ಕುಡಿವ ನೀರಿನ ಬವಣೆಗೆ ಬೇಕಿದೆ ಶಾಶ್ವತ ಪರಿಹಾರ


Team Udayavani, Jun 1, 2018, 11:12 AM IST

gul-3.jpg

ಅಫಜಲಪುರ: ತಾಲೂಕಿನ ಜನರಿಗೆ ಬೇಸಿಗೆ ಬಂತೆಂದರೆ ಆತಂಕ ಶುರುವಾಗುತ್ತದೆ. ಜನ-ಜಾನುವಾರುಗಳು ನೀರಿಲ್ಲದೆ ಪರಿತಪಿಸುವಂತೆ ಆಗುತ್ತಿದೆ. ಈ ಸಮಸ್ಯೆ ಇಂದು-ನಿನ್ನೆಯದಲ್ಲ. ಪ್ರತಿ ವರ್ಷವೂ ಇದ್ದದ್ದೆ. ಹೀಗಾಗಿ ಶಾಶ್ವತವಾಗಿ ಕುಡಿಯುವ ನೀರಿನ ಬವಣೆ ತಪ್ಪಿಸುವರು ಯಾರು ಇಲ್ಲವೇ ಎಂದು ತಾಲೂಕಿನ ಜನ ಪ್ರಶ್ನಿಸುತ್ತಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರ ಅನೇಕ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇವುಗಳೆಲ್ಲ ಶಾಶ್ವತ ಪರಿಹಾರವಲ್ಲ. ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವುದರಿಂದ ಸಮಸ್ಯೆ ಪರಿಹಾರ ಆಗುವುದಿಲ್ಲ. ಬೇಸಿಗೆಯಲ್ಲಿ ಮಕ್ಕಳು, ಮಹಿಳೆಯರು, ಬಾಣಂತಿಯರು, ವೃದ್ಧರು ಸೇರಿದಂತೆ ಎಲ್ಲರೂ ಕುಡಿಯುವ ನೀರಿಗಾಗಿ ಕಿ.ಮೀ. ಗಟ್ಟಲೇ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 

ಹಳ್ಳಿಗಳಲ್ಲಿ ಆಹಾಕಾರ: ತಾಲೂಕಿನ ಚಿಂಚೋಳಿ, ರೇವೂರ (ಕೆ), ಬಳೂರ್ಗಿ, ಬಳೂರ್ಗಿ ತಾಂಡಾ, ಕೋಗನೂರ, ಅಂಕಲಗಿ, ಚಿಣಮಗೇರಾ, ಚವಡಾಪುರ, ಮಾಶಾಳ, ಹೊಸೂರ, ಭೋಗನಳ್ಳಿ, ಸಿದ್ದನನೂರ, ಅತನೂರ, ಗೊಬ್ಬೂರ (ಬಿ), ಅವರಾದ, ಇಗಳಗಿ, ಹಿಂಚಗೇರಾ, ಆನೂರ, ತೆಲ್ಲೂರ, ರೇವೂರ (ಬಿ), ಅರ್ಜುಣಗಿ, ಹಳಿಯಾಳ, ಜೇವರ್ಗಿ (ಬಿ), ಕರ್ಜಗಿ, ಉಡಚಾಣ ಹಟ್ಟಿ, ಶಿವೂರ, ಹೊಸೂರ, ಬಿಂಗೋಳಿ ತಾಂಡಾ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಭೀಕರ ಸಮಸ್ಯೆ ಕಾಡುತ್ತಿದೆ. 

