5 ವರ್ಷ ಕುಮಾರಸ್ವಾಮಿಯೇ ಸಿಎಂ
Team Udayavani, Jun 2, 2018, 6:00 AM IST
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ನಿರ್ಧರಿಸುವ ಸಂದರ್ಭದಲ್ಲಿ ಮುಂದಿನ ಐದು ವರ್ಷ ಎಚ್.ಡಿ. ಕುಮಾರಸ್ವಾಮಿ ಅವರನ್ನೇ ಮುಖ್ಯಮಂತ್ರಿ ಯಾಗಿ ಮುಂದುವರಿಸಲು ಕಾಂಗ್ರೆಸ್ಸನ್ನು ಒಪ್ಪಿಸುವಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಯಶಸ್ವಿಯಾಗಿದ್ದಾರೆ.
ಶುಕ್ರವಾರ ಎರಡೂ ಪಕ್ಷಗಳ ಮಧ್ಯೆ ಖಾತೆಗಳ ಹಂಚಿಕೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ದೇವೇಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮತ್ತಿತರರು ಸಭೆ ನಡೆಸಿದರು. ಈ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಮಾತುಕತೆ ವೇಳೆ ಸರ್ಕಾರದ ಮಟ್ಟದಲ್ಲಿ ಆಗಿರುವ ಮೈತ್ರಿಯನ್ನು ಲೋಕಸಭೆ ಚುನಾವಣೆಯಲ್ಲೂ ಮುಂದುವರಿಸುವ ಬಗ್ಗೆ ವೇಣುಗೋಪಾಲ್ ಅವರು ದೇವೇಗೌಡರಲ್ಲಿ ಪ್ರಸ್ತಾಪಿಸಿದರು. ಇದೇ ಅವಕಾಶವನ್ನು ಬಳಸಿಕೊಂಡ ದೇವೇಗೌಡರು, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಕಾಂಗ್ರೆಸ್‌ನ ಸ್ಪಷ್ಟನೆ ಕೇಳಿದರು. ಮೈತ್ರಿ ಮುಂದುವರಿಸುವ ಮುನ್ನ ಮುಖ್ಯಮಂತ್ರಿ ಹುದ್ದೆ ಬಗ್ಗೆ ನಿರ್ಧರಿಸುವಂತೆ ಕಾಂಗ್ರೆಸ್‌ಗೆ ಸೂಚಿಸಿದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ, ವಿದೇಶದಲ್ಲಿರುವ ರಾಹುಲ್ ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಿದ ವೇಣುಗೋಪಾಲ್, ಸ್ವಲ್ಪ ಹೊತ್ತು ಮಾತನಾಡಿ ನಂತರ ದೇವೇಗೌಡರಿಗೆ ಫೋನ್ ಕೊಟ್ಟರು. ರಾಹುಲ್ ಜತೆ ಮಾತನಾಡಿದ ದೇವೇಗೌಡರು, ಮೈತ್ರಿ ಮುಂದುವರಿಸಲು ನಮ್ಮ ಅಭ್ಯಂತರವಿಲ್ಲ. ಆದರೆ, ಮುಖ್ಯಮಂತ್ರಿ ಹುದ್ದೆ ತಲಾ 30 ತಿಂಗಳು ಹಂಚಿಕೊಳ್ಳುವ ಬಗ್ಗೆ ನಿಮ್ಮ ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ. ಈ ರೀತಿಯಾದರೆ ಮೈತ್ರಿ ಮುಂದುವರಿಸುವುದು ಕಷ್ಟವಾಗಬಹುದೆಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಹೀಗಾಗಿ, ರಾಜ್ಯದಲ್ಲಿ ಬಿಜೆಪಿ ವಿರುದಟಛಿ ಹೋರಾಟ ಮಾಡಬೇಕಾದರೆ ಮೈತ್ರಿ ಅನಿವಾರ್ಯ ಎಂಬ ಕಾರಣಕ್ಕೆ ಮುಖ್ಯಮಂತ್ರಿಯಾಗಿ ಕುಮಾರ ಸ್ವಾಮಿ ಪೂರ್ಣಾವಧಿ ಮುಂದುವರಿಯಲು ರಾಹುಲ್ ಒಪ್ಪಿಗೆ ನೀಡಿದರು. ಇದಾದ ಬಳಿಕವೇ ದೇವೇಗೌಡರು ಮೈತ್ರಿಗೆ ಸಮ್ಮತಿಸಿದ್ದರು ಎಂದು ಮೂಲಗಳು ಹೇಳಿವೆ.
