ಕಣಿವೆ ಮಾರಮ್ಮನ ರಥೋತ್ಸವ
Team Udayavani, Jun 1, 2018, 5:09 PM IST
ಭದ್ರಾವತಿ: ಕಡದಕಟ್ಟೆ ಗ್ರಾಮದಲ್ಲಿರುವ ಶ್ರೀ ಕಣಿವೆ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಸೋಮವಾರ ಬೆಳಗ್ಗೆ ಧ್ವಜಾರೋಹಣ, ನಂತರ ಹೆಬ್ಬಂಡಿ ಗ್ರಾಮಸ್ಥರಿಂದ ಮದುವಣಗಿತ್ತಿ ಕಾರ್ಯದಿಂದ ಆರಂಭಗೊಂಡಿದ್ದ ಕಣಿವೆ ಮಾರಮ್ಮನ ಜಾತ್ರಾ ಮಹೋತ್ಸವ ಮಂಗಳವಾರ ಗಂಗೆಪೂಜೆ, ಹುಚ್ಚಾಯ ತೇರಿನಬಲಿ ಪೂಜೆ, ಕಳಸಾರೋಹಣ, ದುರ್ಗಾಹೋಮ, ಕಂಕಣ ಧಾರಣೆಧಾರಾ ಮಹೋತ್ಸವ ನೆರವೇರಿತು.
ಬುಧವಾರ ಬೆಳಗ್ಗೆ ಸೂರ್ಯೋದಯ ಕಾಲದಲ್ಲಿ ವರ್ಣಮಯ ಅಲಂಕಾರಗಳಿಂದ ಕಂಗೊಳಿಸುತ್ತಿದ್ದ ರಥಕ್ಕೆ ಪೂಜೆ ಸಲ್ಲಿಸಿದ ನಂತರ ಕಣಿವೆ ಮಾರಮ್ಮನ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ದೇವಾಲಯದ ಪ್ರಾಕಾರದಲ್ಲಿ ಪ್ರದಕ್ಷಿಣಾ ಉತ್ಸವ ನಡೆಸಲಾಯಿತು. ನಂತರ ರಥದಲ್ಲಿ ಉತ್ಸವಮೂರ್ತಿಯನ್ನು ಇರಿಸಲಾಯಿತು. ದೇವರನ್ನು ರಥದಲ್ಲಿ ಕೂರಿಸುತ್ತದ್ದಂತೆ ಸಾವಿರಾರು ಸಂಖ್ಯೆಯಲ್ಲಿದ್ದ ಭಕ್ತಾದಿಗಳು ದೇವಿಗೆ ಜಯಕಾರ ಹಾಕಿದರು.
ಕಡದಕಟ್ಟೆ, ಬಂಡಾರಹಳ್ಳಿ, ಭದ್ರಾವತಿ ನಗರ ಸೇರಿದಂತೆ ಸುತ್ತಮುತ್ತ ಅನೇಕ ಗ್ರಾಮಗಳಿಂದ ರಥೋತ್ಸವಕ್ಕೆ
ಸಾವಿರಾರು ಜನರು ಆಗಮಿಸಿದ್ದರು. ದೇವಿಗೆ ಆರತಿ ಮಾಡಿದ ನಂತರ ಜನರು ದೇವಿಗೆ ಜಯಕಾರ ಹಾಕುತ್ತಾ ರಥದ ಮೇಲೆ ಬಾಳೆ ಹಣ್ಣು ಕರಿ ಕಾಳುಮೆಣಸನ್ನು ಬೀರಿದರು. ನಂತರ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ಬೇವಿನ ಸೀರೆ ಕಾರ್ಯಕ್ರಮ ನೆರವೇರಿತು.
ಗುರುವಾರ ಬೆಳಗ್ಗೆ ಓಕುಳಿ ಹಾಗೂ ಸಂಜೆ ಹೂವಿನ ಅಲಂಕಾರದೊಂದಿಗೆ ದೇವಿಯ ರಾಜಬೀದಿ ಉತ್ಸವ ನಡೆಸಲಾಯಿತು. ದೇವಾಲಯದ ಸಮಿತಿ ಹಾಗೂ ಗ್ರಾಮಸ್ಥರು ರಥೋತ್ಸವಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ತೀರ್ಥಪ್ರಸಾದ, ಅನ್ನ ದಾನದ ವ್ಯವಸ್ಥೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.