ಪ್ಲಾಸ್ಟಿಕ್ ಮುಕ್ತ ಜಿಲ್ಲೆಗೆ ಕಾರ್ಯಸೂಚಿ ಸಿದ್ಧ: ಬೊಮ್ಮನಹಳ್ಳಿ
Team Udayavani, May 31, 2018, 5:02 PM IST
ಧಾರವಾಡ: ಜಿಲ್ಲಾದ್ಯಂತ ವಿವಿಧ ಅಧಿಕಾರಿ ನೇತೃತ್ವದಲ್ಲಿ ಪ್ಲಾಸ್ಟಿಕ್ ವಿರುದ್ಧ ಕಾರ್ಯಾಚರಣೆ ಹಾಗೂ ವಿವಿಧ ಕಾರ್ಯ ಚಟುವಟಿಕೆ ಮೂಲಕ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಕ್ರಿಯಾಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿ ಕಾರಿ ಡಾ| ಎಸ್ .ಬಿ. ಬೊಮ್ಮನಹಳ್ಳಿ ಹೇಳಿದರು.
ನಗರದ ಡಿಸಿ ಕಚೇರಿಯಲ್ಲಿ ಜೂ. 5ರಂದು ವಿಶ್ವ ಪರಿಸರ ದಿನ ಹಾಗೂ ವನ ಮಹೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಿರುವ ಕಾರ್ಯಕ್ರಮಗಳ ಕ್ರಿಯಾ ಯೋಜನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೂ. 5ರಂದು ಬಿಟ್ ಪ್ಲಾಸ್ಟಿಕ್ ಪೊಲ್ಯೂಷನ್ ಧ್ಯೇಯವಾಕ್ಯದಡಿ ಭಾರತದ ಆತಿಥ್ಯದಲ್ಲಿ ಈ ವರ್ಷದ ವಿಶ್ವ ಪರಿಸರ ದಿನಾಚರಣೆ ನಡೆಯಲಿದೆ. ಹೀಗಾಗಿ ಜನರಲ್ಲಿ ಜಾಗೃತಿಗಾಗಿ ಅಗತ್ಯ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.
ಜೂ. 5ರಿಂದ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಿ, ಜೂನ್ ಮಾಸಾಂತ್ಯದವರೆಗೆ ಪ್ಲಾಸ್ಟಿಕ್ ರೇಡ್ ಡ್ರೈವ್ ಆಯೋಜಿಸಲಾಗುತ್ತದೆ. ಈ ಮೂಲಕ ನಿಷೇಧಿತ ಪ್ಲಾಸ್ಟಿಕ್ ಬಳಸುವ ಅಂಗಡಿ, ಹೋಟೆಲ್ ಹಾಗೂ ಇತರ ವ್ಯಾಪಾರ ವಹಿವಾಟು ಕೇಂದ್ರಗಳ ಮೇಲೆ ದಾಳಿ ಮಾಡಿ, ಕಾನೂನು ಅನುಸಾರ ದಂಡ ಹಾಗೂ ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದರು.
ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಬೊಮ್ಮನಹಳ್ಳಿ, ಅವಳಿ ನಗರದ ಕಲ್ಯಾಣ ಮಂಟಪ, ಹೋಟೆಲ್, ಲಾಡ್ಜ್ ಮತ್ತು ಸಮುದಾಯ ಭವನಗಳ ಮುಖ್ಯಸ್ಥರ ಸಭೆ ಜರುಗಿಸಿ, ಆಯಾ ಕಟ್ಟಡ, ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲು ಸೂಕ್ತ ಕ್ರಮ ಜರುಗಿಸಬೇಕು. ‘ಪ್ಲಾಸ್ಟಿಕ್ ಮುಕ್ತ ಪ್ರದೇಶ’ ಎಂಬ ನಾಮಫಲಕ ಅಳವಡಿಸಲು ಕ್ರಮ ತೆಗೆದುಕೊಳ್ಳಬೇಕು ಎಂದರು.