ಹೊಸ ಬಜೆಟ್ ಮಂಡನೆ
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೊಸದಾಗಿ ಬಜೆಟ್ ಮಂಡಿಸಲಿದ್ದಾರೆ. ಕಾಂಗ್ರೆಸ್ ಜತೆಗೂಡಿ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದರೂ ಹಿಂದಿನ ಸಿಎಂ ಸಿದ್ದರಾಮಯ್ಯ ಮಂಡಿಸಿದ್ದ 2018-19ನೇ ಸಾಲಿನ ಬಜೆಟ್‌ಗೆ ಬದಲಾಗಿ ಹೊಸ ಬಜೆಟ್ ಮಂಡಿಸಲು
ತೀರ್ಮಾನಿಸಿದ್ದಾರೆ. ಕುಮಾರಸ್ವಾಮಿಯವರೇ ಈ ಸರ್ಕಾರದಲ್ಲಿ ಹಣಕಾಸು ಸಚಿವರೂ ಆಗಲಿದ್ದು, ಅವರು ಮಂಡಿಸಲಿರುವ ಮೊದಲ ಬಜೆಟ್ ಸಹ ಇದಾಗಲಿದೆ. ಹೀಗಾಗಿ, ಬಜೆಟ್ ಬಗ್ಗೆ ಕುತೂಹಲ ಮೂಡಿದೆ.
ಡಾ.ಸುಬ್ರಮಣ್ಯ ಸಿಎಂ ಆರ್ಥಿಕ ಸಲಹೆಗಾರ: ನಿವೃತ್ತ ಐಎಎಸ್ ಅಧಿಕಾರಿ ಡಾ.ಎಸ್.ಸುಬ್ರಮಣ್ಯ ಅವರನ್ನು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಡಾ.ಸುಬ್ರಮಣ್ಯ ಅವರು ನಿವೃತ್ತಿ ನಂತರ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡು
ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಅಲ್ಲದೆ, ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪ್ರಣಾಳಿಕೆ ಸಿದಟಛಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೂ ಅವರ ಹೆಸರು ಪ್ರಸ್ತಾಪವಾಗಿತ್ತು. ಕೊನೇ ಗಳಿಗೆಯಲ್ಲಿ ಧರ್ಮೇಗೌಡರಿಗೆ
ಎಂಎಲ್‌ಸಿ ಟಿಕೆಟ್ ಲಭ್ಯವಾಗಿತ್ತು.
ಮುಖ್ಯಮಂತ್ರಿ ಸಭೆಗೆ ಮೊಬೈಲ್ ನಿಷೇಧ
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡೆಸುವ ಇಲಾಖಾ ಮುಖ್ಯಸ್ಥರ ಸಭೆಗಳಿಗೆ ಇನ್ನು ಮೊಬೈಲ್ ನಿಷೇಧ. ಇಲಾಖಾವಾರು ಅಧಿಕಾರಿಗಳ ಸಭೆಗಳಲ್ಲಿ ಅಧಿಕಾರಿಗಳು ಮೊಬೈಲ್ ಫೋನ್‌ಗಳಲ್ಲಿ ಸಂದೇಶ ನೋಡುವುದು, ರವಾನಿಸುವುದರಲ್ಲಿ ತೊಡಗಿರುವುದನ್ನು ಗಮನಿಸಿರುವ
ಮುಖ್ಯಮಂತ್ರಿಯವರು ಈ ಆದೇಶ ಹೊರಡಿಸಿದ್ದಾರೆ. ಇನ್ಮುಂದೆ ನಿಗದಿತ ಸಭೆಗೆ ಆಗಮಿಸುವ ಅಧಿಕಾರಿಗಳು ಕೊಠಡಿಯೊಳಗೆ ಮೊಬೈಲ್
ತರುವಂತಿಲ್ಲ. ಸಮನ್ವಯ ಅಧಿಕಾರಿಗಳ ಕೈಗೆ ಕೊಟ್ಟು ಒಳಗೆ ಬರಬೇಕು. ನಂತರ ವಾಪಸ್ ಪಡೆಯಬೇಕು ಎಂದು ಆದೇಶದಲ್ಲಿ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.