ಬೆಟ್ಟಂಪಾಡಿ ಶಾಲೆ ಕಟ್ಟಡ ದುರಸ್ತಿಗೆ ಮಕ್ಕಳ ಕೊರತೆ ನೆಪ!

Team Udayavani, Jun 2, 2018, 4:15 AM IST

school-1-6.jpg

ನಿಡ್ಪಳ್ಳಿ : ಸಮೂಹ ಸಂಪನ್ಮೂಲ ಕೇಂದ್ರವೂ ಇರುವ ಬೆಟ್ಟಂಪಾಡಿ ದ.ಕ. ಜಿ.ಪಂ. ಹಿ.ಪ್ರಾ. ಶಾಲೆಯ ಛಾವಣಿ ಗೆದ್ದಲು ಹಿಡಿದಿದ್ದು, ಪಕ್ಕಾಸು, ರೀಪು ಸಂಪೂರ್ಣ ಶಿಥಿಲಗೊಂಡಿವೆ. ಮಳೆಗಾಲದ ಅವಧಿಯಾಗಿದ್ದು, ಶಾಲೆಯೂ ಪುನಾರಂಭವಾಗಿದ್ದರಿಂದ ಛಾವಣಿಯ ತ್ವರಿತ ದುರಸ್ತಿ ಮಾಡಿಸಬೇಕಾಗಿದೆ. ಶಾಲೆ ಕಟ್ಟಡ ಬಹಳ ಹಳೆಯದಾಗಿದ್ದು, ದುರಸ್ತಿ ಮಾಡಿಸುವಂತೆ ಜನಪ್ರತಿನಿಧಿಗಳು ಹಾಗೂ ಇಲಾಖೆ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಮಾಡಿನ ಪಕ್ಕಾಸು ಮತ್ತು ರೀಪುಗಳು ಅಲ್ಲಲ್ಲಿ ತುಂಡಾಗಿ ಬೀಳುತ್ತಿದ್ದು, ರೀಪುಗಳು ಮುರಿದ ಜಾಗಕ್ಕೆ ಕಬ್ಬಿಣದ ಸರಳು ಇಟ್ಟು, ಹಂಚುಗಳು ಬೀಳದಂತೆ ನಿಲ್ಲಿಸಲಾಗಿದೆ. ಹಂಚುಗಳು ಮಕ್ಕಳ ತಲೆ ಮೇಲೆ ಬಿದ್ದರೆ ಏನು ಗತಿ? ಮಳೆ ಬರುವ ಸಂದರ್ಭದಲ್ಲಿ ಛಾವಣಿಯು ಸೋರುತ್ತಿದ್ದು, ಗೋಡೆಗಳಿಗೆ ಹಾನಿಯಾಗುವ ಸಂಭವವಿದೆ. ಕಟ್ಟಡ ದುರಸ್ತಿಗೆ ಮನವಿ ಸಲ್ಲಿಸಿದರೆ, ಮಕ್ಕಳ ಸಂಖ್ಯೆ ಎಷ್ಟಿದೆ? ಮಕ್ಕಳ ಸಂಖ್ಯೆ ಕಡಿಮೆ ಇದ್ದರೆ ಹೊಸ ಕಟ್ಟಡದ ಅಗತ್ಯವೇನಿದೆ? ಮೊದಲು ಮಕ್ಕಳ ಸಂಖ್ಯೆ ಹೆಚ್ಚಿಸಲು ಪ್ರಯತ್ನಿಸಿ ಎಂದು ಅಧಿಕಾರಿಗಳು ನೆಪ ಹೇಳುತ್ತಾರೆ. ಇರುವ ಮಕ್ಕಳ ಸುರಕ್ಷತೆಗಾಗಿ ಉಳಿಯಲು ಕಟ್ಟಡ ದುರಸ್ತಿ ಆಗಬೇಕು ಎನ್ನುವುದು ಎಸ್‌.ಡಿ.ಎಂ.ಸಿ. ಸದಸ್ಯರ ಕಳಕಳಿ.

