ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ
Team Udayavani, Jun 1, 2018, 11:06 AM IST
ಚಿತ್ತಾಪುರ: ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು
ಮುಖ್ಯಶಿಕ್ಷಕಿ ಗಂಗಮ್ಮ ಆರ್. ನಾಲವಾರ ಹೇಳಿದರು. ತಾಲೂಕಿನ ತೆಂಗಳಿ ಗ್ರಾಮದಲ್ಲಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಾಲಕರು ಖಾಸಗಿ ಶಾಲೆಗಳ ಅಬ್ಬರದ ಪ್ರಚಾರಕ್ಕೆ ಮಾರು ಹೋಗಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ದಾಖಲಿಸುತ್ತಿದ್ದಾರೆ. ಸರ್ಕಾರ ಗ್ರಾಮೀಣ ಮಕ್ಕಳಿಗಾಗಿ ಉಚಿತ ಪಠ್ಯ ಪುಸ್ತಕ, ಉಚಿತ ಬಟ್ಟೆ, ಉಚಿತ ಬೂಟ್ ಮತ್ತು ಸಾಕ್ಸ್, ಮಧ್ಯಾಹ್ನದ ಬಿಸಿಯೂಟ ನೀಡುತ್ತಿದೆ. ಅಲ್ಲದೇ ಉತ್ತಮ ಶಿಕ್ಷಕರನ್ನು ನೇಮಿಸಿದೆ. ಇದೆಲ್ಲದರ ಉಪಯೋಗ ಪಡೆಯುವುದನ್ನು ಬಿಟ್ಟು ಖಾಸಾಗಿ ಶಾಲೆಗೆ ಮಕ್ಕಳನ್ನು ದಾಖಲಿಸಿದರೆ ಹೇಗೆ ಎಂದು ಪ್ರಶ್ನಿಸಿದರು.
ಶಿಕ್ಷಕ ಮಲ್ಲಣ ಹರಸೂರ ಮಾತನಾಡಿ, ಮಕ್ಕಳ ಬೌದ್ಧಿಕ ವಿಕಾಸಕ್ಕೆ ಸರ್ಕಾರಿ ಶಾಲೆಗಳು ಅಗತ್ಯ. ಸರ್ಕಾರಿ ಯೋಜನೆಗಳ ಜೊತೆಗೆ ನುರಿತ ಶಿಕ್ಷಕರಿಂದ ಉತ್ತಮ ಶಿಕ್ಷಣ ನೀಡುತ್ತೇವೆ ಎಂದರು. ಶಾಲೆಯಿಂದ ಪ್ರಾರಂಭವಾದ
ಜಾಥಾ ಗ್ರಾಮದ ಪ್ರಮುಖ ಬೀದಿಗಳ ಮೂಲಕ ಸಂಚರಿಸಿತು. ಸರಸ್ವತಿ ಭಾವಚಿತ್ರಕ್ಕೆ ಪೂಜೆ ಮಾಡುವ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಮ್ಮ ಡಾವಳಗಿ ಜಾಥಾಕ್ಕೆ ಚಾಲನೆ ನೀಡಿದರು.
ಜಾಥಾದಲ್ಲಿ ಎತ್ತಿನ ಗಾಡಿಗೆ ಸರ್ಕಾರಿ ಯೋಜನೆಗಳ ಪ್ಲೆಕ್ಸ್‌ಗಳನ್ನು ಕಟ್ಟಿ, ಡೊಳ್ಳು, ಡ್ರಂ, ಲೇಜೀಂಗಳ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪಾಲಕರಲ್ಲಿ ಜಾಗೃತಿ ಮೂಡಿಸಲಾಯಿತು. ಜಾಥಾದಲ್ಲಿ ಸಿಆರ್‌ಸಿ ಕರಣಪ್ಪ ಕಟ್ಟಿಮನಿ, ಶಿಕ್ಷಕರಾದ ಮಲ್ಲಣ್ಣ ಹರಸೂರ್, ಹಣಮಂತ ಗೀರಿಗೌಡರ್, ಮಲ್ಲಿಕಾರ್ಜುನ ಭಜಂತ್ರಿ, ಗಿರಿಜಾ ಹಾಗೂ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.