ಅತ್ಯಾಚಾರಿಗೆ 10 ವರ್ಷ ಜೈಲು
Team Udayavani, May 31, 2018, 12:03 PM IST
ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಮಾಗಡಿ ತಾಲೂಕಿನ ಅಂಜಿನಪ್ಪ (58) ಎಂಬಾತನಿಗೆ ಹೈಕೋರ್ಟ್ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಆರೋಪಿ ಆಂಜಿನಪ್ಪನಿಗೆ ಕೇವಲ 2 ವರ್ಷ 4 ತಿಂಗಳು ಶಿಕ್ಷೆ ವಿಧಿಸಿದ್ದ ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕುದೂರು ಠಾಣೆ ಪೊಲೀಸರು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಹಾಗೂ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರಿದ್ದ ವಿಭಾಗೀಯ ಪೀಠ, ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿತು. ಅಲ್ಲದೆ, 10 ಸಾವಿರ ರೂ. ದಂಡವನ್ನೂ ವಿಧಿಸಿದ ನ್ಯಾಯಪೀಠ, ಈ ಮೊತ್ತದಲ್ಲಿ ಸಂತ್ರಸ್ತ ಬಾಲಕಿಗೆ ಪರಿಹಾರವಾಗಿ 9 ಸಾವಿರ ರೂ. ನೀಡಬೇಕು. ಒಂದು ವೇಳೆ ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳು ಜೈಲು ಶಿಕ್ಷೆ ಅನ್ವಯವಾಗುತ್ತದೆ ಎಂದು ಹೇಳಿತು.
ಬಾಲಕಿ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂಬುದರ ಕುರಿತ ವೈದ್ಯಕೀಯ ವರದಿ, ಸಂತ್ರಸ್ತ ಬಾಲಕಿ ಹಾಗೂ ಆಕೆಯ ತಾಯಿಯ ಹೇಳಿಕೆ ಸೇರಿ ಇನ್ನಿತರೆ ಸಾಕ್ಷ್ಯಾಧಾರಗಳನ್ನು ಪ್ರಾಸಿಕ್ಯೂಷನ್ ಪರ ವಕೀಲರು
ನ್ಯಾಯಾಲಯಕ್ಕೆ ಒದಗಿಸಿದ್ದು, ಇದನ್ನು ಪರಿಗಣಿಸಿದ ನ್ಯಾಯಪೀಠ, ಅಧೀನ ನ್ಯಾಯಾಲಯದ ಆದೇಶ ರದ್ದುಪಡಿಸಿ
ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿಜಯ್ ಕುಮಾರ್ ಮಜಗೆ ವಾದಿಸಿದ್ದರು.
ಪ್ರಕರಣ ಏನು?: ಕುದೂರು ಕಾಲೋನಿಯ ನಿವಾಸಿ ಅಂಜಿನಪ್ಪ ಮನೆಯ ಸಮೀಪದ 6 ವರ್ಷದ ಬಾಲಕಿಗೆ ಚಾಕೋಲೆಟ್ ನೀಡುವ ಆಮಿಷ ತೋರಿ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಸಂತ್ರಸ್ತ ಬಾಲಕಿಯ ತಾಯಿ ನೀಡಿದ್ದ ದೂರಿನ ಅನ್ವಯ ಆರೋಪಿಯನ್ನು ಬಂಧಿಸಿದ್ದ ಕುದೂರು ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ರಾಮನಗರ ತ್ವರಿತ ನ್ಯಾಯಾಲಯ, ಅತ್ಯಾಚಾರ ಯತ್ನ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 2 ವರ್ಷ 4 ತಿಂಗಳು ಜೈಲು ಶಿಕ್ಷೆ ವಿಧಿಸಿ ಅಕ್ಟೋಬರ್ 10, 2012ರಲ್ಲಿ ಆದೇಶಿಸಿತ್ತು. ಅಧೀನ ನ್ಯಾಯಾಲಯದಲ್ಲಿ ಅತ್ಯಾಚಾರ ಆರೋಪ ಸಾಬೀತಾಗಿರಲಿಲ್ಲ. ಹೀಗಾಗಿ ಈ ಆದೇಶ ಪ್ರಶ್ನಿಸಿ ಪ್ರಾಸಿಕ್ಯೂಶನ್ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Mother: ಅಮ್ಮನ ಜೀವನವೇ ಆದರ್ಶ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.