ಜಿಲ್ಲಾ ವ್ಯಾಪ್ತಿಯ ಎಲ್ಲ ವಿಶ್ವವಿದ್ಯಾಲಯ, ಅವುಗಳ ಅಧಿಧೀನ ಕಾಲೇಜುಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪಿಯು ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆ, ಸರಕಾರಿ ಇಲಾಖೆಗಳ ಕಚೇರಿ ಮುಖ್ಯಸ್ಥರು ಸುತ್ತೋಲೆ ಹೊರಡಿಸುವ ಮೂಲಕ ತಮ್ಮ ವ್ಯಾಪ್ತಿಯ ಎಲ್ಲ ಶಾಲಾ ಕಾಲೇಜು, ಕಚೇರಿಗಳು ಪ್ಲಾಸ್ಟಿಕ್ ಮುಕ್ತ ಕ್ಯಾಂಪಸ್ ಆಗಿ ರೂಪುಗೊಳ್ಳಲು ಸೂಕ್ತ ಕ್ರಮ ಜರುಗಿಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮಹೇಶಕುಮಾರ ಮಾತನಾಡಿ, ಜೂ. 5ರಂದು ಆಚರಿಸಲಿರುವ ವಿಶ್ವ ಪರಿಸರ ದಿನ ಹಾಗೂ ವನಮಹೋತ್ಸವ ಪ್ರಯುಕ್ತ ಒಂದು ವಾರ ಕಾಲ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಕಾಲ್ನಡಿಗೆ ಜಾಥಾ, ಸ್ತಬ್ಧಚಿತ್ರ ಸಂಚಾರ, ಸಂಚಾರಿ ಸಸಿ ಸಂತೆ, ಬೀದಿ ನಾಟಕ, ಪ್ಲಾಸ್ಟಿಕ್ ಮುಕ್ತ ಪ್ರದೇಶ, ಸ್ವತ್ಛ ಅರಣ್ಯ, ಬೀಜ ಬಿತ್ತನೆ, ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಡುವ ಕಾರ್ಯ ಮತ್ತು ಜೂ. 8 ರಂದು ನಗರದ ಆಲೂರು ವೆಂಕಟರಾವ್ ಭವನದಲ್ಲಿ ಪ್ರಮುಖ ಸಮಾರಂಭ ಆಯೋಜಿಸಲಾಗುವುದು ಎಂದು ತಿಳಿಸಿದರು.
ಪಾಲಿಕೆ ಪರಿಸರ ಅಭಿಯಂತರಾದ ನಯನಾ ಮಾತನಾಡಿ, ಪಾಲಿಕೆಯಿಂದ ಪ್ಲಾಸ್ಟಿಕ್ ಬಳಕೆ ಮೇಲೆ ನಿಯಂತ್ರಣ ತರಲು ಮತ್ತು ಬಳಸಿದ ಪ್ಲಾಸ್ಟಿಕ್‌ನ್ನು ಪರಿಸರ ಹಾನಿಯಾಗದಂತೆ ತಡೆಯಲು ವಿವಿಧ ಕ್ರಮ ಕೈಗೊಳ್ಳಲಾಗಿದೆ. ವಿಶ್ವ ಪರಿಸರ ದಿನ ಅಂಗವಾಗಿ ಸ್ತ್ರೀ ಶಕ್ತಿ ಸಂಘ ಹಾಗೂ ಮಹಿಳಾ ಒಕ್ಕೂಟದ ಸದಸ್ಯರಿಗೆ ತರಬೇತಿ ಆಯೋಜಿಸಲಾಗುವುದು. ಉಣಕಲ್ ಮತ್ತು ಸಾಧನಕೇರಿ ಕೆರೆಗಳ ದಡದಲ್ಲಿ ಸ್ವಚ್ಚತೆ ಕುರಿತು ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಜಿಪಂ ಸಿಇಒ ಸ್ನೇಹಲ್ ಆರ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್. ಎಸ್. ಚಿಣ್ಣನ್ನವರ್, ಅಪರ ಜಿಲ್ಲಾ ಧಿಕಾರಿ ರಮೇಶ ಕಳಸದ, ಉಪವಿಭಾಗಾಧಿ ಕಾರಿ ಜಯಮಾಧವ ಪಿ, ತಹಶೀಲ್ದಾರ್ ಪ್ರಕಾಶ ಕುದರಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ವಿಜಯಕುಮಾರ ಟಿ.ಕೆ., ಉಪಪರಿಸರ ಅಧಿಕಾರಿ ಶೋಭಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ. ರುದ್ರೇಶಪ್ಪ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಆರ್.ಎಂ.ದೊಡ್ಡಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ರಂಗಣ್ಣವರ್, ಪರಿಸರವಾದಿ ಶಂಕರ ಕುಂಬಿ, ಪ್ರಕಾಶ ಭಟ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.