ಜೂನ್ ವಾಯಿದೆ ವಹಿವಾಟಿಗೆ ನಷ್ಟದ ಆರಂಭ: ಸೆನ್ಸೆಕ್ಸ್ 95 ಅಂಕ ಕುಸಿತ
Team Udayavani, Jun 1, 2018, 4:17 PM IST
ಮುಂಬಯಿ : ಜೂನ್ ತಿಂಗಳ ವಾಯಿದೆ ವಹಿವಾಟಿನ ಆರಂಭದ ದಿನವಾದ ಇಂದು ಶುಕ್ರವಾರ ಶೇರು ದರಗಳು ತಿದ್ದುಪಡಿ ಪ್ರಕ್ರಿಯೆಗೆ ಗುರಿಯಾದ ಕಾರಣ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ 95.12 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 35,227.26 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
10,700ಕ್ಕಿಂತ ಕೆಳಮಟ್ಟಕ್ಕೆ ಕುಸಿದ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ದಿನದ ವಹಿವಾಟನ್ನು 39.95 ಅಂಕಗಳ ಕುಸಿತದೊಂದಿಗೆ 10,696.20 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಮಾರ್ಚ್ ತ್ತೈಮಾಸಿಕದಲ್ಲಿ ದೇಶದ ಜಿಡಿಪಿ ಶೇ.7.7ರ ಎತ್ತರವನ್ನು ಕಂಡಿರುವ ಕಾರಣಕ್ಕೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆ ಉತ್ತಮ ಜಿಗಿತವನ್ನು ಕಂಡಿತ್ತು. ಆದರೆ ಅನಂತರದಲ್ಲಿ ತನ್ನ ಗಳಿಕೆಯನ್ನು ಬಿಟ್ಟುಕೊಟ್ಟಿತು. ನಿನ್ನೆ ಗುರುವಾರದ ವಹಿವಾಟನ್ನು ಸೆನ್ಸೆಕ್ಸ್ 416.26 ಅಂಕಗಳ ಭರ್ಜರಿ ಜಿಗಿತದೊಂದಿಗೆ ಮುಗಿಸಿತ್ತು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,825 ಕಂಪೆನಿಗಳ ಶೇರು ವಹಿವಾಟಿಗೆ ಒಳಪಟ್ಟವು; ಈ ಪೈಕಿ ಕೇವಲ 715 ಶೇರುಗಳು ಮುನ್ನಡೆ ಕಂಡವು; 1,984 ಶೇರುಗಳು ಹಿನ್ನಡೆಗೆ ಗುರಿಯಾದವು; 126 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.