ಕಡೇಮನುಗನಹಳ್ಳಿ ವಿಶೇಷ ದಾಖಲಾತಿ ಆಂದೋಲನ
Team Udayavani, Jun 1, 2018, 2:14 PM IST
ಹುಣಸೂರು: ತಾಲೂಕಿನ ಕಡೇಮನುಗನಹಳ್ಳಿ ಗ್ರಾಪಂ ಬಿ.ಆರ್.ಕಾವಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ದಾಖಲಾತಿ ಆಂದೋಲನದ ಶಾಲೆ ಕಡೆ ನನ್ನ ನಡೆ ಎಂಬ ಜಾಗೃತಿ ಜಾಥಾ ಮೂಲಕ ಗ್ರಾಮಸ್ಥರ ಗಮನ ಸೆಳೆದರು.
ಜಾಥಕ್ಕೆ ಚಾಲನೆ ನೀಡಿದ ಶಾಲೆಯ ಮುಖ್ಯ ಶಿಕ್ಷಕ ಆರ್.ಪ್ರವೀಣ್‌ಕುಮಾರ್ ಮಾತನಾಡಿ, ರಾಜ್ಯ ಸರಕಾರ ರಾಜ್ಯದಲ್ಲಿ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳನ್ನು ವಿಶೇಷ ದಾಖಲಾತಿ ಆಂದೋಲನದ “ಶಾಲೆ ಕಡೆ ನನ್ನ ನಡೆ’ ಕಾರ್ಯಕ್ರಮದಡಿ ಜಾಗೃತಿ ಮೂಡಿಸಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಮನವೊಲಿಸಿ ಮತ್ತೇ ಶಾಲೆಗೆ ಸೇರಿಸಿ ಶಿಕ್ಷಣ ನೀಡುವ ವಿಶೇಷ ಜನಾಂದೋಲನ ಕಾರ್ಯಕ್ರಮವಾಗಿದೆ. ಇದಕ್ಕೆ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಸೇರಿದಂತೆ ಎಲ್ಲರು ಕೈ ಜೋಡಿಸಬೇಕೆಂದು ಮನವಿ ಮಾಡಿದರು.
ಶಿಕ್ಷಕ ವೆಂಕಟೇಶ್ ಮಾತನಾಡಿ, ಸರ್ಕಾರ ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ನೀಡಬೇಕೆಂದು ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ವಾರದ ಆರು ದಿನಗಳಲ್ಲಿ ಹಾಲು ನೀಡುವಿಕೆ, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ, ವಿದ್ಯಾರ್ಥಿ ವೇತನ, ಅಲ್ಲದೆ ನಿತ್ಯ ಹಾಜರಾತಿ ವೇತನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಈ ಸೌಲಭ್ಯ ಹಾಗೂ ಸವಲತ್ತುಗಳನ್ನು ಎಲ್ಲಾ ಮಕ್ಕಳು ಪಡೆದುಕೊಂಡು ಉತ್ತಮ ವಿದ್ಯಾವಂತರಾಗಿ ದೇಶದ ಸತøಜೆಗಳಾಗಬೇಕಾಗಿ ತಿಳಿಸಿದರು.
ಪ್ರೌಢಶಾಲೆಯಲ್ಲಿ ಸಿಹಿ ಊಟ ಆರಂಭ: ನೇರಳಕುಪ್ಪೆ ಸರಕಾರಿ ಪ್ರೌಢಶಾಲೆಯ ಪ್ರಾರಂಬೋತ್ಸವದ ಅಂಗವಾಗಿ 8ನೇ ತರಗತಿ ವಿದ್ಯಾರ್ಥಿಗಳ ನೋಂದಣಿ ನಡೆಯಿತು. ನಂತರ ಶಾಲಾಭಿವೃದ್ಧಿ ಸಮಿತಿ ಆದ್ಯಕ್ಷ ಕೆ.ಎಸ್.ಆನಂದ್ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಗಳನ್ನು ವಿತರಿಸಿದರು. ಮಕ್ಕಳಿಗೆ ಸಿಹಿ ಊಟ ಬಡಿಸಲಾಯಿತು. ಮುಖ್ಯ ಶಿಕ್ಷಕ ಕುಮಾರಸ್ವಾಮಿ ಹಾಗೂ ಶಿಕ್ಷಕ ವೃಂದ, ಎಸ್‌ಡಿಎಂಸಿ ಸದಸ್ಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.