ಅಫಜಲಪುರ ನಗರಕ್ಕೂ ಈ ಸಮಸ್ಯೆ ತಪ್ಪಿಲ್ಲ. ನಗರದ ಹತ್ತಿರದಲ್ಲೇ ಭೀಮಾ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಿಸಲಾಗಿದೆ. ಇಲ್ಲಿ ನೂರಾರು ಕಿ.ಮೀ ನೀರು ನಿಲ್ಲಿಸಲಾಗಿದೆ. ಆದರೂ ಪಟ್ಟಣಕ್ಕೆ ಕುಡಿಯುವ ನೀರು ಸರಿಯಾಗಿ ಸಿಗುತ್ತಿಲ್ಲ. ನದಿಯಲ್ಲಿ ನೀರಿದ್ದರೂ ಶುದ್ಧೀಕರಿಸದೇ ಸರಬರಾಜು ಮಾಡಲಾಗುತ್ತಿದೆ.

ಇದರಿಂದ ಪಟ್ಟಣದ ಸಾರ್ವಜನಿಕರು ಕುಡಿಯುವ ನೀರಿಗಾಗಿ ಪರಿತಪಿಸುವಂತೆ ಆಗಿದೆ. ಒಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಅಂತಜರ್ಲ ಮಟ್ಟದ ಕುಸಿತ ಹಾಗೂ ನೀರಿನ ಮೂಲಗಳ ಕೊರತೆ ಕಾರಣದಿಂದ ನೀರು ಲಭ್ಯವಾಗುತ್ತಿಲ್ಲ. ಅದರಂತೆ ಪಟ್ಟಣಕ್ಕೆ ಸರಿಯಾಗಿ ನದಿ ನೀರು ಪೂರೈಕೆಯಾಗುತ್ತಿಲ್ಲ. ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಭೀಕರ ಸಮಸ್ಯೆ ಎದುರಿಸಬೇ ಕಾದ ಸಂದರ್ಭ ಬಂದರೂ ಬರಬಹುದು.

ಬಹುಗ್ರಾಮ ಕುಡಿಯುವ ನೀರು ಯೋಜನೆ: ತಾಲೂಕಿನ ಮಾಶಾಳ, ಉಡಚಾಣ, ದೇಸಾಯಿ ಕಲ್ಲೂರ ಸೇರಿದಂತೆ ಅನೇಕ ಕಡೆಗಳಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಅಡಿಯಲ್ಲಿ ಕೋಟ್ಯಂತರ ರೂ. ಖರ್ಚು ಮಾಡಿ ನೀರಿನ ವ್ಯವಸ್ಥೆ ಮಾಡಬೇಕಾಗಿತ್ತು. ಆದರೆ ಯೋಜನೆ ವಿಫಲವಾಗಿದೆ. ಬಹುಗ್ರಾಮ ಕುಡಿಯುವ ನೀರು ಯೋಜನೆಗಳು ಕೆಲವು ಕಡೆ ಪೂರ್ಣಗೊಂಡಿವೆ. ಕೆಲವು ಕಡೆ ಪೂರ್ಣಗೊಂಡಿಲ್ಲ. ಹನಿ ನೀರು ಸಹ ಈ ಯೋಜನೆಯಿಂದ ಜನರಿಗೆ ಲಭ್ಯವಾಗಿಲ್ಲ. ತಪ್ಪದ ಅಲೆದಾಟ: ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಮಹಿಳೆಯರು, ಬಾಣಂತಿಯರು, ವಿದ್ಯಾರ್ಥಿಗಳು, ವೃದ್ಧರು ಎನ್ನದೆ ಕೊಡಗಳನ್ನು ಹಿಡಿದುಕೊಂಡು ದಿನವಿಡಿ ಖಾಸಗಿಯವರ ಹೊಲ ಗದ್ದೆಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಸದ್ಯ 150 ಬೋರವೇಲ್‌ಗ‌ಳ ಬೇಡಿಕೆ ಬಂದಿದೆ. ಆದಷ್ಟು ಬೇಗ ಬೋರವೆಲ್‌ ಕೊರೆಸಿ ಗ್ರಾಮಸ್ಥರಿಗೆ ನೀರು ಒದಗಿಸಲಾಗುವುದು.
ಎಂ.ವೈ. ಪಾಟೀಲ, ಶಾಸಕರು

 ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

dw

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.