ಕಬ್ಬಿನ ಬಾಕಿ ಬಿಲ್ ಪಾವತಿಗೆ ಒತ್ತಾಯಿಸಿ ಡಿಸಿಗೆ ಮನವಿ
Team Udayavani, May 30, 2018, 5:37 PM IST
ಬೆಳಗಾವಿ: ಕಬ್ಬು ಬೆಳೆಗಾರರ ಬಾಕಿ ಬಿಲ್ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಉಳಿದಿರುವ ಬಿಲ್ ಹಲವಾರು ವರ್ಷಗಳಿಂದ ನೀಡಿಲ್ಲ. ಕಬ್ಬು ಬೆಳೆಗಾರರು ತೀರಾ ನಿರಾಶರಾಗಿದ್ದು, ಮಕ್ಕಳ ಶಿಕ್ಷಣ, ಕುಟುಂಬ ನಿರ್ವಹಣೆಗೆ ಸಮಸ್ಯೆಯಾಗುತ್ತಿದೆ. ಮುಂಗಾರು ಹಂಗಾಮಿನ ಕೃಷಿ ಚಟುಟವಟಿಕೆಗೆ ಬೀಜ, ಗೊಬ್ಬರ ಖರೀದಿಸಲು ಹಣದ ಕೊರತೆ ಎದುರಾಗಿದೆ. ಕೇಂದ್ರ ಸರಕಾರ ನಿಗದಿ ಪಡಿಸಿದ ಎಫ್‌ಆರ್‌ಪಿಯಂತೆ ಒಂದು ಟನ್ ಕಬ್ಬಿಗೆ 3,200 ರೂ. ಪಾವತಿಸುವಂತೆ ಸಾಕಷ್ಟು ಬಾರಿ ಹೋರಾಟ ಮಾಡಿದರೂ ಯಾವುದೇ ಕಾರ್ಖಾನೆ ಇನ್ನೂ ಬಾಕಿ ಪಾವತಿಸಿಲ್ಲ. ಕೂಡಲೇ ಬಿಲ್ ಪಾವತಿಸುವಂತೆ ಸಕ್ಕರೆ ಕಾರ್ಖಾನೆಗಳ ವಿರುದ್ಧ
ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯ ಅಧ್ಯಕ್ಷ ಲಿಂಗರಾಜ ಪಾಟೀಲ, ಉಪಾಧ್ಯಕ್ಷ ಮಹಾದೇವ ದಾನಣ್ಣನವರ, ಜಿಲ್ಲಾ ಅಧ್ಯಕ್ಷ ಗುರುಗೌಡ ಪಾಟೀಲ, ನಾರಾಯಣ ಪಾಟೀಲ, ಮಹಾದೇವ ರಾಠೊಡ, ಶಿವಾನಂದ ಬಳಗಾನೂರ, ರಾಮಲಿಂಗ ಕಾಡಪ್ಪನವರ, ವಿರೂಪಾಕ್ಷ
ಶೀನನ್ನವರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.