ಅಕ್ರಮ ಮರಳು ತಡೆಗೆ ಜಾಗೃತದಳ


Team Udayavani, May 31, 2018, 5:34 PM IST

31-may-23.jpg

ಬಾಗಲಕೋಟೆ: ಜಿಲ್ಲಾದ್ಯಂತ ಅಕ್ರಮ ಮರಳು ಸಾಗಾಣಿಕೆ ತಡೆಯುವ ನಿಟ್ಟಿನಲ್ಲಿ ಪ್ರತಿ ತಾಲೂಕಿಗೆ ಒಂದರಂತೆ ಜಾಗೃತದಳ ತಂಡ ರಚಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಜಿ. ಶಾಂತಾರಾಮ ತಿಳಿಸಿದರು.

ಜಿಲ್ಲಾಧಿ ಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಜಿಲ್ಲಾ ಟಾಸ್ಕ್ಪೋರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಜನ ಅ ಧಿಕಾರಿಗಳು ಹಾಗೂ ಇಬ್ಬರು ಹೋಮಗಾರ್ಡ್ಸ್ಗಳನ್ನೊಳಗೊಂಡ ಜಾಗೃತದಳ ತಂಡವನ್ನು ನೇಮಕ ಮಾಡಲಾಗಿದ್ದು, ಈ ತಂಡಗಳು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿವೆ. ಜಾಗೃತ ತಂಡದವರು ನಿರ್ವಹಿಸುವ ಕಾರ್ಯದ ಬಗ್ಗೆ ನಿಗಾ ವಹಿಸಲು ಅವರ ವಾಹನಗಳಿಗೆ ಜಿಪಿಎಸ್‌ ಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.

ಅಲ್ಲದೇ ಅಕ್ರಮ ಮರಳು ಸಾಗಾಣಿಕೆಯ ಬಗ್ಗೆ ದೂರು ಸಲ್ಲಿಸಲು ದಿನ 24 ಗಂಟೆಗಳ ಕಾಲ ದೂರು ನಿರ್ವಹಣಾ ಕೇಂದ್ರ ತೆರೆಯುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಲಿಂಗರಾಜ ಅವರಿಗೆ ಸೂಚಿಸಿದರು. ಈ ದೂರು ನಿರ್ವಹಣಾ ಕೇಂದ್ರಕ್ಕೆ ಬರುವ ದೂರುಗಳನ್ನು ದಾಖಲಿಸಿ ಕ್ರಮ ಕೈಗೊಳ್ಳುವ ಕೆಲಸವಾಗಬೇಕು. ದೂರು ನಿರ್ವಹಣಾ ಕೇಂದ್ರದಲ್ಲಿ ಉಚಿತ ದೂರವಾಣಿ ಸೇವೆ ಒದಗಿಸುವುದರ ಜೊತೆಗೆ ಪ್ರತಿಯೊಂದು ಕರೆಗಳ ಧ್ವನಿ ಸಂಗ್ರಹಿಸುವ ಕೆಲಸವಾಗಬೇಕು. ಜೊತೆಗೆ ಕಂಪ್ಯೂಟರ್‌, ಫ್ಯಾಕ್ಸ್‌ ಹಾಗೂ ಸಿಬ್ಬಂದಿಗಳ ನೇಮಿಸಬೇಕು. ಈ ಕೇಂದ್ರದಲ್ಲಿ ಎರಡು ಸಿಪ್ಟ್ಗಳಲ್ಲಿ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕು. ಈ ಕಾರ್ಯ ಒಂದು ವಾರದಲ್ಲಿ ಪ್ರಾರಂಭಿಸುವಂತೆ ಸೂಚಿಸಲಾಯಿತು. ಅಕ್ರಮ ಮರಳು ಸಾಗಾಣಿಕೆ
ಮಾಡುವವರನ್ನು ಪತ್ತೆ ಹಚ್ಚಿ ಮರಳು ಸಾಗಿಸುತ್ತಿರುವ ವಿರುದ್ಧ ಕೇಸ್‌ ಕೂಡ ದಾಖಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

 ವಶಪಡಿಸಿಕೊಂಡ ಮರಳನ್ನು ಲೋಕೋಪಯೋಗಿ ಇಲಾಖೆ ವಶಕ್ಕೆ ನೀಡಬೇಕು. ಲೋಕೋಪಯೋಗಿ ಇಲಾಖೆಯವರು ಜಪ್ತಿ ಮಾಡಿದ ಮರಳನ್ನು ಒಂದು ಕಡೆ ಸಂಗ್ರಹಿಸಿ ಮರಳಿನ ಗುಣಮಟ್ಟ ಪರೀಕ್ಷಿಸಿ ಎಸ್‌.ಆರ್‌ ದರದಲ್ಲಿ ಮಾರಾಟ ಮಾಡಬೇಕು. ಈಗಾಗಲೇ ಸಂಗ್ರಹಿಸಿದ್ದ ಮರಳಿನ ಮಾಹಿತಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಿಗೆ ನೀಡಿ ಎಸ್‌.ಆರ್‌ ದರದಲ್ಲಿ ಮಾರಾಟವಾಗದಿದ್ದಲ್ಲಿ ಸರಕಾರಕ್ಕೆ ವರದಿ ನೀಡಲು ಸಭೆಯಲ್ಲಿ ತಿಳಿಸಲಾಯಿತು. 

