗಾಗಲೇ ಮೂರು ಪಕ್ಷಗಳು ಪ್ರತಿಷ್ಠೆ ಪಣವಾಗಿಟ್ಟು ಬಿರುಸಿನ ಪ್ರಚಾರ ಕೈಗೊಂಡಿದ್ದವು. ಇದರಿಂದಾಗಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು.

ಆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭಾರಿ ಪ್ರಮಾಣದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಗುರುತಿನ ಚೀಟಿ ಪ್ರಕರಣ ಬಳಿಕ ಚುನಾವಣಾ ಆಯೊಗವು, ಈ ಹಿಂದೆ ಕ್ಷೇತ್ರದ ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಸಿಬ್ಬಂದಿಯ ಬದಲಿಗೆ 2,524 ಬದಲಿ ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಿತ್ತು.

ಸದ್ದು ಮಾಡಿದ ವಂದತಿಗಳು: ಮತದಾನ ಹಿನ್ನೆಲೆಯಲ್ಲಿ ಸೋಮವಾರ ಕ್ಷೇತ್ರದಲ್ಲಿ ಅಭ್ಯರ್ಥಿಗಳ ವಿರುದ್ಧ ಎಲ್ಲ ಪಕ್ಷಗಳ ವಿರುದ್ಧ ವಂದತಿಗಳು ಹರಿದಾಡಿದ್ದು, ಎಲ್ಲ ಪಕ್ಷಗಳ ಅಭ್ಯರ್ಥಿಗಳೊಂದಿಗೆ ಮತದಾರರು ಸಹ ಗೊಂದಲಕ್ಕೀಡು ಮಾಡಿದವು. ಗುರುತಿನ ಚೀಟಿ ಪ್ರಕರಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮುನಿರತ್ನರನ್ನು ಬಂಧಿಸಲಾಗಿದೆ ಎಂಬ ವದಂತಿ ಹರಿದಾಡಿತ್ತು. ಆ ಹಿನ್ನೆಲೆಯಲ್ಲಿ ಮುನಿರತ್ನ ಅವರು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜ್ಞಾನಭಾರತಿ ವಾರ್ಡ್‌ನಲ್ಲಿ ಕಾಣಿಸಿಕೊಂಡರು.

ಅದರ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜುಗೌಡ ವಿರುದ್ಧ ಪ್ರಕರಣ ದಾಖಲಾಗಿದೆ ಎಂಬ ಮಾತುಗಳು ಕೇಳಿಬಂದರೆ, ಮತ್ತೂಂದಡೆ ಜೆಡಿಎಸ್‌ನ ರಾಮಚಂದ್ರ ಅವರು ಒಳ ಒಪ್ಪಂದ ಮಾಡಿಕೊಂಡು ಮತದಾನ ಮಾಡಿ ಮನೆಯಲ್ಲಿ ಸುಮ್ಮನೆ ಕುಳಿತಿದ್ದಾರೆ ಎನ್ನುವ ಮಾತುಗಳು ಹರಿದಾಡಿದವು.

ಕೈಕೊಟ್ಟ ಇವಿಎಂ: ಕ್ಷೇತ್ರದ ಚಾಮುಂಡೇಶ್ವರಿ ನಗರದ ಮತಗಟ್ಟೆಯಲ್ಲಿ ಬ್ಯಾಲೆಟ್‌ ಯುನಿಟ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವೃದ್ಧರು ಹಾಗೂ ಮಹಿಳೆಯರು ಬಿಸಿಲಿನಲ್ಲಿ ನಿಲ್ಲುವಂತಾಯಿತು. ಮತಯಂತ್ರ ಸರಿಪಡಿಸಿದ ನಂತರವೂ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಜನರಿಂದ ಟೀಕೆಗೆ ಗುರಿಯಾದ ಅಧಿಕಾರಿಗಳು ಯಂತ್ರಗಳನ್ನು ಸರಿಪಡಿಸಲು ಹೆಣಗಾಟ ನಡೆಸಿದರು. 

ವೃದ್ಧರೇ ಹೆಚ್ಚು: ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಅವರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ ಚಲಾಯಿಸಿದರೆ, ಯುವ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ನಿರಾಸಕ್ತಿ ತೋರಿದರು. 

ರಾಕ್‌ಲೈನ್‌ ವಿರುದ್ಧ ಪ್ರತಿಭಟನೆ: ಲಗ್ಗೆರೆ ವಾರ್ಡ್‌ನ ಮುನೇಶ್ವರ ಬಡಾವಣೆಯ ಮತಗಟ್ಟೆ ಬಳಿ ಚಿತ್ರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮತಕೇಂದ್ರದಿಂದ 100 ಮೀಟರ್‌ ದೂರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಾಕಿದ್ದ ಟೇಬಲ್‌ ಬಳಿಗೆ ಬಂದ ರಾಕ್‌ಲೈನ್‌ ವೆಂಕಟೇಶ್‌ ಮತಗಟ್ಟೆಗಳಿಗೆ ತೆರಳುತ್ತಿದ್ದವರಿಗೆ “ಶಾಸಕರಾದ ಮುನಿರತ್ನ ಅವರು ಕಳೆದ ಐದು ವರ್ಷಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಹೀಗಾಗಿ ಮುನಿರತ್ನ ಅವರಿಗೆ ಮತ ನೀಡಿ’ ಎಂದು ಮನವಿ ಮಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರು ವಾರ್ಡ್‌ಗೆ ಸಂಬಂಧವಿಲ್ಲದವರು ಮತಗಟ್ಟೆ ಬಳಿ ಬಂದಿರುವುದು ಕಾನೂನು ಬಾಹಿರ ಎಂದು ಆಕ್ಷೇಪಿಸಿದ್ದು, ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರ ನಡುವಿನ ಮಾತಿನ ಚಕಮಕಿಗೆ ಕಾರಣವಾಯಿತು. 

ಈ ವೇಳೆ ಸ್ಥಳದಲ್ಲಿದ್ದ ಲಗ್ಗೆರೆ ವಾರ್ಡ್‌ ಪಾಲಿಕೆ ಸದಸ್ಯೆ ಮಂಜುಳಾ ನಾರಾಯಣಸ್ವಾಮಿ ಹಾಗೂ ಕಾರ್ಯಕರ್ತರು ರಾಕ್‌ಲೈನ್‌ ವೆಂಕಟೇಶ್‌ ವಿರುದ್ಧ ಘೋಷಣೆ ಕೂಗಿ ಧರಣಿ ನಡೆಸಿದರು. ಕೆಲ ನಿಮಿಷಗಳ ನಂತರ ಮಧ್ಯ ಪ್ರವೇಶಿಸಿದ ಪೊಲೀಸರು ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪ್ರತಿಭಟನೆ ಕೈಬಿಡುವಂತೆ ಸೂಚಿಸಿದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ವೆಂಕಟೇಶ್‌ ಅಲ್ಲಿಂದ ಹೊರಟು ಹೋದರು. ಆನಂತರದಲ್ಲಿ ಪರಿಸ್ಥಿತಿ ತಿಳಿಯಾಯಿತು.

ಟಾಪ್ ನ್ಯೂಸ್

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.