ಹಳೆ ಕಟ್ಟಡ ಕೆಡವಲು ಮನವಿ

ಬಹಳ ವರ್ಷಗಳ ಹಿಂದೆ ಕಟ್ಟಿರುವ ಮಣ್ಣಿನ ಗೋಡೆಯ ಉದ್ದನೆಯ ಒಂದು ಕಟ್ಟಡವಿದೆ. ಅದನ್ನು ಕೆಡವು ಶಾಲೆಗೆ ಹೊಸ ರೂಪ ನೀಡುವಂತೆ ಮೂರು ವರ್ಷಗಳ ಹಿಂದೆಯೇ ಶಿಕ್ಷಣ ಇಲಾಖೆಗೆ ಬರೆಯಲಾಗಿದೆ. ಈವರೆಗೂ ಕಾರ್ಯಗತವಾಗಿಲ್ಲ ಎಂಬುದೇ ಬೇಸರದ ಸಂಗತಿ ಎಂದು ಅಧ್ಯಕ್ಷರು ಹೇಳುತ್ತಿದ್ದಾರೆ.

ದುರಸ್ತಿಗೆ ಬೇಕು 10 ಲಕ್ಷ ರೂ.
ಹಳೆಯ ಶಾಲೆಯಾಗಿರುವ ಕಾರಣ ಇಲ್ಲಿ ಈವರೆಗೂ ಆವರಣ ಗೋಡೆಯಿಲ್ಲ. ಶಾಲೆಗೆ ಹೊಂದಿಕೊಂಡೇ ಖಾಸಗಿ ರಸ್ತೆ ಹಾದು ಹೋಗುತ್ತದೆ. ಹೀಗಾಗಿ, ಶಾಲೆ ಜಾಗಕ್ಕೆ ಗೋಡೆ ನಿರ್ಮಿಸಬೇಕಿದೆ. ಆಟದ ಮೈದಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಿದ್ದಾರೆ. ಶೌಚಾಲಯವಿದೆ, ಶಿಕ್ಷಕರೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಆದರೆ, ರಂಗಮಂದಿರ ಮುರುಕಲಾಗಿದೆ. ಶಾಲೆಗೆ ಬರುವ ರಸ್ತೆಗೆ ಕಾಂಕ್ರೀಟ್‌ ಕಾಮಗಾರಿಯೂ ಅರ್ಧದಲ್ಲೇ ನಿಲ್ಲಿಸಿದ್ದು, ಪೂರ್ತಿಯಾಗಿಲ್ಲ. ಒಟ್ಟು ದುರಸ್ತಿಗೆ 10 ಲಕ್ಷ ರೂ. ಖರ್ಚಾಗುತ್ತದೆ ಎಂದು ಅಂದಾಜಿಸಲಾಗಿದೆ. 
– ಜತ್ತಪ್ಪ ಗೌಡ ಬಳ್ಳಿತ್ತಡ್ಡ, ಎಸ್‌ಡಿಎಂಸಿ ಅಧ್ಯಕ್ಷರು

ದುರಸ್ತಿಗೆ ಪ್ರಯತ್ನ
ಶಾಲೆಯ ಸ್ಥಿತಿಗತಿ ಬಗ್ಗೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷರು ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ದುರಸ್ತಿಗಾಗಿ ಒತ್ತಡ ತರಲಾಗಿದೆ. ಸಕಾರಾತ್ಮಕ ಸ್ಪಂದನೆ ದೊರಕಿದ್ದು, ದುರಸ್ತಿಗೆ ಪ್ರಯತ್ನಿಸಲಾಗುವುದು. 
– ಜಗನ್ನಾಥ ಶೆಟ್ಟಿ ಕೊಮ್ಮಂಡ, ಸದಸ್ಯರು, ಬೆಟ್ಟಂಪಾಡಿ ಗ್ರಾ.ಪಂ.

— ಗಂಗಾಧರ ಸಿ.ಎಚ್‌.

ಟಾಪ್ ನ್ಯೂಸ್

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.