ಅಲ್ಲದೆ ಹಿಂದಿನ ಸಭೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಅನುಪಾಲನಾ ವರದಿ ನೀಡದ ಅಧಿ ಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳ ಅನುಮತಿ ಪಡೆಯದೇ ರಜಾ ಮೇಲೆ ತೆರಳಿದ ಅಧಿ ಕಾರಿಗಳಿಗೂ ಶೋಕಾಸ್‌ ನೋಟಿಸ್‌ ನೀಡುವಂತೆ ಸಭೆಯಲ್ಲಿ ಸೂಚಿಸಲಾಯಿತು. ಏಕ ಗವಾಕ್ಷಿ ಪದ್ಧತಿ ಅಡಿಯಲ್ಲಿ ಕಲ್ಲು ಗಣಿ ಗುತ್ತಿಗೆ ಮಂಜೂರಾತಿಗಾಗಿ ಬಂದ 10 ಅರ್ಜಿಗಳ ಪರಿಶೀಲಿಸಲಾಗಿ ಅರಣ್ಯ ಇಲಾಖೆಯ ಎನ್‌ಒಸಿ ಇಲ್ಲದ ಕಾರಣ ಅರ್ಜಿಗಳನ್ನು ತಿರಸ್ಕರಿಸಲಾಯಿತು. ಅರಣ್ಯ ಇಲಾಖೆಯಿಂದ ಎನ್‌ಒಸಿ ಬಂದ ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದೆಂದು ಸಭೆಯಲ್ಲಿ ತಿಳಿಸಲಾಯಿತು.

ಕಲ್ಲು ಪುಡಿ ಮಾಡುವ ಘಟಕಗಳು ಕಡ್ಡಾಯವಾಗಿ ಸಿ.ಎಫ್‌.ಒ ನವೀಕರಣ ಮಾಡಿಕೊಂಡಿರುವ ಬಗ್ಗೆ ಹಾಗೂ ಸುರಕ್ಷಿತ ನಿಯಮಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ ಚರ್ಚಿಸಲಾಯಿತು. ಅಲ್ಲದೇ ಹೊಸದಾಗಿ ಮತ್ತು ನವೀಕರಣಕ್ಕೆ ಕಲ್ಲುಪುಡಿ ಮಾಡುವ ಘಟಕಗಳ ಸ್ಥಾಪನೆಗೆ ಬಂದ ಅರ್ಜಿಗಳನ್ನು ಪರಿಶೀಲನೆ ನಡೆಸಲಾಯಿತು. ಜಿಲ್ಲೆಯಲ್ಲಿ ಒಟ್ಟು 45 ಕಲ್ಲು ಪುಡಿ ಮಾಡುವ ಘಟಕಗಳಿದ್ದು, 39 ಘಟಕಗಳು ಚಾಲ್ತಿಯಲ್ಲಿದ್ದು, ಅದರಲ್ಲಿ 16 ಘಟಕಗಳನ್ನು ಮುಚ್ಚಲು ಆದೇಶಿಸಿದ್ದು, ಕೂಡಲೇ ಕ್ರಮಕೈಗೊಳ್ಳಬೇಕು. ತಹಶೀಲ್ದಾರರ ಜೊತೆ ಜಂಟಿಯಾಗಿ ಘಟಕಗಳಿಗೆ ಭೇಟಿ ಮಾಡಿ ತಕ್ಷಣ ಬಂದ ಮಾಡಲು ಕ್ರಮಕೈಗೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು. 

ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಸಿ.ವಂಶಿಕೃಷ್ಣ, ಜಿಪಂ ಸಿಇಒ ವಿಕಾಸ ಸುರಳಕರ, ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ, ಉಪವಿಭಾಗಾಧಿಕಾರಿಗಳಾದ ಎಚ್‌.ಜಯಾ, ಎಂ.ಮಾರುತಿ ಸೇರಿದಂತೆ ಸಮಿತಿಯ ಸದಸ್ಯರಾದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ತಹಶೀಲ್ದಾರರು ಇದ್ದರು.

ಈಗಾಗಲೇ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಸಾಗಾಣಿಕೆ ತಡೆಗಟ್ಟುವಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಚರ್ಚಿಸಿದಾಗ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಬಂದ ದೂರುಗಳ ಬಗ್ಗೆ ಕ್ರಮಕೈಗೊಳ್ಳದಿರುವುದು ಹಾಗೂ ದೂರುಗಳ ದಾಖಲಾತಿ ಬಗ್ಗೆ ಸಹಿಯಲ್ಲಿ ನಮೂದಿಸದೇ ಇರುವದನ್ನು ಕಂಡ ಜಿಲ್ಲಾ ಧಿಕಾರಿ ಕೆ.ಜಿ. ಶಾಂತಾರಾಮ್‌ ಅವರಿಗೆ ಶೋಕಾಸ್‌ ನೋಟಿಸ್‌ ನೀಡಲು ಸೂಚಿಸಿದರು. 

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.