ಜನರ ವಿಶ್ವಾಸ ಉಳಿಸಿಕೊಳ್ಳುವೆ: ಪ್ರತಾಪಗೌಡ
Team Udayavani, May 29, 2018, 2:47 PM IST
ಮಸ್ಕಿ: ಭಗವಂತ ಒಳ್ಳೆಯವರನ್ನು ಎಂದಿಗೂ ಕೈ ಬಿಡುವುದಿಲ್ಲ ಎಂಬುವುದಕ್ಕೆ ವಿಧಾನಸಭೆ ಚುನಾವಣೆ ಫಲಿತಾಂಶ ಸಾಕ್ಷಿಯಾಗಿದೆ ಎಂದು ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.
ಪಟ್ಟಣದ ಭ್ರಮರಾಂಬ ಕಲ್ಯಾಣ ಮಂಟಪಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಾನು ಅಲ್ಪ ಮತಗಳ ಅಂತರದಿಂದ ಜಯ ಸಾಧಿಸಿದ್ದರೂ, ಕಾರ್ಯಕರ್ತರು, ಜನರ ಪ್ರೀತಿ-ವಿಶ್ವಾಸದಲ್ಲಿ ಕಡಿಮೆ ಆಗಿಲ್ಲ. ಕೇತ್ರದ ಅಭಿವೃದ್ಧಿಗಾಗಿ ಹಗಲಿರುಳು ದುಡಿದಿದ್ದೇನೆ. ನನಗೆ ನನ್ನ ಕೇತ್ರ ಜನತೆಯ ಮೇಲೆ ನಂಬಿಕೆ ಇತ್ತು ಎಂದರು.
ಮತ ಎಣಿಕೆ ಸಂದರ್ಭದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಾಗ ನಾನು ಗಲಿಬಿಲಿಗೊಳ್ಳಲಿಲ್ಲ. ಕಾರಣ ಕೇತ್ರದ ಜನತೆ ನನ್ನ ಕೈ ಬಿಡುವುದಿಲ್ಲ ಎಂಬ ವಿಶ್ವಾಸ ಇತ್ತು. ಇನ್ನು ಉಳಿದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸಿ ಜನರು ನನ್ನ ಮೇಲೆ ಇಟ್ಟ ವಿಶ್ವಾಸವನ್ನು ಉಳಿಸಿಕೊಳ್ಳುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಭಾವುಕರಾಗಿ ಹೇಳಿದರು.
ಕೆಪಿಸಿಸಿ ಸದಸ್ಯ ಅಂದಾನೆಪ್ಪ ಗುಂಡಳ್ಳಿ ಮಾತನಾಡಿ, ಸರಕಾರದಿಂದ ಕೋಟ್ಯಂತರ ರೂ. ಅನುದಾನ ತಂದು ಅಭಿವೃದ್ದಿ ಕಾರ್ಯ ಮಾಡಿದ್ದಾರೆ. ಸರ್ವ ಸಮುದಾಯದ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇನ್ನು ಮುಂದೆಯೂ ಇದೇ ರೀತಿಯಲ್ಲಿ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಿ ಎಂದು ಹಾರೈಸಿದರು.
ಕೆಪಿಸಿಸಿ ಸದಸ್ಯ ಎಚ್.ಬಿ. ಮುರಾರಿ, ಕಾಂಗ್ರೆಸ್ ಮುಖಂಡ ಮಹದೇವಪ್ಪಗೌಡ ಪೊಲೀಸ್‌ಪಾಟೀಲ, ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವಂತರಾಯ ಕುರಿ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಸ್ವಾಮಿ ಹಸಮಕಲ್ ಮಾತನಾಡಿದರು. ನಗರ ಘಟಕ ಅಧ್ಯಕ್ಷ ಮಲ್ಲಿಕಾರ್ಜುನ ಬ್ಯಾಳಿ, ಯುವ ಘಟಕ ಅಧ್ಯಕ್ಷ ವೀರೇಶ ಕಮತರ, ದೊಡ್ಡಪ್ಪ ಕಡಬೂರ, ಬಸನಗೌಡ ಪೊಲೀಸ್ ಪಾಟೀಲ, ರವಿಕುಮಾರ ಪೊಲೀಸ್ ಪಾಟೀಲ, ಮೌನೇಶ ಮುರಾರಿ ಸೇರಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.